ದ್ವಿತೀಯ ಪಿಯುಸಿ ಪರೀಕ್ಷೆ ಮುಂಜಾಗ್ರತಾ ಕ್ರಮವಾಗಿ ಪೂರ್ವಭಾವಿ ಸಭೆ…!!!

Listen to this article

ದ್ವಿತೀಯ ಪಿಯುಸಿ ಪರೀಕ್ಷೆ ಮುಂಜಾಗ್ರತಾ ಕ್ರಮವಾಗಿ ಪೂರ್ವಭಾವಿ ಸಭೆ.

ಕೂಡ್ಲಿಗಿ:- ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದಂತೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ. ಕೊತ್ಲಮ್ಮ ನವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಜರುಗಿತು.

ಪರೀಕ್ಷೆಗಾಗಿ ಒಟ್ಟು 2 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ, ಪರೀಕ್ಷೆಯು ಪಾರದರ್ಶಕ ಹಾಗೂ ನಕಲು ಮುಕ್ತವಾಗಿ ನಡೆಯುವಂತೆ ನೋಡಿಕೊಳ್ಳಲು ಸಭೆಯಲ್ಲಿ ಸುಚಿ ಸಿದರು. ಎಲ್ಲಾ ಪರೀಕ್ಷಾ ಕೊಠಡಿಗಳಿಗೆ ಸಿಸಿ ಕ್ಯಾಮೆರಾ ಅಳವಡಿಸುವುದು ಕಡ್ಡಾಯವಾಗಿದೆ. ಮುಖ್ಯ ಅಧೀಕ್ಷಕರು ಯಾವುದೇ ಕಾರಣಕ್ಕೂ ಮೊಬೈಲ್ ಸೆಟ್ಟನ್ನು ಹೊಂದಿರಬಾರದು. ಪ್ರಾಚಾರ್ಯರಿಗೆ ಮಾತ್ರ ಅವಕಾಶವಿರುತ್ತದೆ ಮತ್ತು ಇತರ ಸಿಬ್ಬಂದಿಗಳಿಗೆ ಮೊಬೈಲ್ ಬಳಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಎಲೆಕ್ಟ್ರಾನಿಕ್ ವಸ್ತುಗಳ ಬಳಕೆ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವರೆಗೆ ಸಿ ಆರ್,ಪಿ .ಸಿ144 ಕಲಂ ರಸ್ತೆಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಎಂದು ಅಧ್ಯಕ್ಷರು ಹೇಳಿದರು. ನಂತರ ಬಸವರಾಜ್ ಗೌಡ ರವರು ಮಾತನಾಡುತ್ತಾ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಬಂದ್ ಮಾಡುವುದು ಕಡ್ಡಾಯವಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಅನಧಿಕೃತ ವ್ಯಕ್ತಿಗಳ ಪ್ರವೇಶ ನಿಷೇಧಿಸಿದೆ. ಪರೀಕ್ಷಾ ಕೇಂದ್ರದಲ್ಲಿ ಕೋವಿಡ್ ನಿಯಮ ಮಾಡುವುದು ಕಡ್ಡಾಯ. ಪ್ರತಿಯೊಬ್ಬರು ಕೋವಿಡ್-19 ನಿಯಮ ಪಾಲಿಸಬೇಕು. ಹಿಜಾಬ್ ಮತ್ತು ಕೇಸರಿ ಶಾಲ ಗೆ ಸಂಬಂಧಿಸಿದಂತೆ ಮಾನ್ಯ ಉಚ್ಚ ನ್ಯಾಯಾಲಯ ವು ನೀಡಿರುವ ತೀರ್ಪನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಕಡ್ಡಾಯವಾಗಿದೆ. ಯಾವುದೇ ಕಾರಣ ಪ್ರಶ್ನೆಪತ್ರಿಕೆಯು ಕೇಂದ್ರದಿಂದ ಹೊರಗಡೆ ಹೋಗದಂತೆ ಮುಖ್ಯ ಅಧೀಕ್ಷಕರು ಹಾಗೂ ಸಹ ಅಧೀಕ್ಷಕರು ನೋಡಿಕೊಳ್ಳುವುದು ಕಡ್ಡಾಯ. ಪರೀಕ್ಷ ಕೊಠಡಿಯ ಮೇಲ್ವಿಚಾರಕರು ಎಚ್ಚರಿಕೆಯಿಂದ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಇಲ್ಲದಿದ್ದರೆ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಈ ಸಭೆಯಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ, ಕಾಲೇಜಿನ ಪ್ ಪ್ರಾಚಾರ್ಯ ರಾದ, ಡಾ. ಕೊತ್ಲಮ್ಮ, ಬಸವನಗೌಡ,ಜಿ ವೆಂಕಟೇಶ್, ಜಗದೀಶ್ ಚಂದ್ರ ಬೋಸ್, ಸೇರಿದಂತೆ ಕೊಠಡಿ ಮೇಲ್ವಿಚಾರಕರು ಸಿಬ್ಬಂದಿ ವರ್ಗದವರುಉಪಸ್ಥಿತರಿದ್ದರು…

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend