ಮೋಕಾ ಹೋಬಳಿಯಲ್ಲಿ ಆಕರ್ಷಮಯ ಸ್ವೀಪ್ ಚಟುವಟಿಕೆ…!!!

Listen to this article

ಮೋಕಾ ಹೋಬಳಿಯಲ್ಲಿ ಆಕರ್ಷಮಯ ಸ್ವೀಪ್ ಚಟುವಟಿಕೆ
ಮತದಾನ ಜಾಗೃತಿ ಅಂಗವಾಗಿ 150 ಮೀ. ಉದ್ದದ ಧ್ವಜ ಮೆರವಣಿಗೆ
ಬಳ್ಳಾರಿ,:
ವಿಧಾನಸಭಾ ಸಾರ್ವತ್ರಿಕ ಚುನಾವಣಾ ಅಂಗವಾಗಿ ಜಿಲ್ಲೆಯಲ್ಲಿ ನೂರಕ್ಕೆ ನೂರು ಪ್ರತಿಶತ ಮತದಾನ ಪ್ರಮಾಣ ಹೆಚ್ಚಿಸಲು ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಮೂಡಿಸಲು ವಿಭಿನ್ನ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.
ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೋಕಾ ಹೋಬಳಿಯಲ್ಲಿ ಮಂಗಳವಾರದಂದು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಮತ್ತು ತಾಲೂಕು ಆಡಳಿತ, ತಾಲೂಕು ಸ್ವೀಪ್ ಸಮಿತಿಯಿಂದ ಗ್ರಾಮದ ಜನರಿಗೆ ಮತದಾನದ ಕುರಿತು ಅರಿವು ಮೂಡಿಸಲು ‘ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಿ, ನಮ್ಮ ಮತ ನಮ್ಮ ಹಕ್ಕು, ಮತದಾನ ದಿನಾಂಕ ಮೇ 10’ ಸಂಭಾಷಣೆವುಳ್ಳ 150 ಮೀಟರ್ ಉದ್ದದ ಧ್ವಜದ ಮೆರವಣಿಗೆ ಹಮ್ಮಿಕೊಳ್ಳಲಾಯಿತು.
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಶ್ರೀಧರ್ ಐ.ಬಾರೀಕಾರ್ ಅವರು ಮೆರವಣಿಗೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮೇ 10 ರಂದು ನಡೆಯುವ ಮತದಾನ ದಿನದಂದು ಎಲ್ಲರೂ ನಿರ್ಭೀತರಾಗಿ ಮತ ಚಲಾಯಿಸಬೇಕು. ಯಾರೂ ಹೊರಗುಳಿಯಬಾರದು ಎಂದು ತಿಳಿಸಿದರು.
ಮತದಾನ ಜಾಗೃತಿಯ ಧ್ವಜ ಮೆರವಣಿಗೆಯು ಮೋಕಾದ ಮುದಿ ಮಲ್ಲೇಶ್ವರ ದೇವಾಸ್ಥಾನದಿಂದ ಆರಂಭವಾಗಿ ಮಾರೆಮ್ಮ ದೇವಿ ದೇವಾಸ್ಥಾನ, ಹೊಸ ಬಸ್ ನಿಲ್ದಾಣ ಮಾರ್ಗವಾಗಿ ಸಾಗಿ, ಬಳಿಕ ಹೊಸ ಮೋಕಾ ಸಂಯುಕ್ತ ಪದವಿ ಪೂರ್ವ ಕಾಲೇಜ್ ಬಳಿ ಮುಕ್ತಾಯಗೊಂಡಿತು.


ನಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕಾಂತ್‍ರಾಜ್ ಅವರು ಸಂಯುಕ್ತ ಪದವಿ ಪೂರ್ವ ಕಾಲೇಜ್ ಮೈದಾನದಲ್ಲಿ ಸಾರ್ವಜನಿಕರಿಗೆ ಮತದಾನ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಈ ಸಂದರ್ಭದಲ್ಲಿ ಪಂಚಾಯತ್‍ರಾಜ್ ಇಲಾಖೆಯ ಸಹಾಯಕ ನಿರ್ದೇಶಕ ಮೊಹಮ್ಮದ್ ಗೌಸ್ ರಿಸಲ್ದಾರ್, ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಮೋಹನ ಕುಮಾರಿ, ಸಿ.ಡಿ.ಪಿ.ಓ ಉಷಾ ಸೇರಿದಂತೆ ತಾಲೂಕು ಪಂಚಾಯತಿ ಸಿಬ್ಬಂದಿ ವರ್ಗ ಮತ್ತು ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಗ್ರಾಮದ ರೈತರು, ಆಶಾ ಕಾರ್ಯಕರ್ತೆಯರು, ಸ್ವ-ಸಹಾಯ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು…

ವರದಿ.ವಿರೇಶ್, ಬಳ್ಳಾರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend