ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ನಿಮಿತ್ತ ಕಲ್ಲುಕಂಭದಲ್ಲಿ ಡಿಸಿ ಗ್ರಾಮವಾಸ್ತವ್ಯ…!!!

Listen to this article

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ನಿಮಿತ್ತ ಕಲ್ಲುಕಂಭದಲ್ಲಿ ಡಿಸಿ ಗ್ರಾಮವಾಸ್ತವ್ಯ
ಕಲ್ಲುಕಂಭ ಗ್ರಾಮಸ್ಥರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಒದಗಿಸಲಾಗುವುದು:ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ
ಬಳ್ಳಾರಿ,: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ನಿಮಿತ್ತ ಬಳ್ಳಾರಿ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ಕುರುಗೋಡು ತಾಲೂಕಿನ ಕಲ್ಲುಕಂಭ ಗ್ರಾಮದಲ್ಲಿ ಸೋಮವಾರ ಗ್ರಾಮವಾಸ್ತವ್ಯ ನಡೆಸಿದರು.
ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಅಭಿಯಾನದ ನಿಮಿತ್ತ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ಗ್ರಾಮದ ಪ್ರತಿ ಮನೆಗೂ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿದರು ಮತ್ತು ಗ್ರಾಮದೆಲ್ಲೆಡೆ ಸಂಚರಿಸಿ ರಸ್ತೆಗಳು, ಚರಂಡಿ, ಸ್ವಚ್ಛತೆ ಹಾಗೂ ಇನ್ನೀತರ ಮೂಲಸೌಕರ್ಯ ವ್ಯವಸ್ಥೆಯನ್ನು ಖುದ್ದಾಗಿ ಪರಿಶೀಲಿಸಿದರು ಮತ್ತು ಅಧಿಕಾರಿಗಳಿಗೆ ಅಗತ್ಯ ಸೂಚನೆಗಳು ನೀಡಿದ್ದು ಕಂಡುಬಂದಿತು.
ಈ ಗ್ರಾಮವಾಸ್ತವ್ಯ ನಡೆಸುವುದಕ್ಕಿಂತ ವಾರದ ಮುಂಚೆಯೇ ಗ್ರಾಮಕ್ಕೆ ತಹಸೀಲ್ದಾರ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳನ್ನು ಕಳುಹಿಸಿ ಪಿಂಚಣಿ, ಪಹಣಿ, ದಾಖಲೆಗಳ ತಿದ್ದುಪಡಿ, ರೇಶನ್ ಕಾರ್ಡ್ ಸಮಸ್ಯೆಗಳನ್ನು ಪಟ್ಟಿ ಮಾಡಿಕೊಂಡು ಬಗೆಹರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ತಿಳಿಸಿದರು.
ಕಲ್ಲುಕಂಭ ಗ್ರಾಮದ ಬಹುತೇಕ ಜನರು ಸರಕಾರ ಅಥವಾ ಇನಾಂ ಭೂಮಿಯಲ್ಲಿ ವಾಸಿಸುತ್ತಿದ್ದು, ನಮಗೆ ಹಕ್ಕುಪತ್ರ ಅಥವಾ ಪಟ್ಟಾ ವಿತರಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರಗಳನ್ನು ಸಲ್ಲಿಸುವ ಮೂಲಕ ಗಮನಕ್ಕೆ ತಂದರು ಹಾಗೂ ಕೂಡಲೇ ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಪಿಂಚಣಿ ಸೇರಿದಂತೆ ಕಂದಾಯ ಇಲಾಖೆಯ ಸಮಸ್ಯೆಗಳನ್ನು ಈ ಗ್ರಾಮದಲ್ಲಿ ಬಗೆಹರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ವಿವರಿಸಿದರು.
ಬಸ್‍ಗಳ ಸಂಚಾರ ಸಮಸ್ಯೆ ಕುರಿತು ಗ್ರಾಮಸ್ಥರು ಪ್ರಸ್ತಾಪಿಸಿದಕ್ಕೆ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಸಮಸ್ಯೆ ಬಗೆಹರಿಸಿ ವರದಿ ನೀಡುವಂತೆ ಸೂಚನೆ ನೀಡಿದರು.
ಗ್ರಾಮದಲ್ಲಿ ರಸ್ತೆ ದುರಸ್ತಿ, ಚರಂಡಿ ಸರಿಪಡಿಸುವಿಕೆ, ಗ್ರಾಮದಲ್ಲಿರುವ ಕೆರೆಯ ಅಭಿವೃದ್ಧೀಕರಣ ಮತ್ತು ಚರಂಡ ನೀರು ಹೋಗದಂತೆ ವ್ಯವಸ್ಥೆ, ಬೀದಿದೀಪಗಳ ವ್ಯವಸ್ಥೆ, ವಿಕಲಚೇತನರಿಗೆ ತ್ರಿಚಕ್ರವಾಹನ, ಸ್ವಚ್ಛತೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಗ್ರಾಮಸ್ಥರು ಜಿಲ್ಲಾಧಿಕಾರಿಗಳೆದುರು ಪ್ರಸ್ತಾಪಿಸಿದರು.


ಎಲ್ಲರ ಅಹವಾಲುಗಳನ್ನು ಸಮಾಧಾನದಿಂದ ಆಲಿಸಿದ ಡಿಸಿ ಮಾಲಪಾಟಿ ಅವರು ತಮ್ಮ ಸಮಸ್ಯೆಗಳನ್ನು ಶೀಘ್ರ ಪರಿಹರಿಸಲಾಗುವುದು ಎಂದು ಜನರಿಗೆ ಅಶ್ವಾಸನೆ ನೀಡಿದರು.
ಆರೋಗ್ಯ ಕ್ಷೇಮಕೇಂದ್ರಕ್ಕೆ ಅಗತ್ಯ ವೈದ್ಯರು ಮತ್ತು ಸಿಬ್ಬಂದಿ ಹಾಗೂ ಇನ್ನೀತರ ಸೌಕರ್ಯಗಳು ಹಾಗೂ ವಿದ್ಯುತ್‍ಚ್ಛಕ್ತಿ ಮತ್ತು ಬೀದಿದೀಪಗಳ ವ್ಯವಸ್ಥೆಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಜನರಿಗೆ ಭರವಸೆ ನೀಡಿದರು.
ಇದಕ್ಕೂ ಮುಂಚೆ ಅಪರ ಜಿಲ್ಲಾಧಿಕಾರಿಗಳಾದ ಪಿ.ಎಸ್.ಮಂಜುನಾಥ್ ಅವರು ಸಹ ಮನೆ ಮನೆಗೆ ತೆರಳಿ ಜನರ ವಸತಿ, ಪಿಂಚಣಿ, ರೇಷನ್‍ಕಾರ್ಡ್ ಹಾಗೂ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಹಲವು ದೂರು-ದುಮ್ಮಾನಗಳನ್ನು ಆಲಿಸಿದರು.
ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಸಾಮಾಜಿಕ ಭದ್ರತಾ ಯೋಜನೆಗೆ ಸಂಬಂಧಿಸಿದ ವಿವಿಧ ಅದೇಶಗಳು ಮತ್ತು ಮನವಿ ಪತ್ರಗಳನ್ನು ಸ್ವೀಕರಿಸಿದರು.
ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಅಭಿಯಾನದ ನಿಮಿತ್ತ ವೇದಿಕೆ ಆವರಣದಲ್ಲಿ ಹಾಕಲಾಗಿದ್ದ ವಿವಿಧ ಇಲಾಖೆಗಳ ವಸ್ತುಪ್ರದರ್ಶನ ಗಮನಸೆಳೆಯಿತು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತರಾದ ಡಾ.ಆಕಾಶ್ ಶಂಕರ್‍ರಾವ್, ಕುರುಗೋಡು ತಹಸೀಲ್ದಾರ್ ಕೆ.ರಾಘವೇಂದ್ರರಾವ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು…

ವರದಿ. ವಿರೇಶ್, ಎಚ್, ಸಿರಿಗುಪ್ಪ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend