ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಮಹಾನಗರ ಪಾಲಿಕೆಯ ಪ್ರಗತಿ ಪರಿಶೀಲನಾ ಸಭೆ…!!!

Listen to this article

ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಮಹಾನಗರ ಪಾಲಿಕೆಯ ಪ್ರಗತಿ ಪರಿಶೀಲನಾ ಸಭೆ
ನಗರ ಸುಂದರೀಕರಣಕ್ಕೆ ಎಲ್ಲಾ ಸದಸ್ಯರ ಪಾತ್ರ ಮುಖ್ಯ:
ಬಳ್ಳಾರಿ ನಗರವನ್ನು ಸುಂದರೀಕರಣಗೊಳಿಸುವಲ್ಲಿ ಎಲ್ಲಾ ಸದಸ್ಯರ ಪಾತ್ರ ಮುಖ್ಯವಾದುದು. ಆದ್ದರಿಂದ ಎಲ್ಲಾ ಸದಸ್ಯರು ಒಗ್ಗಟ್ಟಿನಿಂದ ಕಾನೂನಾತ್ಮಕ ಚೌಕಟ್ಟಿನಲ್ಲಿ ನಗರದ ಬೆಳವಣಿಗೆಗೆ ಶ್ರಮಿಸೋಣ ಇದಕ್ಕೆ ಸಂಬಂಧಿಸಿದಂತೆ ಕೂಲಂಕಷವಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ನಿರ್ಧರಿಸಲಾಯಿತು.
ನಗರದ ಜಿಪಂನ ನಜೀರ್‍ಸಾಬ್ ಸಭಾಂಗಣದಲ್ಲಿ ಶನಿವಾರ ನಡೆದ ಬಳ್ಳಾರಿ ಮಹಾನಗರ ಪಾಲಿಕೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲಿಕೆಯ 39 ವಾರ್ಡ್‍ನ ಸದಸ್ಯರೆಲ್ಲರೂ ಸಮ್ಮತಿ ವ್ಯಕ್ತಪಡಿಸಿದರು.
ಬಳ್ಳಾರಿ ನಗರ ಸುಂದರೀಕರಣಕ್ಕೆ ಸಂಬಂಧಿಸಿದಂತೆ ಮೊದಲು ಸ್ವಚ್ಛತೆ, ಚರಂಡಿ ವ್ಯವಸ್ಥೆ, ರಸ್ತೆ ಹಾಗೂ ಕುಡಿಯುವ ನೀರಿನ ಪೂರೈಕೆ ಪ್ರಮುಖ ಅಂಶಗಳಾಗಿರುತ್ತವೆ. ಈ ಕುರಿತು ಪ್ರತಿ ವಾರ್ಡ್‍ಗಳಲ್ಲಿ ಸ್ವಚ್ಛತೆಯ ಕುರಿತು ಅರಿವು ಮೂಡಿಸಬೇಕು. ಅಂದಾಗ ಮಾತ್ರ ಸುಂದರ ನಗರವನ್ನಾಗಿ ರೂಪಿಸಲು ಸಾಧ್ಯ. ಇದಕ್ಕೆ ಪಾಲಿಕೆಯ ಎಲ್ಲಾ ಸದಸ್ಯರು ಮತ್ತು ಸಿಬ್ಬಂದಿಗಳ ಸಹಕಾರ ಅಗತ್ಯ ಎಂದು ಹೇಳಿದರು.
ನಗರದಲ್ಲಿ ಈ ಹಿಂದಿನ ಕೆಲವು ಕಾಮಗಾರಿಗಳು ಬಾಕಿಯಿದ್ದಲ್ಲಿ ಯಾವುದೇ ಕಾರಣಕ್ಕೂ ತಡ ಮಾಡದೇ ಅತಿ ಶೀಘ್ರದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಮಂಜೂರಾದ ಯೋಜನೆಗಳಡಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಹೊಸ ಅನುದಾನ ಬಿಡುಗಡೆಯಾಗುವುದರೊಳಗೆ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಪಾಲಿಕೆಯ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಪ್ರಮುಖ ರಸ್ತೆಗಳ ಮುಖ್ಯ ವೃತ್ತಗಳಲ್ಲಿ ರಸ್ತೆಯನ್ನು ಒತ್ತುವರಿ ಮಾಡುವುದು ಕಂಡುಬರುತ್ತಿದೆ. ಇದರಿಂದ ವಾಹನಗಳ ಸಂಚಾರಕ್ಕೆ ತೀವ್ರ ಸಮಸ್ಯೆ ಆಗುತ್ತಿದೆ.

ಅಂತಹ ಒತ್ತುವರಿಗಳನ್ನು ಕೂಡಲೇ ತೆರವುಗೊಳಿಸಲು ಕ್ರಮ ವಹಿಸಬೇಕು ಎಂದು ಪಾಲಿಕೆ ಸದಸ್ಯರೊಬ್ಬರು ಸಚಿವರ ಗಮನಕ್ಕೆ ತಂದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ನಾಗೇಂದ್ರ ಅವರು, ನಗರ ಪಾಲಿಕೆಯ ಎಲ್ಲಾ ಸದಸ್ಯರು ಇದಕ್ಕೆ ಸಹಕಾರ ನೀಡಿದರೆ, ಸಮಸ್ಯೆಯನ್ನು ಬಗೆಹರಿಸಲು ದಿಟ್ಟ ನಿರ್ಧಾರ ತೆಗೆದುಕೊಳ್ಳೋಣ ಎಂದು ತಿಳಿಸಿದರು.
ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆಗೆ ಬಳ್ಳಾರಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪೌರಕಾರ್ಮಿಕರ ಕೊರತೆಯಿದ್ದಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು, ಡಿ.ಎಂ.ಎಫ್ ನಿಧಿ ಅನುದಾನದಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಕ್ರಮ ವಹಿಸಲಾಗುವುದು ಎಂದು ಸಚಿವರು ಹೇಳಿದರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಮಾತನಾಡಿ, ನಗರದಲ್ಲಿ ರಾಜಕಾಲುವೆಯಲ್ಲಿ ಸಾರ್ವಜನಿಕರು ಕಸ, ಪ್ಲಾಸ್ಟಿಕ್ ತ್ಯಾಜ್ಯ ಹಾಕುತ್ತಿದ್ದಾರೆ. ಇದನ್ನು ತಪ್ಪಿಸುವ ಕೆಲಸ ಆಗಬೇಕು. ಸದಸ್ಯರು ಆಯಾ ವಾರ್ಡ್‍ಗಳಲ್ಲಿ ಸಾರ್ವಜನಿಕರಿಗೆ ಇದರ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮೇಯರ್ ಡಿ.ತ್ರಿವೇಣಿ, ಉಪಮೇಯರ್ ಜಾನಕಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್, ಸ್ಥಾಯಿ ಸಮಿತಿಗಳ ಅಧ್ಯಕ್ಷರುಗಳು, ಸೇರಿದಂತೆ ಪಾಲಿಕೆ ಸದಸ್ಯರು ಮತ್ತು ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು…

 

ವರದಿ. ವಿರೇಶ್, ಎಚ್, ಬಳ್ಳಾರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend