73ನೇ ಗಣರಾಜ್ಯೋತ್ಸವ ಪೂರ್ವಭಾವಿ ಸಿದ್ಧತಾ ಸಭೆ ಶಿಷ್ಟಾಚಾರ ನಿಯಮಗಳು ಉಲ್ಲಂಘನೆಯಾಗದಂತೆ ನೋಡಿಕೊಳ್ಳಿ ಗೌಸಿಯಾ ಬೇಗಂ…!!!

Listen to this article

73ನೇ ಗಣರಾಜ್ಯೋತ್ಸವ ಪೂರ್ವಭಾವಿ ಸಿದ್ಧತಾ ಸಭೆ
ಶಿಷ್ಟಾಚಾರ ನಿಯಮಗಳು ಉಲ್ಲಂಘನೆಯಾಗದಂತೆ ನೋಡಿಕೊಳ್ಳಿ ಗೌಸಿಯಾ ಬೇಗಂ

ಕಂಪ್ಲಿ ,: ಗಣರಾಜ್ಯೋತ್ಸವ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕು ಮತ್ತು ತಮಗೆ ವಹಿಸಲಾದ ಜವಾಬ್ದಾರಿಯನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ತಹಸಿಲ್ದಾರ್ ಗೌಸಿಯಾ ಬೇಗಂ ಅವರು ಇಂತಹ ಸಂದರ್ಭದಲ್ಲಿ ಯಾವುದೇ ರೀತಿಯ ಶಿಷ್ಟಾಚಾರ ನಿಯಮಗಳು ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಕಟ್ಟಪ್ಪಣೆ ವಿಧಿಸಿದ್ದಾರೆ.
73ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಗುರುವಾರ ವರ್ಚುವಲ್ ಮೂಲಕ ಆಯೋಜಿಸಿದ್ದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ತಹಸಿಲ್ದಾರ್ ಗೌಸಿಯಾ ಬೇಗಂ ಅವರು ಮಾತನಾಡಿದರು
ಗಣರಾಜ್ಯೋತ್ಸವ ನಿಮಿತ್ತ ಜ.26ರಂದು ಬೆಳಗ್ಗೆ 8ಕ್ಕೆ ನಗರದ .ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ..

*ಕೋವಿಡ್ ನಿಯಮಗಳ ಪಾಲನೆಗೆ ವಿಶೇಷ ಒತ್ತು*: ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವ ಮೂಲಕ ಗಣರಾಜ್ಯೋತ್ಸವ ಆಚರಿಸೋಣ. ಕೋವಿಡ್ ಮುಂಜಾಗ್ರತಾ ಕ್ರಮಗಳು ಕೈಗೊಳ್ಳಲು ಮತ್ತು ಪಾಲನೆ ಮಾಡಲು ಆರೋಗ್ಯ ಇಲಾಖೆಯಿಂದ ವಿಶೇಷ ತಂಡ ನಿಯೋಜಿಸಲು ಅವರು ಸೂಚಿಸಿದರು.
ಕ್ರೀಡಾಂಗಣದಲ್ಲಿನ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ, ಲಘು ಉಪಹಾರದ ವ್ಯವಸ್ಥೆ, ರಿಹರ್ಸಲ್‍ಗೆ ಅಗತ್ಯ ಸಿದ್ಧತೆ ಸೇರಿದಂತೆ ಇನ್ನೀತರ ಸಿದ್ಧತೆಗಳನ್ನು ಕೂಡಲೇ ಅಧಿಕಾರಿಗಳು ಕೈಗೊಳ್ಳುವಂತೆ ಅವರು ತಿಳಿಸಿದರು.
ಉಪತಹಶೀಲ್ದಾರ್ ರವೀಂದ್ರಕುಮಾರ್ ಅವರು ಮಾತನಾಡಿ, ಸರಕಾರಿ ಕಚೇರಿಗಳಲ್ಲಿ ಮತ್ತು ಪ್ರಮುಖ ವೃತ್ತಗಳಲ್ಲಿ ಜ.25 ಮತ್ತು 26ರಂದು ಎರಡು ದಿನಗಳ ಕಾಲ ವಿದ್ಯುತ್ ದೀಪಾಲಂಕಾರ ಮಾಡಲು ಅಧಿಕಾರಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ತಸಿಲ್ದಾರ್ ಗೌಸಿಯಾ ಬೇಗಂ.. ಪುರಸಭೆ ಮುಖ್ಯಾಧಿಕಾರಿ ಶಿವಲಿಂಗಪ್ಪ. ಉಪ ತಹಸಿಲ್ದಾರ್ ರವೀಂದ್ರಕುಮಾರ್. ತಾಲೂಕ್ ಪಂಚಯತ್ ಇಓ.ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು…

 

ವರದಿ. ವಿರೇಶ್ ಹಳೇಕೋಟೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend