ತಿಂಗಳೋಳಗೆ ಪಿ, ಎಂ, ಆದರ್ಶಗ್ರಾಮ ಯೋಜನೆಯನ್ನು ಪೂರ್ಣಗೊಳಿಸಿ ಜಿಲ್ಲಾಧಿಕಾರಿಗಳಿಂದ ಅಧಿಕಾರಿಗಳಿಗೆ ಖಡಕ್ ಸೂಚನೆ…!!!

Listen to this article

ವರದಿ. ಮಂಜುನಾಥ್, ಎಚ್

ತಿಂಗಳೊಳಗೆ ಪಿ.ಎಂ.ಆದರ್ಶಗ್ರಾಮ ಯೋಜನೆ ಆಯ್ಕೆ ಪೂರ್ಣಗೊಳಿಸಿ ಅಧಿಕಾರಿಗಳಿಗೆ ಡಿಸಿ ಖಡಕ್ ಸೂಚನೆ
ಚಿತ್ರದುರ್ಗ, ಫೆಬ್ರುವರಿ17:
ಪ್ರಧಾನಮಂತ್ರಿ ಆದರ್ಶಗ್ರಾಮ ಯೋಜನೆಯಡಿ ಆಯ್ಕೆಯಾಗಿರುವ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಈ ತಿಂಗಳೊಳಗೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಖಡಕ್ ಸೂಚನೆ ನೀಡಿದರು.
ನಗರದ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾಗಿರುವ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡಲು ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾಗಿರುವ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿದ್ದು, ಅಧಿಕಾರಿಗಳು ಸರ್ಕಾರ ನೀಡಿರುವ ಅನುದಾನವನ್ನು ಸದುಪಯೋಗ ಪಡಿಸಿಕೊಂಡು ಕಾಮಗಾರಿಗಳನ್ನು ತಮಗೆ ನೀಡಿದ ಸಮಯಾವಕಾಶದಲ್ಲಿ ಪೂರ್ಣಗೊಳಿಸಬೇಕು ಎಂದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಮತಾ ಮಾತನಾಡಿ, ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ಕೇಂದ್ರ ಪುರಸ್ಕøತ ಯೋಜನೆಯಾದ ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯಲ್ಲಿ 2018-19ನೇ ಸಾಲಿನಲ್ಲಿ ಶೇ.50ಕ್ಕಿಂತ ಹೆಚ್ಚಿನ ಜನಸಂಖ್ಯೆ ಇರುವ ಪರಿಶಿಷ್ಠ ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
2018-19ನೇ ಸಾಲಿಗೆ 7 ಗ್ರಾಮಗಳನ್ನು ಹಾಗೂ 2016-17ನೇ ಸಾಲಿನಲ್ಲಿ ಆಯ್ಕೆಯಾಗಿದ್ದ 40 ಗ್ರಾಮಗಳ ಪೈಕಿ ಹೆಚ್ಚುವರಿಯಾಗಿ 3 ಗ್ರಾಮಗಳನ್ನು ಮರು ಆಯ್ಕೆ ಮಾಡಲಾಗಿದೆ. ಹೊಸದಾಗಿ ಆಯ್ಕೆಯಾಗಿರುವ 7 ಗ್ರಾಮಗಳಿಗೆ ಸಂಬಂಧಿಸಿದಂತೆ ಪ್ರತಿ ಗ್ರಾಮದಲ್ಲಿ ರೂ.40.00 ಲಕ್ಷಗಳ ಅಂದಾಜು ವೆಚ್ಚದಲ್ಲಿ ಹಾಗೂ ಹೆಚ್ಚುವರಿಯಾಗಿ ಆಯ್ಕೆಯಾಗಿರುವ 3 ಗ್ರಾಮಗಳಲ್ಲಿ ಪ್ರತಿ ಗ್ರಾಮಕ್ಕೆ ರೂ.9.50 ಲಕ್ಷಗಳ ಅಂದಾಜು ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
2018-19ನೇ ಸಾಲಿನಲ್ಲಿ ಹೊಳಲ್ಕೆರೆ ತಾಲ್ಲೂಕಿನ ಕಾಲಘಟ್ಟ, ಹಿರಿಯೂರು ತಾಲ್ಲೂಕಿನ ಭರಮಗಿರಿ, ಮೊಳಕಾಲ್ಮೂರು ತಾಲ್ಲೂಕಿನ ಚಿಕ್ಕೇರಹಳ್ಳಿ ಗ್ರಾಮಗಳು ಹೆಚ್ಚುವರಿಯಾಗಿ ಆದರ್ಶ ಗ್ರಾಮ ಯೋಜನೆಯಡಿ ಮರು ಆಯ್ಕೆ ಆಗಿವೆ.
2019-20ನೇ ಸಾಲಿಗೆ ಚಿತ್ರದುರ್ಗ, ಚಳ್ಳಕೆರೆ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು ತಾಲ್ಲೂಕಿನ 14 ಗ್ರಾಮಗಳು ಆಯ್ಕೆ ಆಗಿದ್ದು, ಪ್ರಸ್ತುತ 10 ಗ್ರಾಮಗಳಿಗೆ ಆದೇಶ ನೀಡಲಾಗಿದೆ. ಶಾಲಾ ಕೊಠಡಿ ನಿರ್ಮಾಣ, ಹೊಸ ಅಂಗನವಾಡಿ ಕಟ್ಟಡ ನಿರ್ಮಾಣ, ಅಂಗನವಾಡಿ ಕಟ್ಟಡಗಳ ದುರಸ್ಥಿ ಕಾರ್ಯ, ಸಿ.ಸಿ.ರಸ್ತೆ ಮತ್ತು ಬಾಕ್ಸ್ ಚರಂಡಿ ನಿರ್ಮಾಣ, ಸಮುದಾಯ ಭವನ, ಶುದ್ಧ ಕುಡಿಯುವ ನೀರಿನ ಘಟಕ, ಬಯಲು ರಂಗಮಂದಿರ ನಿರ್ಮಾಣ, ಹೈಮಾಸ್ಕ್ ದೀಪ ಅಳವಡಿಕೆ, ಕ್ರೀಡಾ ಸಾಮಗ್ರಿಗಳು ಸೇರಿದಂತೆ ಇತರೆ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ನೀಡಲಾಯಿತು.
ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯ ಪ್ರಗತಿ ವಿವರ:
ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಲ್ಲಿ ಶೇ 100 ರಷ್ಟು ಪ್ರಗತಿ ಸಾಧಿಸದ ಇಲಾಖೆಗಳು ಫೆಬ್ರವರಿ ತಿಂಗಳ ಅಂತ್ಯದ ಒಳಗೆ ಪೂರ್ಣ ಪ್ರಮಾಣದ ಪ್ರಗತಿಯನ್ನು ಸಾಧಿಸಬೇಕು ಎಂದು ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ 2020-2021ನೇ ಸಾಲಿನ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಲ್ಲಿ ಜನವರಿ 2021 ರ ಅಂತ್ಯಕ್ಕೆ ಅಭಿವೃದ್ಧಿ ಇಲಾಖೆಗೆ ಒದಗಿಸಿರುವ ಅನುದಾನದಲ್ಲಿ ಇಲಾಖೆವಾರು ಪ್ರಗತಿಯನ್ನು ಪರಿಶೀಲಿಸಿ ಹಂಚಿಕೆಯಾದ ಅನುದಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಿರುವ ಅನುದಾನವನ್ನು ಶೇ. 100 ರಷ್ಟು ಅನುದಾನ ಪ್ರಗತಿಯಾಗದೇ ಬಾಕಿ ಇರುವ ಇಲಾಖೆಗಳು ಪ್ರಗತಿ ಸಾಧಿಸಲು ತಿಂಗಳ ಅಂತ್ಯದವರೆಗೆ ಗಡುವು ನೀಡಲಾಗುವುದು ಎಂದು ಹೇಳಿದರು.
ಕೃಷಿ ಇಲಾಖೆಯಲ್ಲಿ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಲ್ಲಿ ಎಸ್.ಸಿಗೆ ಶೇ.85 ಮತ್ತು ಎಸ್.ಟಿಗೆ ಶೇ. 100 ಅನುದಾನ ಹಂಚಿಕೆಯಾಗಿದೆ. ಅದರಲ್ಲಿ ಶೇ.95 ಮತ್ತು ಶೇ. 99 ರಷ್ಟು ಬಿಡುಗಡೆಯಾದ ಅನುದಾನದಲ್ಲಿ ವೆಚ್ಚವಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಎಸ್.ಸಿ.ಪಿ.ಗೆ ಶೇ.66, ಶೇ. 65 ರಷ್ಟು ಟಿ.ಎಸ್.ಪಿ. ಅನುದಾನ ಹಂಚಿಕೆಯಾಗಿದೆ, ಅದರಲ್ಲಿ ಶೇ. 95, ಶೇ. 94 ರಷ್ಟು ವೆಚ್ಚವಾಗಿದೆ. ಸಣ್ಣ ನೀರಾವರಿ ಇಲಾಖೆಗೆ ಎಸ್.ಸಿಗೆ ಶೇ.100 ಎಸ್.ಟಿಗೆ ಶೇ.100 ಅನುದಾನ ಹಂಚಿಕೆಯಾಗಿದ್ದು, ಶೇ. 92% ಮತ್ತು ಶೇ.42 ವೆಚ್ಚವಾಗಿದೆ. ಲೋಕೊಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಗೆ ಎಸ್.ಸಿ.ಪಿ.ಗೆ ಶೇ.48, ಟಿ.ಎಸ್.ಪಿ.ಗೆ ಶೇ.50ರಷ್ಟು ಅನುದಾನ ಹಂಚಿಕೆಯಾಗಿದೆ, ಅದರಲ್ಲಿ ಶೇ. 61 ಮತ್ತು ಶೇ. 76 ವೆಚ್ಚವಾಗಿದೆ. ರೇಷ್ಮೆ ಇಲಾಖೆಗೆ ಎಸ್.ಸಿ.ಪಿ.ಗೆ ಶೇ. 73 ಮತ್ತು ಟಿ.ಎಸ್.ಪಿ.ಗೆ ಶೇ.100 ಅನುದಾನ ಹಂಚಿಕೆಯಾಗಿದ್ದು, ಶೇ.36 ಹಾಗೂ ಶೇ.54 ರಷ್ಟು ವೆಚ್ಚವಾಗಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಶೇ. 64 ಅನುದಾನ ಹಂಚಿಕೆಯಾಗಿದ್ದು, ಶೇ.34ರಷ್ಟು ವೆಚ್ಚವಾಗಿದೆ. ಹಾಗೂ ತೋಟಗಾರಿಕೆ ಇಲಾಖೆಗೆ ಎಸ್.ಸಿ.ಪಿ.ಗೆ ಶೇ.38 ಮತ್ತು ಟಿ.ಎಸ್.ಪಿ.ಗೆ ಶೇ. 30 ಅನುದಾನ ಹಂಚಿಕೆಯಾಗಿದ್ದು, ಅದರಲ್ಲಿ ಶೇ.27, ಶೇ. 34 ರಷ್ಟು ಬಿಡುಗಡೆಯಾದ ಅನುದಾನ ವೆಚ್ಚವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಕರಾದ ಮಮತ ಅವರು ಸಭೆಗೆ ತಿಳಿಸಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸೇರಿದಂತೆ ಉಪಸ್ಥಿತರಿದ್ದರು.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend