ಬಳ್ಳಾರಿಯಲ್ಲಿ ಅಕ್ಟೋಬರ್ 28ರಂದು ಕೋಟಿ ಕಂಠ ಗಾಯನ ಕಾರ್ಯಕ್ರಮ…!!!

Listen to this article

ಬಳ್ಳಾರಿಯಲ್ಲಿ ಅಕ್ಟೋಬರ್ 28ರಂದು ಕೋಟಿ ಕಂಠ ಗಾಯನ ಕಾರ್ಯಕ್ರಮ
ಬಳ್ಳಾರಿ,: ಬಳ್ಳಾರಿ ಜಿಲ್ಲಾಡಳಿತ ವತಿಯಿಂದ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಅಕ್ಟೋಬರ್ 28 ರಂದು ಬೆಳಗ್ಗೆ 11 ಗಂಟೆಗೆ ವಿಮ್ಸ್‍ನ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ತಿಳಿಸಿದರು.
ಶುಕ್ರವಾರದಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೋಟಿ ಕಂಠ ಗಾಯನ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಕ್ಟೋಬರ್ 28 ರಂದು ಏಕಕಾಲದಲ್ಲಿ ನಡೆಯುವ ಈ ಗಾಯನದಲ್ಲಿ ಕರ್ನಾಟಕದ ಎಲ್ಲಾ ಮೂಲೆ ಮೂಲೆಗಳಲ್ಲಿ ಸರಕಾರಿ, ಅರೆ ಸರಕಾರಿ, ಅನುದಾನಿತ ಶಾಲೆಗಳು, ಕಾಲೇಜುಗಳು, ಕನ್ನಡ ಪರ ಸಂಘಟನೆಗಳು ಸೇರಿದಂತೆ ಕನ್ನಡದ ಸ್ವಾಭಿಮಾನದ ಸಂಕೇತವನ್ನು ಕರ್ನಾಟಕ ಹೆಮ್ಮ ಪಡುವಂತಹ ಸೇವೆಯನ್ನು ಎಲ್ಲರೂ ಪಾಲ್ಗೊಳ್ಳುವ ಮೂಲಕ ಮಾಡಬೇಕು ಎಂದು ಹೇಳಿದರು.
ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ನಾಡಗೀತೆ ಸೇರಿ 6 ಹಾಡುಗಳನ್ನು ಒಟ್ಟಾಗಿ ಹಾಡುವಂತಹ ವ್ಯವಸ್ಥೆಯನ್ನು ಕರ್ನಾಟಕದಲ್ಲಿ ಏಕಕಾಲದಲ್ಲಿ ನಡೆಯುವ ಕಾರ್ಯಕ್ರಮ ಇದಾಗಿದೆ. ಅದಕ್ಕಾಗಿ ಎಲ್ಲಾ ಕನ್ನಡಪರ ಸಂಘಟನೆಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ಅಂದು ಬೆಳಗ್ಗೆ 11 ಗಂಟೆಗೆ ಮೊದಲಿಗೆ ಕುವೆಂಪು ರಚಿತ ನಾಡಗೀತೆ, ಶ್ರೀ ಹುಯಿಲುಗೋಳ ನಾರಾಯಣರಾಯರು ರಚಿಸಿದ ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು, ಕುವೆಂಪು ರಚಿತ ಬಾರಿಸು ಕನ್ನಡ ಡಿಂಡಿಮವ, ಡಾ; ಡಿ.ಎಸ್.ಕರ್ಕಿ ರಚಿತ ಹಚ್ಚೇವು ಕನ್ನಡದ ದೀಪ ಮತ್ತು ಕವಿ ಚನ್ನವೀರ ಕಣವಿ ರಚಿತ ವಿಶ್ವವಿನೂತನ ವಿದ್ಯಾಚೇತನ ಹಾಡುಗಳನ್ನು ಜಿಲ್ಲೆಯಾದ್ಯಂತ ಎಲ್ಲಾ ತಾಲ್ಲೂಕುಗಳಲ್ಲಿ ಏಕಕಾಲದಲ್ಲಿ ಹಾಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.


ಬಳ್ಳಾರಿ ಜಿಲ್ಲೆಯಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಸುಮಾರು 5 ಲಕ್ಷ ಜನ ಹಾಡುಗಳನ್ನು ಹಾಡುವ ಗುರಿಯನ್ನು ಹೊಂದಿದೆ. ಇದರಲ್ಲಿ ಮುಖ್ಯವಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ, ಪ್ರಾಥಮಿಕ, ಪ್ರೌಢ ಶಾಲೆಗಳ ಒಳಗೊಂಡಂತೆ ಕಾಲೇಜುಗಳು, ಮತ್ತು ಎಲ್ಲಾ ಕಚೇರಿಗಳು ಒಳಗೊಂಡು ಒಟ್ಟು 5 ಲಕ್ಷ ಜನರು ಭಾಗವಹಿಸುವ ಗುರಿ ಹೊಂದಿದೆ. ಈಗಾಗಲೇ 1.5 ಲಕ್ಷ ಜನರು ನೊಂದಣಿ ಮಾಡಿಕೊಂಡಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ದಲಿಂಗೇಶ್ ರಂಗಣ್ಣನವರ್ ಅವರು ಸಭೆಗೆ ತಿಳಿಸಿದರು.
ಕೋಟಿ ಕಂಠಗಾಯನ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ವಿವಿಧ ಅಧಿಕಾರಿಗಳಿಗೆ ವಹಿಸಲಾದ ಜವಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಲು ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತರಾದ ಆಕಾಶ್ ಶಂಕರ್, ಮಹಾನಗರ ಪಾಲಿಕೆ ಆಯುಕ್ತ ರುದೇಶ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ವರದಿ. ವಿರೇಶ್. ಸಿರಿಗುಪ್ಪ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend