ಕೆಮ್ಮು ಇದ್ದಲ್ಲಿ ಪರೀಕ್ಷೆ ಮಾಡಿಸಿಕೊಳ್ಳಿ: ಡಿಎಚ್‍ಒ ಡಾ.ಜರ್ನಾಧನ…!!!

Listen to this article

ಕೆಮ್ಮು ಇದ್ದಲ್ಲಿ ಪರೀಕ್ಷೆ ಮಾಡಿಸಿಕೊಳ್ಳಿ: ಡಿಎಚ್‍ಒ ಡಾ.ಜರ್ನಾಧನ
ಬಳ್ಳಾರಿ,: ಎರಡು ವಾರಕ್ಕಿಂತ ಹೆಚ್ಚು ದಿನಗಳು ಕೆಮ್ಮು ಇದ್ದಲ್ಲಿ ತಕ್ಷಣವೇ ಹತ್ತಿರ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷಿಸಿಕೊಳ್ಳಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಎಲ್ ಜನಾರ್ಧನ ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಕ್ಷಯರೋಗ ನಿರ್ಮೂಲನೆಗೆ ಕೈಜೊಡಿಸಿರುವ ರಾಜ್ಯ ಮಟ್ಡದ ಸ್ವಯಂ ಸೇವಾಸಂಸ್ಥೆ ಕೆಹೆಚ್‍ಪಿಟಿ ಅವರು ಸಿದ್ಧಪಡಿಸಿದ ಜಾಗೃತಿ ಭಿತ್ತಿಪತ್ರಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಗಣಿಗಾರಿಕೆ, ಕಾರ್ಖಾನೆಗಳು ಜೀನ್ಸ್ ಉದ್ಯಮ ವ್ಯಾಪಕವಾಗಿದ್ದು, ಈ ದಿಶೆಯಲ್ಲಿ ಹೆಚ್ಚು ಜಾಗೃತಿ ವಹಿಸಬೇಕಿದೆ. ಈ ಹಿನ್ನೆಲೆಯಲ್ಲಿ ಕಫ ಪರೀಕ್ಷೆಗೆ ಸ್ವಯಂಪ್ರೇರಿತರಾಗಿ ಬರುವ ಮೂಲಕ ಉಚಿತ ಚಿಕಿತ್ಸೆಯನ್ನು ಪಡೆದುಕೊಂಡು ಗುಣಮುಖರಾಗಬೇಕು ಎಂದು ಹೇಳಿದರು.
ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ ಅವರು ಮಾತನಾಡಿ, ಪ್ರಧಾನಮಂತ್ರಿಗಳ ಕನಸಾಗಿರುವ ಚಿಕಿತ್ಸೆ ಪಡೆಯುತ್ತಿರುವ ಕ್ಷಯರೋಗಿಗಳಿಗೆ ಸಕಾಲದಲ್ಲಿ ಗುಣಮುಖರಾಗಲು ಬೆಂಬಲವಾಗಿ ಪೌಷ್ಟಿಕ ಆಹಾರ ಒದಗಿಸಲು ದಾನಿಗಳನ್ನು ಕ್ಷಯಮಿತ್ರ ಎಂಬ ಹೆಸರಿನೊಂದಿಗೆ ನೊಂದಣಿಯನ್ನು ನೀ ಕ್ಷಯ ಪೆÇೀರ್ಟಲ್‍ನಲ್ಲಿ ಮಾಡಿಸಲಾಗುತ್ತಿದೆ. ಇದಕ್ಕಾಗಿ ಎಲ್ಲರೊಂದಿಗೆ ಸ್ವಯಂ ಸೇವಾ ಸಂಸ್ಥೆಗಳೂ ಸಹ ಶ್ರಮಿಸುತ್ತಿವೆ. ಹಾಗೂ ಕೆ.ಎಚ್.ಪಿ.ಟಿ.ಯ ಅಡಿಯಲ್ಲಿ ಸ್ಟಾಪ್ ಟಿ.ಬಿ. ಕಾರ್ಯಕ್ರಮದ ಮೂಲಕ ಹಲವಾರು ಕಾರ್ಯ ಚಟುವಟಿಕೆಗಳು ನಡೆಯುತ್ತಿವೆ. ಎಲ್ಲರೂ ಒಗ್ಗೂಡಿ ಕೆಲಸ ಮಾಡಿದಾಗ ಮಾತ್ರ ಕ್ಷಯರೋಗವನ್ನು ಹೊಡೆದೊಡಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಕೆ.ಎಚ್.ಪಿ.ಟಿ.ಯ ಜಿಲ್ಲಾ ಸಂಯೋಜಕರಾದ ಎ.ಶಿವಮ್ಮ, ಆರ್.ಸಿ.ಎಚ್ ಅಧಿಕಾರಿ ಡಾ.ಅನಿಲ್ ಕುಮಾರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ವಿ.ಕೆ, ಜಿಲ್ಲಾ ಮಲೇರಿಯ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ ವೀರೆಂದ್ರಕುಮಾರ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮಾಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ತಾಲೂಕು ಆರೋಗ್ಯಾಧಿಕಾರಿಗಳಾದ ಡಾ.ಮೋಹನಕುಮಾರಿ, ಡಾ.ಕುಶಾಲ್, ಡಾ.ರಾಧಿಕಾ, ಹಿರಿಯ ತಜ್ಞವೈದ್ಯರಾದ ಡಾ.ರಾಮಶೆಟ್ಟಿ, ಡಾ.ದೇವರಾಜ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು…

ವರದಿ. ವಿರೇಶ್, ಸಿರಿಗುಪ್ಪ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend