ಹರಿಹರ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಗೆ ಭೇಟಿ, ಚುನಾವಣಾ ಸಿದ್ದತೆಗಳ ಪರಿಶೀಲನೆ…!!!

Listen to this article

ಹರಿಹರ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಗೆ ಭೇಟಿ, ಚುನಾವಣಾ ಸಿದ್ದತೆಗಳ ಪರಿಶೀಲನೆ
ದಾವಣಗೆರೆ, ಲೋಕಸಭಾ ಚುನಾವಣೆ ನಡೆಯುತ್ತಿದ್ದು ಏಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ ಅರಂಭವಾಗಲಿದೆ. ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಸಹಾಯಕ ಚುನಾವಣಾಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದು ಚುನಾವಣಾ ಸಿದ್ದತೆಯನ್ನು ಪರಿಶೀಲಿಸಲು ಬುಧವಾರ ಏ.3 ರಂದು ಹರಿಹರ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಭೇಟಿ ನೀಡಿ ಪರಿಶೀಲಿಸಿದರು.


ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ವಾರ್ ರೂಂ ಸ್ಥಾಪನೆ ಮಾಡುವ ಮೂಲಕ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲು ತಂಡಗಳನ್ನು ರಚಿಸಲಾಗಿದೆ. ಮತ್ತು ಎಲ್ಲಾ ತಂಡಗಳ ಕಾರ್ಯವೈಖರಿಯನ್ನು ವೀಕ್ಷಣೆ ಮಾಡಲು ನಿಯಂತ್ರಣ ಕೊಠಡಿ ಸ್ಥಾಪಿಸಲಾಗಿದ್ದು ಜಿ.ಪಿ.ಎಸ್.ಟ್ಯ್ರಾಕಿಂಗ್ ಮಾಡಲಾಗುತ್ತಿದೆ. ಮತ್ತು ಮತದಾರರು ಹಾಗೂ ಸಾರ್ವಜನಿಕರು ಸಿವಿಜಿಲ್ ಮೂಲಕ ಹಾಗೂ ಸಹಾಯವಾಣಿಗೆ ಕರೆ ಮಾಡಿ ನೀತಿ ಸಂಹಿತೆ ಉಲ್ಲಂಘನೆ ಮತ್ತು ಮಾಹಿತಿ ನೀಡಲು ಕರೆ ಮಾಡಿದಾಗ ನಿರ್ವಹಣೆಗಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದ ಚುನಾವಣಾಧಿಕಾರಿಗಳು ಇವಿಎಂ ಸ್ಟ್ರಾಂಗ್ ರೂಂ ಪರಿಶೀಲನೆಯನ್ನು ನಡೆಸಿದರು.
ಈ ವೇಳೆ ಸಹಾಯಕ ಚುನಾವಣಾಧಿಕಾರಿ ಹಾಗೂ ಡಿಡಿಎಲ್‍ಆರ್ ಭಾವನ, ತಹಶೀಲ್ದಾರ್ ಗುರುಬಸವರಾಜ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ತುಂಗಭದ್ರಾ ನದಿ ನೀರು ಪರಿಶೀಲನೆ, ದಾವಣಗೆರೆ, ಹರಿಹರ ಜನರು ನಿರಾಳ; ಕಳೆದ ವರ್ಷ ಮುಂಗಾರು ಮಳೆ ಕೊರತೆಯಿಂದಾಗಿ ಭದ್ರಾ ಜಲಾಶಯ ಭರ್ತಿಯಾಗದ ಕಾರಣ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಮತ್ತು ಜಿಲ್ಲೆಯ ಬಹುತೇಕ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಇದರ ಮೇಲೆಯೇ ಅವಲಂಬಿತವಾಗಿದ್ದು ಕುಡಿಯುವ ನೀರಿನ ಸಮಸ್ಯೆಯಾಗಿತ್ತು.

ನೀರಾವರಿ ನಿಗಮದಿಂದ ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಾರ್ಚ್ 29 ರಿಂದ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ಸ್‍ನಂತೆ ಭದ್ರಾ ನದಿಗೆ ನೀರು ಬಿಡಲಾಗುತ್ತಿದೆ. ಇದನ್ನು ಏಪ್ರಿಲ್ 5 ರ ವರೆಗೆ 3 ಸಾವಿರದಂತೆ ಮತ್ತು ಏ.6 ರ ಮಧ್ಯರಾತ್ರಿ ವರೆಗೆ 2200 ಕ್ಯೂಸೆಕ್ಸ್ ನೀರನ್ನು ಬಿಡಲಾಗುತ್ತಿದೆ.
ತುಂಗಭದ್ರಾ ನದಿಯಲ್ಲಿನ ನೀರು ಹರಿಹರದಿಂದ ಮುಂದಕ್ಕೆ ಸಾಗಿದ್ದು ನದಿಯಲ್ಲಿ ಎಷ್ಟು ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ ಎಂದು ಹರಿಹರ ಸಮೀಪದ ಜಾಕ್‍ವೆಲ್‍ಗೆ ಬುಧವಾರ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
ನದಿಯಲ್ಲಿ ನೀರಿನ ಹರಿವು ಗಣನೀಯವಾಗಿ ಇಳಿಕೆಯಾಗಿದ್ದು ದಾವಣಗೆರೆ ನಗರ ಸೇರಿದಂತೆ ಹರಿಹರ ನಗರಕ್ಕೆ 24×7 ಮಾದರಿಯಲ್ಲಿ ನೀರು ಪೂರೈಕೆಗೆ ಸಮಸ್ಯೆಯಾಗಿ ಟ್ಯಾಂಕರ್‍ಗಳ ಮೂಲಕ ನೀರು ಪೂರೈಕೆ ಮಾಡಲು ಸಿದ್ದತೆ ನಡೆಸಲಾಗಿತ್ತು. ತುಂಗಭದ್ರಾ ನದಿಗೆ ನೀರು ಬಂದಿದ್ದರಿಂದ ಸದ್ಯದ ಸ್ಥಿತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾದಂತಾಗಿದೆ…

ವರದಿ. ಪ್ರಕಾಶ್, ಆರ್, ದಾವಣಗೆರೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend