ತಂಬಾಕು ರಹಿತ ಸಮಾಜ ನಿರ್ಮಿಸಲು ಎಲ್ಲರೂ ಕೈಜೋಡಿಸಿ: ನ್ಯಾ.ರಾಜೇಶ್ ಹೊಸಮನಿ…!!!

Listen to this article

ವಿಶ್ವ ತಂಬಾಕು ರಹಿತ ದಿನಾಚರಣೆ ನಿಮಿತ್ತ ಜನ ಜಾಗೃತಿ ಜಾಥಾ
ತಂಬಾಕು ರಹಿತ ಸಮಾಜ ನಿರ್ಮಿಸಲು ಎಲ್ಲರೂ ಕೈಜೋಡಿಸಿ: ನ್ಯಾ.ರಾಜೇಶ್ ಹೊಸಮನಿ
ಬಳ್ಳಾರಿ,:
ತಂಬಾಕು ಸೇವನೆಯಿಂದ ಸಾರ್ವಜನಿಕರ ಆರೋಗ್ಯ ಹಾಳಾಗುವುದರ ಜೊತೆಗೆ ತಂಬಾಕು ಬೆಳೆಯು ಭೂಮಿಗೆ ಮಾರಕವಾಗಿ ಪರಿಣಮಿಸಿದ್ದು, ಪರಿಸರ ಮತ್ತು ಜನರ ಆರೋಗ್ಯ ಕಾಪಾಡಲು ಸಾರ್ವಜನಿಕರು, ಸಂಘ ಸಂಸ್ಥೆಗಳು, ವರ್ತಕರು, ಕೈ ಜೋಡಿಸಿ ತಂಬಾಕು ರಹಿತ ಸಮಾಜ ನಿರ್ಮಿಸಲು ಸಹಕರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ರಾಜೇಶ್ ಎನ್.ಹೊಸಮನಿ ಅವರು ಕರೆ ನೀಡಿದರು.
“ವಿಶ್ವ ತಂಬಾಕು ರಹಿತ ದಿನಾಚರಣೆ” ಕಾರ್ಯಕ್ರಮದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಬುಧವಾರದಂದು ಹಮ್ಮಿಕೊಂಡಿದ್ದ ಜನಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಆರೋಗ್ಯ 2023ನೇ ಸಾಲಿನ ಘೋಷಣೆಯಂತೆ “ನಮಗೆ ಆಹಾರ ಬೇಕು ತಂಬಾಕು ಅಲ್ಲ” . ತಂಬಾಕು ಸೇವನೆಯಿಂದ ಪರಿಸರ ಮತ್ತು ಜನರ ಆರೋಗ್ಯ ಕಾಪಾಡಲು ಸಾರ್ವಜನಿಕರು, ಸಂಘ ಸಂಸ್ಥೆಗಳು, ವರ್ತಕರು ಈ ಅಭಿಯಾನದಲ್ಲಿ ಕೈ ಜೋಡಿಸುವುದು ಅಗತ್ಯವಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸದಸ್ಯ ಕಾರ್ಯದರ್ಶಿಗಳಾದ ಡಾ.ಹೆಚ್.ಎಲ್.ಜನಾರ್ಧನ ಅವರು ಮಾತನಾಡಿ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಬಳ್ಳಾರಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶವು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಶಾಲಾ ಆರೋಗ್ಯ ಕಾರ್ಯಕ್ರಮ, ಕೋಟ್ಪಾ ಕಾಯ್ದೆ ಉಲ್ಲಂಘನೆ ಮಾಡಿದವರ ಮೇಲೆ ತಂಬಾಕು ನಿಯಂತ್ರಣ ತನಿಖಾ ದಳದಿಂದ ಕಾರ್ಯಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಸಾರ್ವಜನಿಕರಿಗೆ ಅರಿವು ಮೂಡಿಸಲು ಗುಂಪು ಕೇಂದ್ರೀಕೃತ ಚರ್ಚೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳಿಗೆ ತಂಬಾಕು ನಿಯಂತ್ರಣ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಾಮಥ್ರ್ಯಾಭಿವೃದ್ದಿ ತರಬೇತಿಯನ್ನು ನೀಡಿ ಜಿಲ್ಲೆಯಲ್ಲಿ ತಂಬಾಕು ಬಳಕೆ ಪ್ರಮಾಣ ನಿಯಂತ್ರಣ ಮಾಡಲು ಕಾರ್ಯನಿರ್ವಹಿಸುತ್ತಿದ್ದು ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಕರೆ ನೀಡಿದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮ ಅಧಿಕಾರಿಗಳಾದ ಡಾ.ಮರಿಯಂಬಿ ವಿ.ಕೆ ಅವರು ಮಾತನಾಡಿ, ಜಿಲ್ಲೆಯಾದ್ಯಂತ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮವು ಯಶ್ವಸಿಯಾಗಲು ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾ ಮತು ತಾಲೂಕು ಮಟ್ಟದ ತಂಬಾಕು ನಿಯಂತ್ರಣ ತನಿಖಾದಳದ ಅಧಿಕಾರಿಗಳು “ಸಿಗರೇಟು ಮತ್ತು ತಂಬಾಕು ಇತರೆ ಉತ್ಪನ್ನಗಳ ಅಧಿನಿಯಮ-2003” ರ “ಸೆಕ್ಷನ್-4, 5, 6ಎ, 6ಬಿ ಮತ್ತು 7” ರ ಅಡಿಯಲ್ಲಿ ಪರಿಣಾಮಕಾರಿಯಾಗಿ ಕಾರ್ಯಚಾರಣೆ ನಡೆಸಿ ಈ ಕಾಯ್ದೆಯನ್ನು ಯಶ್ವಸಿಯಾಗಿ ಅನುಷ್ಠಾನಗೊಳಿಸಲು ಸಹಕರಿಸಬೇಕು ಎಂದು ಸಲಹೆ ನೀಡಿದರು.


ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ಬಸರೆಡ್ಡಿ ಅವರು ಮಾತನಾಡಿ, ಜಿಲ್ಲಾ ಆಸ್ಪತ್ರೆಯ ರೂಮ್ ನಂ-43 ರಲ್ಲಿ ತಂಬಾಕು ವ್ಯಸನಿಗಳಿಗಾಗಿ ತಂಬಾಕು ವ್ಯಸನ ಮುಕ್ತ ಕೇಂದ್ರವು ಉಚಿತ ಆಪ್ತಸಮಾಲೋಚನೆ ಹಾಗೂ ಅಗತ್ಯ ಚಿಕಿತ್ಸೆ ಸೇವೆಯನ್ನು ನೀಡಲಾಗುತ್ತಿದ್ದು, ಇದರ ಸದುಪಯೋಗವನ್ನು ಸಾರ್ವಜನಿಕರು ಬಳಸಿಕೊಂಡು ತಂಬಾಕು ರಹಿತ ಸಮಾಜ ನಿರ್ಮಿಸಲು ಎಲ್ಲರೂ ಕೈ ಜೋಡಿಸಬೇಕು ಎಂದು ಕರೆ ನೀಡಿದರು.
ಈ ಜನ ಜಾಗೃತಿ ಜಾಥಾವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಿಂದ ಆರಂಭವಾಗಿ ಸಂಗಂ ವೃತ್ತ, ರಾಯಲ್ ವೃತ್ತದ ಮೂಲಕ ಪುನಃ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಗೆ ಮರಳಿತು.
ನಂತರ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಬಾಯಿ ಮತ್ತು ಶ್ವಾಸಕೋಶದ ಕ್ಯಾನ್ಸರ್, ರಕ್ತದೊತ್ತಡ, ಸಕ್ಕರೆ ಕಾಯಿಲೆ, ಹೃದ್ರೋಗ ಇನ್ನೂ ಮುಂತಾದ ರೋಗಗಳ ಬಗ್ಗೆ ಸಾರ್ವಜನಿಕರಿಗೆ ಉಚಿತವಾಗಿ 57 ಜನರಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು. ಅದರಲ್ಲಿ 12 ಜನರಿಗೆ  ಹಾಗೂ 08 ಜನರಿಗೆ  ಈ ಲಕ್ಷಣಗಳನ್ನು ಪತ್ತೆ ಹಚ್ಚಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಶಿಫಾರಸ್ಸು ಮಾಡಲಾಯಿತು.
ಕಾರ್ಯಕ್ರಮದಲ್ಲಿ ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷರಾದ ಡಾ.ರೇಣುಕಾ ಮಂಜುನಾಥ್, ಉಪಾಧ್ಯಕ್ಷರಾದ ಡಾ.ಚಂದ್ರಶೇಖರ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಆರ್.ಅನಿಲ್ ಕುಮಾರ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಪೂರ್ಣಿಮಾ ಎಸ್.ಕಟ್ಟಿಮನಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ವಿರೇಂದ್ರ ಕುಮಾರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ, ತಂಬಾಕು ನಿಯಂತ್ರಣ ಕೋಶದ ಸಿಬ್ಬಂದಿಗಳಾದ ಎಸ್.ಭೋಜರಾಜ, ಎಸ್.ಮಲ್ಲೇಶಪ್ಪ ಸೇರಿದಂತೆ UಓIಅಇಈ ತಂಡದವರು ಉಪಸ್ಥಿತರಿದ್ದರು.
ಜಾಥಾದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಮತ್ತು ನರ್ಸಿಂಗ್ ವಿದ್ಯಾರ್ಥಿನಿಯರು, ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿಗಳ ಸಿಬ್ಬಂದಿ ವರ್ಗ ಮತ್ತು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ವರದಿ. ವಿರೇಶ್, ಎಚ್, ಬಳ್ಳಾರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend