ಚಿತ್ರದುರ್ಗದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣವಾಗಬೇಕು.! ರೈತ ಸಂಘದ ರಾಜ್ಯ ಉಪಾಧ್ಯಕ್ಷ ಬಸವರೆಡ್ಡಿ.!

Listen to this article

ವರದಿ. ಮಂಜುನಾಥ್, ಎಚ್

ಚಿತ್ರದುರ್ಗ: ಮೊಳಕಾಲ್ಮುರು: ಚಿತ್ರದುರ್ಗದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣವಾಗಬೇಕು, ಸರ್ಕಾರ ಜಿಲ್ಲೆಯ ಜನರ ತಾಳ್ಮೆ ಪರೀಕ್ಷಿಸುವುದು ತರವಲ್ಲ- ರೈತ ಮುಖಂಡ ಬಸವರೆಡ್ಡಿ.! ಮುಂಬರುವ ರಾಜ್ಯ ಬಜೆಟ್‌ನಲ್ಲಿ ಕನಿಷ್ಠ 100 ಕೋಟಿ ರು.ಅನುದಾನ ಕಾಯ್ದಿರಿಸುವಂತೆ ಆಗ್ರಹಿಸಿ ಜನಪರ ಸಂಘಟನೆಗಳು ಬುಧವಾರ
ಮೊಳಕಾಲ್ಮೂರಿನಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದವು. ಕೆಇಬಿ ವೃತ್ತದಿಂದ ಮೆರವಣಿಗೆಯಲ್ಲಿ ಬಂದ ರೈತ ಸಂಘ ಹಾಗೂ ಹಸಿರು ಸೇನೆ, ಕರ್ನಾಟಕ ದಲಿತ ಸಂಘರ್ಷ ಸಮಿತಿ, ಅಖಿಲ ಭಾರತ ಕಿಸಾನ್ ಸಭಾ ಸೇರಿ ವಿವಿಧ ಪ್ರಗತಿ ಪರ ಸಂಘಟನೆಗಳ ಕಾರ್ಯ ಕರ್ತರು ತಹಸೀಲ್ದಾರ್ ಕಚೇರಿಗೆ ತೆರಳಿ ಸಭೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಚಿತ್ರದುರ್ಗ ಜಿಲ್ಲೆ ರಾಜ್ಯದಲ್ಲೇ ಹಿಂದುಳಿದ ಪ್ರದೇಶ ವಾಗಿದೆ.ಯಾವುದೇ ಕೈಗಾರಿಕೆಗಳಿಲ್ಲದೆ ಬಹುತೇಕಜನ ಕೃಷಿಯನ್ನೇ ನಂಬಿಕೊಂಡು ಬದುಕುತ್ತಿದ್ದಾರೆ. ಹಿಂದುಳಿದ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಬೇಕೆನ್ನುವುದು ಬಹುದಿನದ ಬೇಡಿಕೆಯಾಗಿದ್ದು, ಈಗಾಗಲೆ ಸೂಕ್ತ ಜಾಗ ಕಾಯ್ದಿರಿಸಿ ನೋಂದಣಿ ಮಾಡಲಾಗಿದೆ. ವಾಸ್ತವಾಂಶ ಹೀಗಿದ್ದರೂ ರಾಜ್ಯ ಸರ್ಕಾರ ಮೆಡಿಕಲ್ ಕಾಲೇಜು ಪ್ರಾರಂಭಕ್ಕೆ ಸೂಕ್ತ ಅನುದಾನ ನೀಡದೆ ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೆಡಿಕಲ್ ಕಾಲೇಜು ಪ್ರಾರಂಭಕ್ಕೆ 50 ಕೋಟಿರು. ಅನುದಾನವನ್ನು ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ, ವೈದ್ಯಕೀಯ ಸಚಿವ ಡಾ.ಸುಧಾಕರ್ ಜಿಲ್ಲೆಗೆ ಆಗಮಿಸಿ ಮೆಡಿಕಲ್ ಕಾಲೇಜಿಗೆ ನೋಂದಣಿಯಾಗಿರುವ ಜಾಗವನ್ನು ಪರಿಶೀಲನೆ ನಡೆಸಿದ್ದರು. ಆದರೆ, ಇದೇ ಸಚಿವರು ಕಳೆದ ವಿಧಾನಸಭೆ ಅಧಿವೇಶನದಲ್ಲಿ ಚಿತ್ರದುರ್ಗದಲ್ಲಿ ಮೆಡಿಕಲ್ ಕಾಲೇಜು ಆರಂಭಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲವೆಂದು ಹೇಳಿಕೆ ನೀಡುವುದರ ಮೂಲಕ ಬಯಲು ಸೀಮೆ ಜನರ ಆಸೆಗೆ ತಣ್ಣೀರು ಎರಚಿದ್ದಾರೆ. ರಾಜ್ಯ ಸರ್ಕಾರದ ಭರವಸೆ ಧೋಬಾ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮೆಡಿಕಲ್ ಕಾಲೇಜಿಗಾಗಿ ಜಿಲ್ಲೆಯಲ್ಲಿ ಹಲವಾರು ಪ್ರಗತಿ ಪರ ಸಂಘಟನೆಗಳು ಅನೇಕ ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರ ಪರಿಣಾಮ ಈ ಹಿಂದಿನ ಸರ್ಕಾರ ಮೆಡಿಕಲ್ ಕಾಲೇಜು ಆರಂಭಕ್ಕೆ ಹಸಿರು ನಿಶಾನೆ. ನವಾಗಿಲ್ಲ. ಸರ್ಕಾರ ವಿಳಂಬ ಧೋರಣೆಯಿಂದಾಗಿ ಮೆಡಿಕಲ್ ಕಾಲೇಜು ಆರಂಭ ನೆನೆಗುದಿಗೆ ಬೀಳಲು ಕಾರಣವಾಗಿದೆ ಎಂದು ಆರೋಪಿಸಿದರು. ಮುಂಬರುವರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕನಿಷ್ಠ 100 ಕೋಟಿ ರು. ಅನುದಾನವನ್ನು ಮಡಿಕಲ್ ಕಾಲೇಜಿಗೆ ಕಾಯ್ದಿರಿಸಬೇಕು. ಜಿಲ್ಲೆಯ ಶಾಸಕರು ಕಾದಿದ್ದು, ಅನುದಾನ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಮೆಡಿಕಲ್ ಕಾಲೇಜು ಧೋಬಾ ಭರವಸೆಯಾದರೆ ಜಿಲ್ಲೆಯ ಜನರು ಜನಪ್ರತಿನಿಧಿಗಳ ವಿರುದ್ದ ಉಗ್ರ ಹೋರಾಟ ನಡೆಸುವರೆಂದು ಬಸವರೆಡ್ಡಿ ಎಚ್ಚರಿಸಿದರು. ರೈತ ಸಂಘದ ತಾಲೂಕು ಅಧ್ಯಕ್ಷ ಬೆಳಗಲ್‌ ಈಶ್ವರಯ್ಯಸ್ವಾಮಿ, ಮರಹಳ್ಳಿ ರವಿಕುಮಾರ್, ದಸಸ ತಾಲೂಕು ಸಂಚಾಲಕ ಕೊಂಡಾಪುರ ಪರಮೇಶ, ಗುಂಡ್ಲುರು ತಿಮ್ಮಪ್ಪ, ಕನಕ ಶಿವಮೂರ್ತಿ, ಡಿ.ಬಿ.ಕೃಷ್ಣಮೂರ್ತಿ, ರಾಮಚಂದ್ರಪ್ಪ ನೀಲಪ್ಪ, ದಪಡ್ಡ ಪಾಪಯ್ಯ, ಜಯಮ್ಮ, ನಾಗಸಮುದ್ರ ಮರಿಸ್ವಾಮಿ, ಪಿ.ಟಿ.ನಿಂಗಣ್ಣ ಸೂರಮ್ಮನಹಳ್ಳಿ ರಾಜಣ್ಣ, ಬಸವರಾಜ, ಕೆ.ಚಂದ್ರಣ್ಣ ವೀರೇಶ, ಹೇಮಣ್ಣ ಬಸಣ್ಣ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend