ಮಂಕಿಪಾಕ್ಸ್ ಕುರಿತಂತೆ ನಾಳೆ ಮಹತ್ವದ ಸಭೆ : ಸಿ.ಎಂ ಬಸವರಾಜ್ ಬೊಮ್ಮಾಯಿ…!!!

Listen to this article

ಮಂಕಿಪಾಕ್ಸ್ ಕುರಿತಂತೆ ನಾಳೆ ಮಹತ್ವದ ಸಭೆ : ಸಿ.ಎಂ ಬಸವರಾಜ್ ಬೊಮ್ಮಾಯಿ
ದಾವಣಗೆರೆ
ರಾಜ್ಯದಲ್ಲಿ ಮಂಕಿಪಾಕ್ಸ್ ಸೋಂಕು ಹರಡದಂತೆ ತಡೆಯುವ ಉದ್ದೇಶದಿಂದ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುವ ಹಿನ್ನಲೆಯಲ್ಲಿ ನಾಳೆ ಮಹತ್ವದ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.
ಸೋಮವಾರ ನಗರದಲ್ಲಿ ಆಯೋಜಿಸಲಾಗಿದ್ದ ಸಿದ್ದರಾಮೇಶ್ವರ ರಥಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದಾಗ ಜಿಎಂಐಟಿ ಕಾಲೇಜಿನ ಹೆಲಿಪ್ಯಾಡ್ ಬಳಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಮಂಕಿಪಾಕ್ಸ್ ಸೋಂಕು ತಡೆಯುವ ಕುರಿತಂತೆ ಹೊರ ರಾಜ್ಯದಿಂದ ಬರುವ ಪ್ರಯಾಣಿಕರನ್ನು ಪರೀಕ್ಷೆ ಮಾಡಲಾಗುತ್ತಿದೆ. ಮಂಕಿಪಾಕ್ಸ್ ಕುರಿತಂತೆ ಕೆಲವು ನಿರ್ದೇಶನಗಳನ್ನು ಜಾರಿ ಮಾಡಲು ಹಾಗೂ ಪ್ರಯೋಗಾಲಯ ಸಿದ್ಧತೆ ಕುರಿತಂತೆ ನಾಳೆ ಬೆಂಗಳೂರಿನಲ್ಲಿ ಆರೋಗ್ಯ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ಕರೆಯಲಾಗಿದ್ದು ಅಗತ್ಯ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಲೋಕಸಭಾ ಸದಸ್ಯ ಡಾ.ಜಿ.ಎಂ ಸಿದ್ದೇಶ್ವರ, ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಸಚಿವ ಡಾ.ಕೆ ಸುಧಾಕರ್, ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ ರವೀಂದ್ರನಾಥ್, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಸ್.ವಿ ರಾಮಚಂದ್ರ, ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಜಿಲ್ಲಾ ಪೋಲೀಸ್ ವರಿಷ್ಟಧಿಕಾರಿ, ಸಿ.ಬಿ ರಿಷ್ಯಂತ್ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು…

 

ವರದಿ.ರಾಜು. ದಾವಣಗೆರೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend