ಮತ ಎಣಿಕೆ ಕೇಂದ್ರಕ್ಕೆ ಮೊಬೈಲ್ ಅಥವಾ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದನ್ನು ನಿಷೇಧಿಸಲಾಗಿದೆ…!!!

Listen to this article

ಮತ ಎಣಿಕೆ ಕೇಂದ್ರಕ್ಕೆ ಮೊಬೈಲ್ ಅಥವಾ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದನ್ನು ನಿಷೇಧಿಸಲಾಗಿದೆ. ದೇಹಕ್ಕೆ ಅಪಾಯವನ್ನು ಉಂಟುಮಾಡಬಹುದಾದ ಯಾವುದೇ ಮಾರಕಾಸ್ತ್ರಗಳನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ. ಅಣುಕು ಶವಗಳ ಪ್ರದರ್ಶನ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳನ್ನು ಪ್ರದರ್ಶನ ಮಾಡುವುದನ್ನು ಪಟಾಕಿ ಸಿಡಿಸಿ ಸಂಭ್ರಮಿಸುವುದನ್ನು ನಿಷೇಧಿಸಲಾಗಿದೆ. ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ. ಈ ಆದೇಶ ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 188ರ ಪ್ರಕಾರ ಕ್ರಮ ಜರುಗಿಸಲಾವುದು ಎಂದು ತಿಳಿಸಿದ್ದಾರೆ.
ಮದ್ಯಮಾರಾಟ ನಿಷೇಧ: ಕರ್ನಾಟಕ ವಿಧಾನ ಪರಿಷತ್ ಚಿತ್ರದುರ್ಗ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಸಾರ್ವತ್ರಿಕ ಚುನಾವಣೆ-2021ರ ಸಂಬಂಧ ಡಿ.14ರಂದು ಮತ ಎಣಿಕೆ ನಡೆಯಲಿದ್ದು, ಜಿಲ್ಲಾ ವ್ಯಾಪ್ತಿಯೊಳಗೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಲ್ಲೆಯಾದ್ಯಂತ ಡಿ.13ರ  ಸಂಜೆ 6 ಗಂಟೆಯಿಂದ ಡಿ.14 ರ ಮಧ್ಯರಾತ್ರಿ 12 ಗಂಟೆಯವರೆಗೆ ಎಲ್ಲಾ ಬಗೆಯ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಯಾವುದೇ ತರಹದ ಬಾರ್ ಅಂಡ್ ರೆಸ್ಟೋರೆಂಟ್, ಕ್ಲಬ್ ಮತ್ತು ಹೋಟೆಲ್, ಡಾಬಾಗಳಲ್ಲಿ ಮದ್ಯ ಸಾಗಾಣಿಕೆ, ಶೇಖರಣೆ ಮತ್ತು ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶಿಸಿದ್ದಾರೆ.
ಸಂತೆ, ಜಾತ್ರೆ ನಿಷೇಧ: ಕರ್ನಾಟಕ ವಿಧಾನ ಪರಿಷತ್ತು ಚಿತ್ರದುರ್ಗ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಸಾರ್ವತ್ರಿಕ ಚುನಾವಣೆ-2021ರ ಹಿನ್ನಲೆಯಲ್ಲಿ ಡಿ.14ರಂದು ಮತ ಎಣಿಕೆ ದಿನದಂದು ಬೆಳಿಗ್ಗೆ 5 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯೊಳಗೆ ಬರುವ ಎಲ್ಲಾ ಪ್ರದೇಶಗಳಲ್ಲಿ ಸಂತೆ ಮತ್ತು ಎಲ್ಲಾ ತರಹದ ಜಾತ್ರೆ ಹಾಗೂ ಉತ್ಸವಗಳನ್ನು ನಡೆಸದಂತೆ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶಿಸಿದ್ದಾರೆ..

ವರದಿ.ಗಿರೀಜಾ, ಬೆಳ್ಳಕಟ್ಟೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend