ವಿಧಾನಸಭೆ ಸಾರ್ವತ್ರಿಕ ಚುನಾವಣೆ 2023 56 ಅಭ್ಯರ್ಥಿಗಳ ಭವಿಷ್ಯ ಇವಿಯಂನಲ್ಲಿ ಭದ್ರ, ಸ್ಟ್ರಾಂಗ್ ರೂಮ್ ಸುತ್ತ ಪೊಲೀಸ್ ಬಿಗಿ ಬಂದೋಬಸ್ತ್…!!!

Listen to this article

ವಿಧಾನಸಭೆ ಸಾರ್ವತ್ರಿಕ ಚುನಾವಣೆ 2023
56 ಅಭ್ಯರ್ಥಿಗಳ ಭವಿಷ್ಯ ಇವಿಯಂನಲ್ಲಿ ಭದ್ರ, ಸ್ಟ್ರಾಂಗ್ ರೂಮ್ ಸುತ್ತ ಪೊಲೀಸ್ ಬಿಗಿ ಬಂದೋಬಸ್ತ್
ಬಳ್ಳಾರಿ:
ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ 2023 ರ ಅಂಗವಾಗಿ ಮೇ 10 ರಂದು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಸುಸೂತ್ರವಾಗಿ ಶಾಂತತೆಯಿಂದ ಮತದಾನ ನಡೆದಿದ್ದು, ಜಿಲ್ಲೆಯ 56 ಅಭ್ಯರ್ಥಿಗಳ ಭವಿಷ್ಯ ಇವಿಯಂನಲ್ಲಿ ಭದ್ರವಾಗಿದೆ.
ಜಿಲ್ಲೆಯ 5 ವಿಧಾನಸಭಾ ಕ್ಷೇತ್ರದ ಮತ ಕೇಂದ್ರಗಳಲ್ಲಿ ನಡೆದ ಚುನಾವಣೆಯ ಮತ ಎಣಿಕೆಯು ನಗರದ ರಾವ್ ಬಹದ್ದೂರ್ ವೈ. ಮಹಾಬಲೇಶ್ವರ ತಾಂತ್ರಿಕ ಇಂಜಿನಿಯರ್ ಮಹಾವಿದ್ಯಾಲಯದಲ್ಲಿ ಮೇ 13, ಶನಿವಾರ ಬೆಳಗ್ಗೆ 08 ರಿಂದ ನಡೆಯಲಿದೆ. ಐದು ವಿಧಾನಸಭಾ ಕ್ಷೇತ್ರದ ಮತಯಂತ್ರಗಳನ್ನು ಆಯಾ ವಿಧಾನಸಭಾ ಕ್ಷೇತ್ರಕ್ಕೆ ನಿಗದಿಪಡಿಸಿರುವ ಭದ್ರತಾ ಕೊಠಡಿಯಲ್ಲಿ ಅಧಿಕಾರಿಗಳಿಂದ ಸೀಲ್ ಮಾಡಿ ಸುರಕ್ಷಿತವಾಗಿ ಇರಿಸಲಾಗಿದೆ.
ಮತ ಎಣಿಕೆ ಕೇಂದ್ರ ಸುತ್ತಲೂ ಐಟಿಬಿಪಿ, ಡಿಎಆರ್, ಸಿವಿಲ್ ಪೆÇಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಮತ ಎಣಿಕಾ ಕೇಂದ್ರಕ್ಕೆ ಮೂರು ಸುತ್ತಿನ ಭದ್ರತೆ ಕಲ್ಪಿಸಲಾಗಿದೆ. ಮತಗಳ ಎಣಿಕೆಗಾಗಿ ಅಗತ್ಯ ಸಿಬ್ಬಂದಿಗಳನ್ನು ನೇಮಕ ಮಾಡಿ ತರಬೇತಿ ನೀಡಲಾಗಿದೆ.

ಮತ ಎಣಿಕೆ ಕೇಂದ್ರ ಸುತ್ತ 200 ಮೀ. ನಿರ್ಬಂಧಿತ ಪ್ರದೇಶ:
ಜಿಲ್ಲೆಯ 05 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮೇ 13 ರಂದು ನಗರದ ರಾವ್ ಬಹದ್ದೂರ್ ವೈ ಮಹಾಬಲೇಶ್ವರ ತಾಂತ್ರಿಕ ಮಹಾವಿದ್ಯಾಲಯಲ್ಲಿ ಮತ ಎಣಿಕೆ ನಡೆಯಲಿದ್ದು, ಮೇ 13 ರ ಬೆಳಗ್ಗೆ 06 ರಿಂದ ಮಧ್ಯರಾತ್ರಿ 12 ರವರೆಗೆ ಸಿಆರ್‍ಪಿಸಿ 1973 ರ ಕಲಂ 144 ಮತ್ತು 144 (ಎ) ರಡಿ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಲಾಗಿರುತ್ತದೆ ಹಾಗೂ ಮತ ಎಣಿಕೆ ಕೇಂದ್ರದ ಸುತ್ತ-ಮುತ್ತ 200 ಮೀಟರ್ ಪ್ರದೇಶವನ್ನು ನಿಬರ್ಂಧಿತ ಪ್ರದೇಶವೆಂದೂ ಈಗಾಗಲೇ ಜಿಲ್ಲಾ ದಂಡಾಧಿಕಾರಿ, ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಆದೇಶಿಸಿದ್ದಾರೆ.


ಮತ ಎಣಿಕೆ ಕೇಂದ್ರ ಸುತ್ತ ಪ್ರದೇಶದಲ್ಲಿ ಖಾಸಗಿ ವಾಹನಗಳ ನಿಲುಗಡೆ, ಧ್ವನಿ ವರ್ಧಕ ಬಳಕೆ ಮುಂತಾದವುಗಳನ್ನು  ನಿಷೇಧಿಸಿದೆ. ಬಹಿರಂಗವಾಗಿ ಘೋಷಣೆ, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ…

ವರದಿ. ಉಮೇಶ್, ಎಚ್, ಬಳ್ಳಾರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend