ಕನ್ನಡ ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆ ಈ ಬಾರಿ ಅದ್ದೂರಿ ಹಾಗೂ ಅರ್ಥಪೂರ್ಣ ರಾಜ್ಯೋತ್ಸವ ಆಚರಣೆ- ಶಿವಾನಂದ ಕಾಪಶಿ…!!!

Listen to this article

ಕನ್ನಡ ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆ
ಈ ಬಾರಿ ಅದ್ದೂರಿ ಹಾಗೂ ಅರ್ಥಪೂರ್ಣ ರಾಜ್ಯೋತ್ಸವ ಆಚರಣೆ- ಶಿವಾನಂದ ಕಾಪಶಿ
ದಾವಣಗೆರೆ  :
ಕನ್ನಡ ರಾಜ್ಯೋತ್ಸವವನ್ನು ಜಿಲ್ಲಾ ಕೇಂದ್ರದಲ್ಲಿ ನ. 01 ರಂದು ವಿಜೃಂಬಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು.
ಕನ್ನಡ ರಾಜ್ಯೋತ್ಸವ ಆಚರಣೆ ಸಂಬಂಧ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಬುಧುವಾರ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಈ ಬಾರಿ ಕನ್ನಡ ತಾಯಿಯ ಹಬ್ಬವನ್ನು ನ. 01 ರಂದು ವಿಜೃಂಬಣೆ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಕಾರ್ಯಕ್ರಮ ನಿಮಿತ್ಯ ಅಂ
ದು ಬೆಳಿಗ್ಗೆ 8 ಗಂಟೆಗೆ ಕನ್ನಡ ತಾಯಿ ಭುವನೇಶ್ವರಿ ದೇವಿಯ ಮೆರವಣಿಗೆ ನಗರದಲ್ಲಿ ಪ್ರಾರಂಭವಾಗಲಿದ್ದು, ಬೆಳಿಗ್ಗೆ 10 ಗಂಟೆಗೆ ಕ್ರೀಡಾಂಗಣದಲ್ಲಿ ರಾಷ್ಟ್ರ ಧ್ವಜಾರೋಹಣ ಸಮಾರಂಭ ನೆರವೇರಲಿದದೆ. ಸರ್ಕಾರದ ಮಾರ್ಗಸೂಚಿ ಪ್ರಕಾರ ಕನ್ನಡ ರಾಜ್ಯೋತ್ಸವವನ್ನು ಈ ಬಾರಿಯೂ ಕೂಡ ತುಂಬಾ ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತದೆ ಜಿಲ್ಲಾಡಳಿತವು ಸಂಪೂರ್ಣವಾಗಿ ಜವಾಬ್ದಾರಿ ವಹಿಸಿಕೊಂಡು ಮೆರವಣಿಗೆಯ ಡೊಳ್ಳು ಕುಣಿತ ಹಾಗೂ ಕಲಾವಿದರ ಒಳಗೊಂಡಂತೆ ಅನೇಕ ಕಾರ್ಯಕ್ರಮವನ್ನು ಯಶಸ್ವಿಯಾಗಿ ಮಾಡುತ್ತೇವೆ ಎಂದು ಹೇಳಿದರು.
ಮೆರವಣಿಗೆ ಹಾಗೂ ಸಮಾರಂಭದಲ್ಲಿ ಎಲ್ಲ ಕನ್ನಡಪರ ಸಂಘಟನೆಗಳು, ಕನ್ನಡ ಪ್ರೇಮಿಗಳು, ಸಾರ್ವಜನಿಕರು ಪಾಲ್ಗೊಳ್ಳಬೇಕು ಎಂದ ಜಿಲ್ಲಾಧಿಕಾರಿಗಳು, ರಾಜ್ಯೋತ್ಸವದಂದು ಹಾಗೂ ಇದರ ಮುನ್ನಾದಿನದಂದು ಜಿಲ್ಲೆಯ ಎಲ್ಲ ಸರ್ಕಾರಿ, ಅರೆ ಸರ್ಕಾರಿ ಕಟ್ಟಡಗಳು, ಹೋಟೆಲ್‍ಗಳು ಕನ್ನಡ ಪ್ರೇಮಿಗಳು ತಮ್ಮ ಕಟ್ಟಡಗಳಿಗೆ ಹಳದಿ ಹಾಗೂ ಕೆಂಪು ವಿದ್ಯುತ್ ದೀಪಾಲಂಕಾರ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಕನ್ನಡ ಸಂಸ್ಕøತಿ ಇಲಾಖೆ ಅಧಿಕಾರಿ ರವಿಚಂದ್ರ ಮಾಹಿತಿ ನೀಡಿ ಈ ಹಿಂದೆ ಯಾವ ರೀತಿಯಲ್ಲಿ ಆಚರಣೆ ಮಾಡಲಾಯಿತು ಅದೇ ರೀತಿಯಾಗಿ ಈ ವರ್ಷವು ಕೂಡ ನಗರದ ಮುಖ್ಯ ವೃತ್ತಗಳಾದ ಜಯದೇವ ವೃತ್ತ, ಹೊಂಡದ ವೃತ್ತ, ಗುಂಡಿ ವೃತ್ತ, ಗಾಂಧಿ ವೃತ್ತ, ರಾಮ್ ಅಂಡ್ ಕೋ ವೃತ್ತ, ಕೆ.ಇ.ಬಿ ವೃತ್ತ, ಶಿವಪ್ಪ ವೃತ್ತ, ಹಗೆದಿಬ್ಬ ವೃತ್ತ, ಶಿವಾಜಿ ವೃತ್ತ ಅಂಬೇಡ್ಕರ್ ವೃತ್ತ ಮುಂತಾದ ಪ್ರಮುಖ ವೃತ್ತಗಳ ಮುಖಾಂತರ ತುಂಬಾ ವಿಜೃಂಭಣೆಯಿಂದ ಮೆರವಣಿಗೆಯ ಆಚರಣೆ ಮಾಡಲಾಗುತ್ತದೆ ಮತ್ತು ಮಕ್ಕಳಿಗೆ ಸಿಹಿಹಂಚಿಕೆ, ಉಪಹಾರದ ವ್ಯವಸ್ಥೆ, ಇರುತ್ತದೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಡಿವೈಎಸ್‍ಪಿ ತಾಮ್ರಧ್ವಜ್, ದೂಡಾ ಆಯುಕ್ತರಾದ ಬಿ.ಟಿ.ಕುಮಾರಸ್ವಾಮಿ, ಹಾಗೂ ಕನ್ನಡ ಪರ ಹೋರಾಟಗಾರರು ಮತ್ತು ಮಹಿಳಾ ಹೋರಾಟಗಾರರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಜಿಲ್ಲೆಯ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಪ್ರತಿನಿಧಿಗಳು ಭಾಗವಹಿಸಿದ್ದರು…

ವರದಿ. ಮಹಾಂತೇಶ್, ದಾವಣಗೆರೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend