ನಾಯಕನಹಟ್ಟಿ: ಬಡವರಿಗೆ ಅನುಕೂಲವಾಗಲಿ; ಸಚಿವರಾದ ಬಿ.ಶ್ರೀರಾಮುಲು ಅವರು ಇಲಾಖೆ ವತಿಯಿಂದ ನೇರಸಾಲ ವಿತರಿಸಿದರು.!!

Listen to this article

ಚಿತ್ರದುರ್ಗ: ನಾಯಕನಹಟ್ಟಿ ಪಟ್ಟಣದಲ್ಲಿ (ಜೂ,30) ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳಿಗೆ ಸಮಾಜ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ಶ್ರೀ ರಾಮುಲು ಅವರು ಮಾತನಾಡಿ. ಕೋವಿಡ್-19 ಸಾಂಕ್ರಾಮಿಕ ರೋಗದ ದುರಿತ ಕಾಲದ ಸಂದರ್ಭದಲ್ಲಿ ಬಡವರಿಗೆ ಅನುಕೂಲವಾಗಲಿ ಎಂದು ಉದ್ದೇಶದಿಂದ ಇಲಾಖೆ ವತಿಯಿಂದ ನೇರಸಾಲ ಸೌಲಭ್ಯವನ್ನು ವಿತರಿಸಿದರು.

ನಾಯಕನಹಟ್ಟಿಯಲ್ಲಿ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಮಾಡಿದರು.ಗ್ರಾಮೀಣ ಭಾಗದಲ್ಲೂ ವೈದ್ಯಕೀಯ ಸೇವೆಗಳು ಸುಲಭವಾಗಿ ಲಭ್ಯವಾಗಿಸುವ ದೃಷ್ಟಿಯಲ್ಲಿ ಆಸ್ಪತ್ರೆ ನಿರ್ಮಿಸಲಾಗಿದೆ ಎಂದು ತಿಳಿಸಿದರು. ನಂತರ ರೇಖಲಗೆರೆ ತಾಂಡಾದಲ್ಲಿ ಶ್ರೀ ಶ್ರೀ ಶ್ರೀ ದೇನಾ ಭಗತ್ ಸೇವಾ ಟ್ರಸ್ಟ್ ರಾಜಯೋಗ ವಿದ್ಯಾಶ್ರಮ ವತಿಯಿಂದ ಆಯೋಜಿಸಿದ್ದ ಕೋಟಿ ವೃಕ್ಷ ಸಂವರ್ಧನಾ ಅಭಿಯಾನಕ್ಕೆ ಗಿಡ ನೆಡುವ ಮೂಲಕ ಬಿ.ಶ್ರೀರಾಮುಲು ಅವರು ಚಾಲನೆ ನೀಡಿದರು. ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ಜನರಿಗೆ ಶಾಶ್ವತವಾಗಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕು ಎಂಬುದು ಬಹಳ ದಿನ ಬೇಡಿಕೆಯಾಗಿದ್ದು, ಅದರಂತೆ ಇಂದು ನಾಯಕನಹಟ್ಟಿ ಪಟ್ಟಣ ಪಂಚಾಯಿತಿಗೆ ವಿವಿಸಾಗರದಿಂದ ಕುಡಿಯುವ ನೀರು ಪೂರೈಕೆಯ ಶುದ್ಧಿಕರಣ ಘಟಕಕ್ಕೆ ಚಾಲನೆ ನೀಡಲಾಗುತ್ತಿದ್ದು, ಇದರಿಂದ ಪಟ್ಟಣ ಪಂಚಾಯಿತಿಯ 22 ಸಾವಿರ ಕುಟುಂಬಗಳಿಗೆ ಅನುಕೂಲವಾಗಿದ್ದು, ಪಟ್ಟಣದ ಜನತೆಗೆ ಶಾಶ್ವತ ಕುಡಿಯುವ ನೀರು ಸೌಲಭ್ಯ ದೊರೆಯಲಿದೆ ಎಂದರು.

ಶಾಸಕರೂ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಸ್.ವಿ.ರಾಮಚಂದ್ರಪ್ಪ ಮಾತನಾಡಿ, ಜಿಲ್ಲೆಯ 700 ಫಲಾನುಭವಿಗಳಿಗೆ ಅಭಿವೃದ್ಧಿ ನಿಗಮದ ವತಿಯಿಂದ ನೇರ ಸಾಲಸೌಲಭ್ಯ ವಿತರಿಸಲಾಗಿದೆ ಎಂದರು. ನಿಗಮದ ವತಿಯಿಂದ ಸ್ವಯಂ ಉದ್ಯೋಗ ನೇರಸಾಲಸೌಲಭ್ಯ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಲ್ಲಿ ತರಬೇತಿ ನೀಡಿ ಉದ್ಯೋಗ ನೀಡಲಾಗುತ್ತಿದೆ. ಗಂಗಾಕಲ್ಯಾಣ ಯೋಜನೆ, ಭೂಒಡೆತನ ಯೋಜನೆ, ಪ್ರೇರಣ, ಸಮೃದ್ಧಿ ಯೋಜನೆ, ಆದಿವಾಸಿಗಳಿಗೆ ಅಭಿವೃದ್ಧಿ ಕಾಮಗಾರಿಗಳು, ನಿರುದ್ಯೋಗ ಯುವಕರಿಗೆ ಸಾಲಸೌಲಭ್ಯ ಸೇರಿದಂತೆ ನಿಗಮದ ಯೋಜನೆ, ಸಹಾಯಧನಗಳ ಕುರಿತು ಮಾಹಿತಿ ನೀಡಿದರು.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಕವಿತಾ, ನಿಗಮದ ರಾಜು, ಗೋಪಾಲ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಬಿಜೆಪಿ ಎಲ್ಲ ಮುಖಂಡರುಗಳು, ನಿಗಮದ ಫಲಾನುಭವಿಗಳು ಉಪಸ್ಥಿತರಿದ್ದರು.

ವರದಿ. ಮಂಜುನಾಥ್, ಎಚ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend