ಮೆಕ್ಕೆಜೋಳ ಬೆಳೆಯಲ್ಲಿ ಫಾಲ್ ಆರ್ಮಿ ಹುಳು ಮತ್ತು ಲದ್ದಿ ಹುಳುವಿನ ಹತೋಟಿ ಕ್ರಮಗಳು…!!!

Listen to this article

ಮೆಕ್ಕೆಜೋಳ ಬೆಳೆಯಲ್ಲಿ ಫಾಲ್ ಆರ್ಮಿ ಹುಳು ಮತ್ತು ಲದ್ದಿ ಹುಳುವಿನ ಹತೋಟಿ ಕ್ರಮಗಳು

ದಾವಣಗೆರೆ ಜೂ.21 :

ಮುಂಗಾರು ಹಂಗಾಮಿನಲ್ಲಿ ಮುಸುಕಿನ ಜೋಳವು ಪ್ರಮುಖ ಬೆಳೆಯಾಗಿದೆ. ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದ್ದು, ರೈತರು ಮೆಕ್ಕೆಜೋಳ ಬಿತ್ತನೆ ಮಾಡಿದ್ದಾರೆ. ಬಿತ್ತನೆಯಿಂದ ಹಿಡಿದು 15 ರಿಂದ 20 ದಿನದ ಮೆಕ್ಕೆಜೋಳ ಬೆಳೆಯನ್ನು ಕಾಣಬಹುದಾಗಿದ್ದು, ಈಗಾಗಲೇ ಮೆಕ್ಕೆಜೋಳದಲ್ಲಿ ಸೈನಿಕ ಹುಳುವಿನ ಬಾಧೆ ಕಂಡುಬಂದಿದ್ದು, ಈ ಕೆಳಗಿನ ಹತೋಟಿ ಕ್ರಮಗಳನ್ನು ಅಳವಡಿಸಿಕೊಂಡು ಲದ್ದಿಹುಳು ನಿಯಂತ್ರಣ ಮಾಡಬಹುದಾಗಿದೆ.
ಕೈ ಗೊಳ್ಳಬೇಕಾದ ಹತೋಟಿ ಕ್ರಮಗಳು :
ಸಕಾಲದಲ್ಲಿ ಬಿತ್ತನೆ ಮಾಡುವುದು (ಜೂನ್ ರಿಂದ ಜುಲೈ 15 ರವರೆಗೆ), ಮುಸುಕಿನ ಜೋಳದ ಜೊತೆ ಮಿಶ್ರ ಬೆಳೆ (ಮುಸುಕಿನ ಜೋಳ ಮತ್ತು ತೊಗರಿ) ಬಿತ್ತುವುದು, ಮೊಟ್ಟೆಗಳ ಗುಂಪು ಹಾಗೂ ಮೊದಲ ಹಂತದ ಮರಿಗಳಿರುವ ಎಲೆಗಳನ್ನು ಕಿತ್ತು ನಾಶಮಾಡುವುದು, ಪ್ರತಿ ಎಕರೆಗೆ 30 ಪಕ್ಷಿ ಸೂಚಿಗಳನ್ನು ನೆಡುವುದು, 30 ದಿನಗಳ ಬೆಳೆಯಲ್ಲಿ ಪ್ರತಿ ಎಕರೆಗೆ 15 ರಂತೆ ಮೋಹಕ ಬಲೆಗಳನ್ನು ಅಳವಡಿಸುವುದು, ತತ್ತಿಗಳ ಪರತಂತ್ರ ಜೀವಿಯಾದ ಟ್ರೈ ಕೊಗ್ರಾಮ ಪ್ರೀಟಿಯೋಸಮ್ ಅನ್ನು ಪ್ರತಿ ಎಕರೆಗೆ 50 ಸಾವಿರದಂತೆ (3 ಟ್ರೈ ಕೋಕಾರ್ಡ್‍ಗಳನ್ನು) ನಿರ್ಧರಿತ ಅಂತರದಲ್ಲಿ ಬೆಳೆಗಳಲ್ಲಿ ಬಿಡುವುದು, ಮೆಟರೈಜೀಂ ಅನಿಸೋಪ್ಲಿಯೆ (1*10/8 ಸಿಎಫ್‍ಯು/ಗ್ರಾಂ) 5 ಗ್ರಾಂ. ಪ್ರತಿ ಲೀಟರ್ ನೀರಿಗೆ ಅಥವಾ ನ್ಯೂಮೋರಿಯಾ ರಿಲೈ (1*10/8 ಸಿಎಫ್‍ಯು/ಗ್ರಾಂ) ಅನ್ನು 3 ಗ್ರಾಂ ನಂತೆ ಪ್ರತಿ ಲೀಟರ್ ನೀರಿಗೆ ಬೆರೆಸಿ ಸುಳಿಗೆ ಸಿಂಪರಣೆ ಮಾಡುವುದು.
ಲದ್ದಿ ಹುಳುವಿನಿಂದ ಶೇ. 10 ರಷ್ಟು (ಪ್ರತಿ 100 ಗಿಡಗಳಿಗೆ 10 ಗಿಡಗಳು) ಹಾನಿಯಾಗಿದ್ದಲ್ಲಿ ಶೇ. 5 ರ ಬೇವಿನ ಕಷಾಯ ( ಅಜಾಡಿರಕ್ಟಿನ್ 1500 ಪಿಪಿಎಂ) 5 ಮಿ.ಲೀ. ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು, ಲದ್ದಿ ಹುಳುವಿನಿಂದ ಶೇ.20 ರಷ್ಟು ಹಾನಿಯಾಗಿದ್ದಲ್ಲಿ ಎಮಾಮೆಕ್ಟಿನ್ ಬೆಂಜೋಯೇಟ್ 5 % ಎಸ್.ಜಿ ಅನ್ನು 0.3 ಮಿ.ಲೀ. ಅಥವಾ ಥೈಯೋಡಿಕಾರ್ಬ್‍ನ್ನು 2 ಗ್ರಾಂ ಪ್ರತಿ ಲೀಟರ್ ನೀರಿಗೆ ಮಿಶ್ರಣ ಮಾಡಿ ಸಿಂಪರಣೆ ಮಾಡುವುದು ಹಾಗೂ ಪ್ರತಿ ಸಿಂಪರಣೆಯನ್ನು ಮುಂಜಾನೆ ಮತ್ತು ಸಾಯಂಕಾಲದಲ್ಲಿ ಕೈಗೊಳ್ಳುವುದು.
ವಿಶೇಷ ಸೂಚನೆ :
ಕೀಟನಾಶಕವನ್ನು ಸುಳಿಯಲ್ಲಿ ಬೀಳುವಂತೆ ಮುಂಜಾನೆ ಅಥವಾ ಸಾಯಂಕಾಲದ ಸಮಯದಲ್ಲಿ ಸಿಂಪರಣೆ ಮಾಡುವುದು, ಕೀಟನಾಶಕ ಸಿಂಪರಣೆ ಮಾಡುವಾಗ ಕಡ್ಡಾಯವಾಗಿ ಸುರಕ್ಷತಾ ಕವಚಗಳನ್ನು ಬಳಸಿ ಸಿಂಪರಣಾ ದ್ರಾವಣ ದೇಹದ ಮೇಲೆ ಬೀಳದಂತೆ ಹಾಗೂ ಉಸಿರಾಟದ ಮೂಲಕ ದೇಹ ಸೇರದಂತೆ ಮುನ್ನೆಚ್ಚರಿಕೆ ವಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರ ಮತ್ತು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ಮತ್ತು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ. ರೇಖಾ, ಆರ್, ಲಿಂಗಾಪುರ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend