ಧಾರವಾಡ ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್ ಅವರು ವಿವಿಧ ಚೆಕ್ ಪೊಸ್ಟ್ ಗಳಿಗೆ ದಿಢೀರ್ ಭೇಟಿ…!!!

Listen to this article

ಧಾರವಾಡ ಲೋಕಸಭೆ ಸಾರ್ವತ್ರಿಕ ಚುನಾವಣೆ-2024

ಹಳಿಯಾಳ ಚೆಕ್ ಪೊಸ್ಟ್ ಗೆ ದಿಢೀರ್ ಭೇಟಿ ನೀಡಿ, ಪರಿಶೀಲಿಸಿದ ಮಹಾನಗರ ಪೊಲೀಸ ಆಯುಕ್ತರಾದ ರೇಣುಕಾ ಸುಕುಮಾರ್

ಧಾರವಾಡ ಲೋಕಸಭೆ ಸಾರ್ವತ್ರಿಕ ಚುನಾವಣೆ-2024 ಸಂಬಂದಿಸಿದಂತೆ ಧಾರವಾಡ ಜಿಲ್ಲಾ ವ್ಯಾಪ್ತಿಯಲ್ಲಿ ಚುನಾಚಣಾ ಅಕ್ರಮಗಳನನ್ಬು ತಡೆಗಟ್ಟಲು ಮತ್ತು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಮುನ್ನೆಚ್ಚರಿಕೆ ವಹಿಸಲು 24 ಚೆಕ್ ಪೊಸ್ಟ್ ಗಳನ್ನು ತೆರೆಯಲಾಗಿದೆ. ಇದರಲ್ಲಿ 12 ಚೆಕ್ ಪೊಸ್ಟ್ ಗಳು ಮಹಾನಗರ ಪೊಲೀಸ್ ವ್ಯಾಪ್ತಿಯಲ್ಲಿದ್ದು, ಇಂದು ಸಂಜೆ ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್ ಅವರು ವಿವಿಧ ಚೆಕ್ ಪೊಸ್ಟ್ ಗಳಿಗೆ ದಿಢೀರ್ ಭೇಟಿ ನೀಡಿ, ವಾಹನಗಳ ತಪಾಸಣೆ, ಚೆಕ್ ಪೊಸ್ಟ್ ಸಿಬ್ಬಂದಿಗಳ ಕಾರ್ಯವೈಖರಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಅವರು ಮಾತನಾಡಿ,
ಚೆಕ್ ಪೊಸ್ಟ್ ಗಳಲ್ಲಿ ಪ್ರತಿ ವಾಹನವನ್ನು ಕಡ್ಡಾಯವಾಗಿ ತಪಾಸಣೆ ಮಾಡಬೇಕು. ಸರಿಯಾಗಿ ತಪಾಸಣೆ ಮಾಡಿದಾಗ ನಿಯಮಾನುಸಾರ ಪೂರಕ ದಾಖಲೆ ಇಲ್ಲದ ಹಣ, ವಸ್ತು, ಉಡುಗೋರೆಗಳನ್ನು ಸೀಜ್ ಮಾಡಬೇಕು. ತಪಾಸಣೆ ಸಂದರ್ಭದಲ್ಲಿ ಸಂಶಯ ಬಂದಲ್ಲಿ ಕೂಲಂಕುಷವಾಗಿ ಪರಿಶೀಲಿಸಿ, ಸಮರ್ಥನೀಯ ದಾಖಲಾತಿಗಳನ್ನು ಪಡೆಯಬೇಕೆಂದು ಕರ್ತವ್ಯನಿರತ ಸಿಬ್ಬಂದಿಗಳಿಗೆ ಸೂಚಿಸಿದರು.

ಪ್ರತಿ ಚೆಕ್ ಪೊಸ್ಟ್ ಕರ್ತವ್ಯಕ್ಕೆ ನಿಯೋಜನೆಗೊಂಡ ಮ್ಯಾಜಿಸ್ಟ್ರೇಟ್ ಅಧಿಕಾರಿ, ಸಿಬ್ಬಂದಿಗಳು ತಮಗೆ ನಿಗಧಿಪಡಿಸಿದ ಸಮಯಕ್ಕೆ ಹಾಜರಾಗಿ ಕರ್ತವ್ಯ ನಿರ್ವಹಿಸಬೇಕು. ಚೆಕ್ ಪೊಸ್ಟ್ ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆ, ವಾಹನಗಳ ತಪಾಸಣೆ ಕಾರ್ಯವನ್ನು ನಿಯಮಾನುಸಾರ ಸಮರ್ಪಕವಾಗಿ ಮಾಡುತ್ತಿರುವ ಬಗ್ಗೆ ಸಿಸಿ ಟಿವಿಗಳ ಮೂಲಕ ಜಿಲ್ಲಾ ಕಂಟ್ರೋಲ್ ರೂಮ್ ದಲ್ಲಿ ನಿರಂತರ ನಿಗಾವಹಿಸಲಾಗುತ್ತಿದೆ. ಯಾವುದೇ ರೀತಿಯ ಕರ್ತವ್ಯ ಲೋಪ ಕಂಡುಬಂದಲ್ಲಿ ಸೂಕ್ತ ಕ್ರಮ ಜರುಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಹಳಿಯಾಳ ಚೆಕ್ ಪೊಸ್ಟ್ ದಲ್ಲಿ ಸ್ವತಃ ತಾವೇ ವಾಹನಗಳ ತಪಾಸಣೆ ಮಾಡಿ, ವಾಹನ ಚಾಲಕರಿಗೆ, ಪ್ರಯಾಣಿಕರಿಗೆ ಮಾದರಿ ನೀತಿ ಸಂಹಿತೆ ಬಗ್ಗೆ ತಿಳುವಳಿಕೆ ನೀಡಿದರು….

ವರದಿ. ಮಹಾಲಿಂಗ ಗಗ್ಗರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend