ಜಿಲ್ಲಾ ಕ್ರೀಡಾಶಾಲೆಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ

Listen to this article

ವರದಿ. ಶಶಿಕುಮಾರ್ ಚಳ್ಳಕೆರೆ

ಜಿಲ್ಲಾ ಕ್ರೀಡಾಶಾಲೆಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
*****
ಚಿತ್ರದುರ್ಗ, ಮಾರ್ಚ್26:
ಚಿತ್ರದುರ್ಗ ನಗರದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದ ಕ್ರೀಡಾ ವಸತಿ ಶಾಲೆಗೆ ಅಥ್ಲೆಟಿಕ್ಸ್ ಮತ್ತು ವಾಲಿಬಾಲ್ ಕ್ರೀಡೆಗಳಲ್ಲಿ 2021-22ನೇ  ಸಾಲಿಗೆ ಪ್ರತಿಭಾವಂತ  ಬಾಲಕ ಬಾಲಕಿಯರನ್ನು ಗುರುತಿಸಿ ಕ್ರೀಡಾಶಾಲೆಗೆ ಆಯ್ಕೆ ಮಾಡುವ ಪ್ರಕ್ರಿಯೆ ನಡೆಸಲಾಗುವುದು.
ಚಿತ್ರದುರ್ಗದಲ್ಲಿ ಜಿಲ್ಲಾಮಟ್ಟದ ಆಯ್ಕೆ ಪ್ರಕ್ರಿಯೆಯನ್ನು ಮಾರ್ಚ್ 26 ರಿಂದ 28ರವರೆಗೆ ಬೆಳಿಗ್ಗೆ 10 ಗಂಟೆಯಿಂದ ನಗರದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.   ಈ ಆಯ್ಕೆ ಪ್ರಕ್ರಿಯೆಯಲ್ಲಿ  ಚಿತ್ರದುರ್ಗ ಜಿಲ್ಲೆಯ ಎಲ್ಲ ತಾಲ್ಲೂಕುಗಳಿಂದ ಆಸಕ್ತ ಕ್ರೀಡಾಪಾಟುಗಳು ಭಾಗವಾಹಿಸಬಹುದು.
ಆಯ್ಕೆಗೊಂಡ ಕ್ರೀಡಾಪಾಟುಗಳಿಗೆ ಪ್ರತಿನಿತ್ಯ ಇಲಾಖೆಯಿಂದ ಉಚಿತ ಪೌಷ್ಟಿಕ ಆಹಾರ, ವೈದ್ಯಕೀಯ ಸೌಲಭ್ಯ, ಟ್ಯೂಷನ್ ವ್ಯವಸ್ಥೆ, ನುರಿತ ಕ್ರೀಡಾ ತರಬೇತಿದಾರರಿಂದ ವೈಜ್ಞಾನಿಕ ತರಬೇತಿಯನ್ನು ನೀಡಲಾಗುವುದು.
ಅರ್ಹತೆ: ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 4ನೇ ತರಗತಿ ಓದುತ್ತಿದ್ದು 140 ರಿಂದ 145 ಸೆ.ಮೀ ಎತ್ತರ ಇರಬೇಕು. 2021 ರ ಜೂನ್ 1 ಕ್ಕೆ 10 ವರ್ಷ 11 ವರ್ಷ ಮೀರಿದ ಬಾಲಕ ಬಾಲಕಿಯರು  ಆಯ್ಕೆಯಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ದೈಹಿಕ ಸಾಮಥ್ರ್ಯ, ಶಕ್ತಿ, ಚಾಕಚಕ್ಯತೆ, ಸಹಿಷ್ಣುತೆ, ಕುಶಲತೆ, ವೇಗ ಹಾಗೂ ಆಯಾ ಕ್ರೀಡೆಗೆ ಅಗತ್ಯವಿರುವ ಎತ್ತರ ಪರೀಕ್ಷಿಸಿ ಒಟ್ಟಾರೆ ಶೇ.50 ಕ್ಕೂ ಹೆಚ್ಚು ಅಂಕಗಳನ್ನು ಪಡೆದವರಿಗೆ ಯೋಗ್ಯತಾನುಸಾರವಾಗಿ ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-235635 ಹಾಗೂ ವಾಲಿಬಾಲ್ ತರಬೇತಿದಾರ ಮಹಮ್ಮದ್ ಮುಹೀಬುಲ್ಲಾ  9611673475ಗೆ ಸಂಪರ್ಕಿಸಬಹುದು ಎಂದು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend