ಜಿಲ್ಲೆಯಲ್ಲಿ 89 ಜನರಿಗೆ ಕೋವಿಡ್ ಸೋಂಕು ದೃಢ: 76 ಮಂದಿ ಬಿಡುಗಡೆ…!!!

Listen to this article

ಜಿಲ್ಲೆಯಲ್ಲಿ 89 ಜನರಿಗೆ ಕೋವಿಡ್ ಸೋಂಕು ದೃಢ: 76 ಮಂದಿ ಬಿಡುಗಡೆ
ಚಿತ್ರದುರ್ಗ,ಮೇ.06:
ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಗುರುವಾರ ವರದಿಯಲ್ಲಿ 89 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 18,113ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 54, ಚಳ್ಳಕೆರೆ 4, ಹಿರಿಯೂರು 13, ಹೊಳಲ್ಕೆರೆ 6, ಹೊಸದುರ್ಗ 10, ಮೊಳಕಾಲ್ಮುರು ತಾಲ್ಲೂಕಿನಲ್ಲಿ 2 ಪ್ರಕರಣ ಸೇರಿದಂತೆ ಒಟ್ಟು 89 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಗುರುವಾರ  76 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಗುರುವಾರ ಒಟ್ಟು 1985 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 89 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 18,113 ಕ್ಕೆ ಏರಿಕೆಯಾಗಿದೆ. ಕೋವಿಡ್‍ನಿಂದ ಇಂದು ಇಬ್ಬರು ಮೃತರಾಗಿದ್ದು ಇದುವರೆಗೆ ಒಟ್ಟು 84 ಜನ ಕೋವಿಡ್‍ನಿಂದ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 16,436 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1593 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,46,533 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 4,28,943 ಜನರ ಮಾದರಿ ಸಂಗ್ರಹಿಸಲಾಗಿದ್ದು, 4,09,236 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 868 ಜನರ ವರದಿ ಬರುವುದು ಬಾಕಿ ಇದೆ. 726 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.

ವರದಿ. ಶಶಿಕುಮಾರ್ ಚಳ್ಳಕೆರೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend