ಅಂಬಿಗರ ಚೌಡಯ್ಯ ಹಾಗೂ ದಾಸೋಹ ದಿನಾಚರಣೆ ಶೋಷಿತರ ಪರ ಹೋರಾಡಿದ ಅಂಬಿಗರ ಚೌಡಯ್ಯ…!!!

Listen to this article

ಅಂಬಿಗರ ಚೌಡಯ್ಯ ಹಾಗೂ ದಾಸೋಹ ದಿನಾಚರಣೆ
ಶೋಷಿತರ ಪರ ಹೋರಾಡಿದ ಅಂಬಿಗರ ಚೌಡಯ್ಯ
ಚಿತ್ರದುರ್ಗ,ಜನವರಿ21:
ನಿಜಶರಣ ಅಂಬಿಗರ ಚೌಡಯ್ಯ ಅವರು ಶೋಷಿತರ ಪರವಾಗಿ ಹೋರಾಟ ಮಾಡಿದವರು ಎಂದು ಗಂಗಾಮಾತಸ್ಥ ಸಮಾಜದ ಜಿಲ್ಲಾ ಅಧ್ಯಕ್ಷರಾದ ಎಚ್.ಡಿ.ರಂಗಯ್ಯ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂಬಿಗರ ಚೌಡಯ್ಯ ಹಾಗೂ ದಾಸೋಹ ದಿನಾಚರಣೆಯಲ್ಲಿ ಅಂಬಿಗರ ಚೌಡಯ್ಯ ಹಾಗೂ ಸಿದ್ದಗಂಗಾ ಶ್ರೀಡಾ.ಶಿವಕುಮಾರಸ್ವಾಮೀಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ನೇರ, ನಿಷ್ಠುರ, ನಡೆ, ನುಡಿಗಳಿಂದ ಸಮಾಜದಲ್ಲಿ ಅಸ್ಪøಶ್ಯತೆ ಹಾಗೂ ಮೂಢನಂಬಿಕೆಯನ್ನು ಹೋಗಲಾಡಿಸಲು ಶ್ರಮಿಸಿದ ಶ್ರೇಷ್ಟ ವಚನಕಾರ. ವಚನಗಳ ಮೂಲಕ ಸಮಾಜ ತಿದ್ದುವ ಕೆಲಸ ಮಾಡಿದ್ದಾರೆ ಎಂದು ಅಭಿಪ್ರಾಯಟ್ಟರು.
ಯಾರಿಗೂ ಹೆದರದೆ, ಅಳುಕದೇ ಸಮಾಜದ ಅಂಕುಡೊಂಕುಗಳನ್ನು ತಿದ್ದಿದ್ದಾರೆ. ಬಸವಣ್ಣನವರೇ ಹೇಳುವಂತೆ ನಿಜಶರಣ ಅಂಬಿಗರ ಚೌಡಯ್ಯ ಹಾಗೂ ಮಾಡಿವಾಳ ಮಾಚಿದೇವ ನನ್ನ ಎರಡು ಕಣ್ಣುಗಳಿದ್ದಂತೆ ಎಂದು ಹೇಳಿದ್ದಾರೆ ಎಂದರು.
ಅಂಬಿಗರ ಚೌಡಯ್ಯ ಅವರ ಜಯಂತಿಯನ್ನು ಕಳೆದ ನಾಲ್ಕೈದು ವರ್ಷಗಳಿಂದ ಅದ್ಧೂರಿಯಾಗಿ ಆಚರಿಸಲಾಯಿತು. ಕೋವಿಡ್-19ರ ಮೂರನೇ ಅಲೆಯ ಹಿನ್ನಲೆಯಲ್ಲಿ ಅನಿವಾರ್ಯವಾಗಿ ಸರಳವಾಗಿ ಆಚರಣೆ ಮಾಡಲಾಗುತ್ತಿದೆ ಎಂದರು.
ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾತನಾಡಿ, ಬಸವಣ್ಣನವರ ಸಮಕಾಲೀನರಾದ ನಿಜಶರಣ ಅಂಬಿಗರ ಚೌಡಯ್ಯನವರು ಆದರ್ಶಮಯವಾದ ಜೀವನಶೈಲಿಯನ್ನು ವಚನಗಳ ಮೂಲಕ ನಮಗೆ ತೋರಿಸಿಕೊಟ್ಟಿದ್ದಾರೆ. ಜಯಂತಿಗಳು ಕೇವಲ ಆಚರಣೆಗೆ ಸೀಮಿತವಾಗದೇ ಮಹನೀಯರು ತೋರಿದ ಮಾರ್ಗದರ್ಶನದಲ್ಲಿ ಜೀವನ ನಡೆಸಿದರೆ ಮಾತ್ರ ಜಯಂತಿಗೆ ಅರ್ಥಸಿಗಲಿದೆ ಎಂದರು.
ಸಿದ್ದಗಂಗಾ ಶ್ರೀ ಡಾ.ಶಿವಕುಮಾರಸ್ವಾಮೀಜಿಯವರ ಲಿಂಗೈಕ್ಯರಾದ ದಿನವನ್ನು ದಾಸೋಹ ದಿನಾಚರಣೆಯನ್ನು ಸರ್ಕಾರ ಆಚರಣೆ ಮಾಡುತ್ತಿದೆ. ನಡೆದಾಡುವ ದೇವರು ಡಾ.ಶಿವಕುಮಾರಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ನಡೆದು, ಸದೃಢವಾದ ಸಮಾಜವನ್ನು ನಿರ್ಮಾಣ ಮಾಡೋಣ ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಮಾತನಾಡಿ,  ಅಂಬಿಗರ ಚೌಡಯ್ಯನವರು ಸಾಮಾಜಿಕ ಅಸಮಾನತೆಯ ವಿರುದ್ಧ ಹೋರಾಟ ಮಾಡುವ ನಿಟ್ಟಿನಲ್ಲಿ ಅವರು ವೈಯಕ್ತಿಕ ಕಾಯಕದ ಜೊತೆಗೆ ತಮ್ಮದೇ ಆದ ಜೀವನ ಸಿದ್ದಾಂತಗಳನ್ನು ವಚನಗಳ ಮೂಲಕ ತತ್ವಾದರ್ಶಗಳನ್ನು ಬಿತ್ತಿ ಹೋಗಿದ್ದಾರೆ ಎಂದರು.
ಅಂಬಿಗರ ಚೌಡಯ್ಯ ಅವರ ತತ್ವಾದರ್ಶಗಳು ಸರ್ವಕಾಲಿಕವಾಗಿದ್ದು, ಸಮಾಜದಲ್ಲಿ ಅನ್ವಯವಾಗುಂತಹ ವಿಚಾರಗಳಾಗಿದ್ದು, ಇಂತಹ ವಿಚಾರಗಳನ್ನು, ಕಾಯಕನಿಷ್ಠೆಯನ್ನು ನಮ್ಮ ಜೀವನದಲ್ಲಿ ಪಾಲಿಸೋಣ ಎಂದು ಕರೆ ನೀಡಿದರು.
ಕೋವಿಡ್-19ರ ಮೂರನೇ ಅಲೆಯ ಹಿನ್ನಲೆಯಲ್ಲಿ ಅಂಬಿಗರ ಚೌಡಯ್ಯ ಜಯಂತಿ ಹಾಗೂ ಸಿದ್ದಗಂಗಾ ಶ್ರೀ ಡಾ.ಶಿವಕುಮಾರಸ್ವಾಮೀಜಿಯವರ ಲಿಂಗೈಕ್ಯರಾದ ದಿನ ದಾಸೋಹ ದಿನಾಚರಣೆಯನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಧನಂಜಯ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಮತಾ, ಗಂಗಾಮಾತಸ್ಥ ಸಮಾಜದ ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಕೃಷ್ಣಮೂರ್ತಿ, ಮುಖಂಡರಾದ ಈಶ್ವರ್ ಕುಮಾರ್, ಶ್ರೀನಿವಾಸ್, ಜಯಣ್ಣ, ರಂಗಸ್ವಾಮಿ, ತಾಲ್ಲೂಕು ಘಟಕದ ಉಪಾಧ್ಯಕ್ಷ ಸಿದ್ದೇಶ್, ನಗರಸಭೆ ಮಾಜಿ ಸದಸ್ಯ ಮಹೇಶ್ ಸೇರಿದಂತೆ ಮತ್ತಿತರರು ಇದ್ದರು.
ಫೋಟೋ ವಿವರ: ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಅಂಬಿಗರ ಚೌಡಯ್ಯ ಹಾಗೂ ದಾಸೋಹ ದಿನಾಚರಣೆಯನ್ನು ಸರಳವಾಯಿ ಆಚರಿಸಲಾಯಿತು. ಅಂಬಿಗರ ಚೌಡಯ್ಯ ಹಾಗೂ ಸಿದ್ದಗಂಗಾ ಶ್ರೀ ಡಾ.ಶಿವಕುಮಾರಸ್ವಾಮೀಜಿ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು…

ವರದಿ.ಗಿರೀಜಾ, ಬಿ.ಜೆ.ಬೆಳ್ಳೇಕಟ್ಟೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend