ಧಾರವಾಡದಲ್ಲಿ ಅಚ್ಚುಕಟ್ಟಾಗಿ ನಡೆದ ಮಸ್ಟರಿಂಗ್ ಕಾರ್ಯ : ಸಿಬ್ಬಂದಿಗಳಿಗೆ ಧೈರ್ಯ ತುಂಬಿದ ಜಿಲ್ಲಾಧಿಕಾರಿ…!!!

Listen to this article

ಧಾರವಾಡ ಲೋಕಸಭೆ ಸಾರ್ವತ್ರಿಕ ಚುನಾವಣೆ
ಧಾರವಾಡದಲ್ಲಿ ಅಚ್ಚುಕಟ್ಟಾಗಿ ನಡೆದ ಮಸ್ಟರಿಂಗ್ ಕಾರ್ಯ :
ಸಿಬ್ಬಂದಿಗಳಿಗೆ ಧೈರ್ಯ ತುಂಬಿದ ಜಿಲ್ಲಾಧಿಕಾರಿ

ಧಾರವಾಡ : ಲೋಕಸಭೆ ಚುನಾವಣೆ ಪ್ರಕ್ರಿಯೆಯಲ್ಲಿ ಮತಗಟ್ಟೆ ಸಿಬ್ಬಂದಿಗಳಿಗೆ ಮತ ಯಂತ್ರಗಳು ಹಾಗೂ ಚುನಾವಣಾ ಸಾಮಗ್ರಿಯನ್ನು ವಿತರಿಸುವ ಪ್ರಮುಖ ಘಟ್ಟವಾಗಿರುವ ಮಸ್ಟರಿಂಗ್ ಕಾರ್ಯ ಧಾರವಾಡದ ಆರ್.ಎಲ್.ಎಸ್. ಪದವಿಪೂರ್ವ ಕಾಲೇಜು ಹಾಗೂ ಬಾಸೆಲ್ ಮಿಶನ್ ಆಂಗ್ಲ ಮಾಧ್ಯಮ ಶಾಲೆಗಳ ಆವರಣದಲ್ಲಿ ಸೋಮವಾರದಂದು ಅಚ್ಚುಕಟ್ಟಾಗಿ ನೆರವೇರಿತು.


ಧಾರವಾಡದಲ್ಲಿ ಮಸ್ಟರಿಂಗ್ ಕಾರ್ಯ ಜರುಗಿದ ಕಾಲೇಜು ಆವರಣಕ್ಕೆ ಬೆಳಿಗ್ಗೆಯೇ ಆಗಮಿಸಿದ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು, ಮಸ್ಟರಿಂಗ್ ಕಾರ್ಯದ ಸಮಗ್ರ ವಿವರವನ್ನು ಪಡೆದುಕೊಂಡರು, ಚುನಾವಣಾ ಸಾಮಗ್ರಿಯನ್ನು ಜೋಡಿಸಿಕೊಳ್ಳಲು ಸಿಬ್ಬಂದಿಗಳಿಗೆ ಕೊಠಡಿಗಳಲ್ಲಿ ಅವಕಾಶ ಕಲ್ಪಿಸಲಾಗಿತ್ತು. ಈ ಕೊಠಡಿಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳೊಂದಿಗೆ ಮಾತನಾಡಿ, ಯಾವುದೇ ಆತಂಕವಿಲ್ಲದೆ, ಧೈರ್ಯದಿಂದ ಹಾಗೂ ಪ್ರಾಮಾಣಿಕತೆಯಿಂದ ಚುನಾವಣಾ ಕರ್ತವ್ಯ ನಿರ್ವಹಿಸುವಂತೆ ನೈತಿಕ ಸ್ಥೈರ್ಯ ತುಂಬಿದರು.

ಪ್ರತಿ ಮತಗಟ್ಟೆಗಳಿಗೆ ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ, ಮತದಾನ ಸಹಾಯಕರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಬೆಳಿಗ್ಗೆ 06 ಗಂಟೆಯಿಂದಲೇ ಧಾರವಾಡದ ಆರ್.ಎಲ್.ಎಸ್. ಪದವಿ ಪೂರ್ವ ಕಾಲೇಜು ಹಾಗೂ ಬಾಸೆಲ್ ಮಿಷನ್ ಆಂಗ್ಲ ಮಾಧ್ಯಮ ಶಾಲೆ ಆವರಣದಲ್ಲಿ ಹಬ್ಬದ ಸಂಭ್ರಮ ಕಂಡುಬಂದಿತು. ಬೆಳಿಗ್ಗೆ 8 ಗಂಟೆಯ ಹೊತ್ತಿಗೆ ಮತಗಟ್ಟೆಗಳಿಗೆ ನೇಮಕಗೊಂಡಿರುವ ಅಧಿಕಾರಿ, ಸಿಬ್ಬಂದಿಗಳು ಕಾಲೇಜು ಆವರಣದಲ್ಲಿ ಸೇರತೊಡಗಿದರು. ಇದರ ಜೊತೆಗೆ ಚುನಾವಣೆ ಕಾರ್ಯ ಹಾಗೂ ಮತಗಟ್ಟೆಯ ಬಂದೋಬಸ್ತ್‍ಗಾಗಿ ನಿಯೋಜಿತಗೊಂಡಿರುವ ಪೊಲೀಸರು ಕೂಡ ಆಗಮಿಸಿದ್ದರು. ಮತದಾನ ಪ್ರಕ್ರಿಯೆಗೆ ತೆರಳುವ ಅಧಿಕಾರಿ, ಸಿಬ್ಬಂದಿ ಹಾಗೂ ಪೊಲೀಸರನ್ನು ಕರೆದುಕೊಂಡು ಹೋಗಲು ಬಸ್ ಹಾಗೂ ಜೀಪ್‍ಗಳು ಕಾಲೇಜು ಆವರಣದಲ್ಲಿ ಸಾಲಾಗಿ ಜಮಾವಣೆಗೊಂಡಿದ್ದವು.

ಕಾಲೇಜು ಆವರಣದಲ್ಲಿ ಅಧಿಕಾರಿ, ಸಿಬ್ಬಂದಿಗಳಿಗೆ ತಾವು ತೆರಳಬೇಕಿರುವ ಮತಗಟ್ಟೆಯ ವಿವರ ಹಾಗೂ ಬಸ್‍ಗಳ ವಿವರವನ್ನು ಧ್ವನಿವರ್ಧಕ ಮೂಲಕ ತಿಳಿಸುವ ವ್ಯವಸ್ಥೆ ಮಾಡಲಾಗಿತ್ತು. ಇನ್ನೊಂದೆಡೆ, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳಿಗೆ ಚುನಾವಣಾ ಸಾಮಗ್ರಿ, ಇವಿಎಂ ಯಂತ್ರಗಳ ಪೆಟ್ಟಿಗೆ, ವಿವಿ ಪ್ಯಾಟ್ ಯಂತ್ರದ ಪೆಟ್ಟಿಗೆ ಹಾಗೂ ವಿಶೇಷ ಕಿಟ್‍ಬ್ಯಾಗ್ ಅನ್ನು ವಿತರಿಸಲು ಸೆಕ್ಟರ್‍ವಾರು ಕೊಠಡಿಗಳನ್ನು ಸ್ಥಾಪಿಸಿ, ಆ ಮೂಲಕ ಸಂಬಂಧಪಟ್ಟ ಮತಗಟ್ಟೆಗಳ ಸಿಬ್ಬಂದಿಗೆ ಚುನಾವಣಾ ಸಾಮಗ್ರಿ ವಿತರಿಸುವ ಕಾರ್ಯ ವ್ಯವಸ್ಥಿತವಾಗಿ ಕೈಗೊಳ್ಳಲಾಯಿತು. ಯಾವುದೇ ಅಧಿಕಾರಿ, ಸಿಬ್ಬಂದಿಗಳಿಗೆ ಗೊಂದಲಕ್ಕೆ ಆಸ್ಪದವಿಲ್ಲದಂತೆ, ಮಸ್ಟರಿಂಗ್ ಕಾರ್ಯಕ್ಕೆ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಕೈಗೊಳ್ಳಲಾಯಿತು.

ಧಾರವಾಡದಲ್ಲಿ ಏರ್ಪಡಿಸಲಾದ ಮಸ್ಟರಿಂಗ್ ಕಾರ್ಯ ಯಶಸ್ವಿಯಾಗಿ, ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದಂತೆ ನೆರವೇರಿಸಲು ಪೂರ್ವಭಾವಿಯಾಗಿ ಯೋಜನೆ ರೂಪಿಸಿ, ಅದರಂತೆಯೇ ಕಾರ್ಯಗತಗೊಳಿಸಲಾಯಿತು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಶಾಲಂ ಹುಸೇನ, ತಹಶಿಲ್ದಾರ ದೊಡ್ಡಪ್ಪ ಹೂಗಾರ ಸೇರಿದಂತೆ ಇತರರು ಉಪಸ್ಥಿತರಿದ್ದರು…

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend