ಬಳ್ಳಾರಿ ಗ್ರಾಮಾಂತರದಲ್ಲಿ ಶ್ರೀ ರಾಮುಲು ಹಿನ್ನೆಡೆ, ಬಿ, ನಾಗೇಂದ್ರ ಮುನ್ನಡೆ…!!!

Listen to this article

ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ. 10 ರಂದು ಮತದಾನ ನಡೆದಿದ್ದು, ಇಂದು ಬೆಳಗ್ಗೆ 8 ಗಂಟೆಯಿಂದ ರಾಜ್ಯದ 34 ಕೇಂದ್ರಗಳಲ್ಲಿ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ 2615 ಮಂದಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ವರುಣ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸಾಧಿಸಿದ್ದಾರೆ. ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿಎಂ ಬಸವರಾಜ ಬೊಮ್ಮಾಯಿ ಮುನ್ನಡೆ ಸಾಧಿಸಿದ್ದಾರೆ. ನಿಪ್ಪಾಣಿ ಬಿಜೆಪಿ ಶಶಿಕಲಾ ಜೊಲ್ಲೆ ಹಿನ್ನಡೆಯಾಗಿದೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗೆ ಹಿನ್ನಡೆಯಾಗಿದೆ. ಬಿಜೆಪಿ ಅಭ್ಯರ್ಥಿ ಮಂಜುಳಾ ಲಿಂಬಾವಳಿಗೆ ಹಿನ್ನಡೆಯಾಗಿದೆ. ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಗೆ ಹಿನ್ನಡೆಯಾಗಿದೆ. ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲುಗೆ ಹಿನ್ನಡೆಯಾಗಿದೆ.

ಕಾಂಗ್ರೆಸ್ -101 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ

ಬಿಜೆಪಿ-77 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಜೆಡಿಎಸ್-24 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಪಕ್ಷೇತರರು- 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು 5,30,85,566 ಮತದಾರರ ಪೈಕಿ 3,88,51,807 ಜನರಿಂದ ಮತದಾನ. 26682156 ಪುರುಷರ ಪೈಕಿ 19658398 ಪುರುಷರು ಹಕ್ಕು ಚಲಾವಣೆ ಮಾಡಿದ್ದಾರೆ. 26398483 ಮಹಿಳಾ ಮತದಾರರ ಪೈಕಿ 19192372 ಮಹಿಳೆಯರಿಂದ ಮತದಾನವಾಗಿದ್ದು, 4927 ಮಂಗಳಮುಖಿಯರ ಪೈಕಿ 1037 ಮಂಗಳಮುಖಿಯರಿಂದ ಮತ ಚಲಾಯಿಸಿದ್ದಾರೆ. ರಾಜ್ಯದಲ್ಲಿ ಈ ಬಾರಿ ದಾಖಲೆ ಪ್ರಮಾಣದಲ್ಲಿ ಶೇ. 73.19ರಷ್ಟು ಮತಚಲಾವಣೆಯಾಗಿದೆ.

ವರದಿ. ಮುಕ್ಕಣ್ಣ ಹುಲಿಗುಡ್ಡ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend