ನಾಯಕನಹಟ್ಟಿ: ಲಾಕ್ ಡೌನ್ ಹಿನ್ನಲೆಯಲ್ಲಿ 10 ಗಂಟೆ ಆಗುತ್ತಲೇ ಸಂಪೂರ್ಣವಾಗಿ ಸ್ತಬ್ದ.!!

Listen to this article

ಚಿತ್ರದುರ್ಗ: ನಾಯಕನಹಟ್ಟಿ ದಿನೇ ದಿನೇ ಹೆಚ್ಚಾಗುತ್ತಿರುವ ಹೆಮ್ಮಾರಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ 14 ದಿನಗಳ ಕಾಲ ವಿಧಿಸಿರುವ ಜನತಾ ಕರ್ಮ್ಯೂಗೆ ಪಟ್ಟಣದಲ್ಲಿ ಉತ್ತಮ ಬೆಂಬಲ ವ್ಯಕ್ತವಾಯಿತು. ನಾಯಕನಹಟ್ಟಿ ಪಟ್ಟಣ ಸುತ್ತಲಿನ ಗ್ರಾಮಗಳ ವ್ಯಾಪಾರ ವಹಿವಾಟು ನಡೆಸುವ ಏಕೈಕ ಕೇಂದ್ರವಾಗಿರುವುದರಿಂದ ಅಗತ್ಯ ವಸ್ತುಗಳ ಖರೀದಿಗೆ ಜನಸಾಮಾನ್ಯರು ಅವಧಿಗೂ ಮುನ್ನ ಹಾಗೂ ನಂತರ ದ್ವಿಚಕ್ರ ವಾಹನಗಳಲ್ಲಿ ಪಟ್ಟಣಕ್ಕೆ ಆಗಮಿಸಿ ಹಿಂದಿರುಗುತ್ತಿದ್ದರು. ಜನರ ಓಡಾಟ ನಿಯಂತ್ರಣಕ್ಕೆ ಪೊಲೀಸರು ಗಸ್ತು ತಿರಗುತ್ತಿದ್ದ ದೃಶ್ಯ ಕಂಡು ಬಂತು. ಬೆಳಗ್ಗೆ 10 ಗಂಟೆಯವರೆಗೆ ತರಕಾರಿ, ಹಣ್ಣಿನ ಅಂಗಡಿ, ದಿನಸಿ ಅಂಗಡಿಗಳು ವ್ಯಾಪಾರ ನಡೆಸಲು ಅವಕಾಶ ನೀಡಲಾಗಿತ್ತು. ಹೋಟೆಲ್‌ಗಳಲ್ಲಿ ಪಾರ್ಸಲ್‌ಗೆ ಮಾತ್ರ ಅವಕಾಶ ಮಾಡಿಕೊಡಲಾಗಿತ್ತು. ಸಮಯ ಹತ್ತರ ನಂತರ ಎಲ್ಲವೂ ಬಂದ್ ಆಗಿದ್ದವು. ಇನ್ನೂ ಕೆಲವೆಡೆ ನೂತನ ಮನೆ ನಿರ್ಮಾಣ ಕಾರ್ಯದಲ್ಲಿ ಕಾರ್ಮಿಕರು ತೊಡಗಿದ್ದ ದೃಶ್ಯ ಕಂಡು ಬಂತು. ಐತಿಹಾಸಿಕ ಗುರುತಿಪ್ಪೇರುದ್ರಸ್ವಾಮಿ ಹೊರಮಠ ಹಾಗೂ ಒಳಮಠದ ಎರಡೂ ದೇವಾಲಯಗಳಲ್ಲಿ ಪೂಜಾರಿಗಳಿಂದಪೂಜೆ ನೆರವೇರಿತು. ಭಕ್ತರ ದರ್ಶನಕ್ಕೆ ಸಂಪೂರ್ಣ ನಿರ್ಬಧ ವಿಧಿಸಲಾಗಿತ್ತು.

ವರದಿ. ಮಂಜುನಾಥ್, ಎಚ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend