ಬಳ್ಳಾರಿ ಮಹಾನಗರ ಪಾಲಿಕೆ ಸಾಮಾನ್ಯ ಸಭೆ ನಗರ ಸ್ವಚ್ಛತೆಗೆ ವಿಶೇಷ ಕ್ರಮ; ಸಿಸಿ ಟಿವಿ ಅಳವಡಿಕೆಗೆ ಕ್ರಮ…!!!

Listen to this article

ಬಳ್ಳಾರಿ ಮಹಾನಗರ ಪಾಲಿಕೆ ಸಾಮಾನ್ಯ ಸಭೆ
ನಗರ ಸ್ವಚ್ಛತೆಗೆ ವಿಶೇಷ ಕ್ರಮ; ಸಿಸಿ ಟಿವಿ ಅಳವಡಿಕೆಗೆ ಕ್ರಮ

ಬಳ್ಳಾರಿ,:ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾರ್ಡ್‍ಗಳಲ್ಲಿ ಸ್ವಚ್ಛತೆಯ ದೃಷ್ಟಿಯಿಂದ ಮತ್ತು ನಗರದಲ್ಲಿ ಎಲ್ಲಿ ಬೇಕೆಂದರಲ್ಲಿ ಕಸ ಹಾಕುವುದನ್ನು ಕಡಿವಾಣ ಹಾಕಲು ಪ್ರತಿ ವಾರ್ಡ್‍ಗಳಲ್ಲಿ ಸಿಸಿಟಿವಿ ಅಳವಡಿಕೆಗೆ ಕ್ರಮ ವಹಿಸಲಾಗುವುದು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಹೇಳಿದರು.


ಮಹಾನಗರ ಪಾಲಿಕೆಯ ಮೇಯರ್ ಬಿ.ಶ್ವೇತ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಪಂನ ನಜೀರ್‍ಸಾಬ್ ಸಭಾಂಗಣದಲ್ಲಿ ಗುರುವಾರ ನಡೆದ ಬಳ್ಳಾರಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಸದಸ್ಯರೆಲ್ಲರೂ ಇದಕ್ಕೆ ಸಹಮತ ವ್ಯಕ್ತಪಡಿಸಿದರು.
ಸ್ವಚ್ಛ ಮತ್ತು ಸ್ವಾಸ್ಥ್ಯ ಬಳ್ಳಾರಿಯನ್ನಾಗಿ ನಿರ್ಮಾಣ ಮಾಡಲು, ಎಲ್ಲಾ ಸಾರ್ವಜನಿಕರ ಪಾತ್ರ ಪ್ರಮುಖವಾಗಿದ್ದು, ಸಾರ್ವಜನಿಕರಲ್ಲಿ ಸ್ವಚ್ಛತೆಯ ಬಗ್ಗೆ ಹೆಚ್ಚಿನ ಮಾಹಿತಿ ಮತ್ತು ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಪಾಲಿಕೆಯ ಸದಸ್ಯರು ಒತ್ತಾಯಿಸಿದರು. ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿಕ್ರಿಯಿಸಿ, ಜನ ಜಾಗೃತಿಗೆ ಆಯಾ ವಾರ್ಡ್‍ಗಳ ಯುವಕರ ಸಂಘ ಸಂಸ್ಥೆಗಳ ಸಹಕಾರ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ನಗರದಲ್ಲಿ ವಿವಿಧೆಡೆ ಬಿಡಾಡಿ ದನಗಳ ಹಾವಳಿ ತೀವ್ರವಾಗಿದ್ದು, ವಾಹನ ಸವಾರರಿಗೆ ಅಡ್ಡಿಯನ್ನುಂಟು ಮಾಡುತ್ತಿವೆ ಎಂದು ಸದಸ್ಯರು ಸಚಿವರ ಗಮನಕ್ಕೆ ತಂದರು. ಪ್ರತಿಕ್ರಿಯಿಸಿದ ಸಚಿವರು, ಬಿಡಾಡಿ ದನಗಳ ಮಾಲೀಕರು ತಮ್ಮ ಆವರಣದಲ್ಲಿಯೇ ಕಟ್ಟಿ ಹಾಕಿಕೊಳ್ಳಬೇಕು. ಇಲ್ಲದಿದ್ದರೆ ಅಧಿಕಾರಿಗಳು ಕೇಸ್ ದಾಖಲು ಮತ್ತು ದಂಡ ವಿಧಿಸುವ ಕುರಿತು ಎಚ್ಚರಿಕೆ ನೀಡಬೇಕು. ಮಾಲೀಕತ್ವ ಇಲ್ಲದವುಗಳನ್ನು ಕೂಡಲೇ ವಶಕ್ಕೆ ಪಡೆದು, ಗೋಶಾಲೆಗಳಿಗೆ ರವಾನಿಸುವ ಕ್ರಮ ವಹಿಸಬೇಕು ಎಂದು ಪಾಲಿಕೆಯ ಅಧಿಕಾರಿಗಳಿಗೆ ಸೂಚಿಸಿದರು.
ನಗರದಲ್ಲಿನ ಹಳೆಯ ತಹಶೀಲ್ದಾರರ ಕಚೇರಿ ಆವರಣವನ್ನು ಮುಂದಿನ ದಿನಗಳಲ್ಲಿ ಸುಮಾರು 30 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ದಿ ಪಡಿಸಿ ಪಾಲಿಕೆಯ ಸದಸ್ಯರ ಕೊಠಡಿ ನಿರ್ಮಾಣ ಮಾಡಿಕೊಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಪ್ರಸ್ತಾಪಿಸಿದರು. ಇದಕ್ಕೆ ಸದಸ್ಯರೆಲ್ಲರೂ ಸಮ್ಮತಿ ವ್ಯಕ್ತಪಡಿಸಿದರು.
ಪಾಲಿಕೆಯ ವಿವಿಧ ವಾರ್ಡ್‍ಗಳಲ್ಲಿ ರಾತ್ರಿ ಸಮಯದಲ್ಲಿ ಮನೆ ದರೋಡೆಯಂತಹ ಘಟನೆಗಳು ನಡೆಯುತ್ತಿದೆ ಎಂದು ಸದಸ್ಯರೊಬ್ಬರು ಸಭೆಯ ಗಮನಕ್ಕೆ ತಂದರು. ರಾತ್ರಿಯ ವೇಳೆಯಲ್ಲಿಪೊಲೀಸ್ ಸಿಬ್ಬಂದಿ ಎಚ್ಚೆಚ್ಚು ಗಸ್ತು ಬೀಟ್ ಹಾಕುವಂತೆ ಸೂಚಿಸಲಾಗುವುದು ಎಂದು ತಿಳಿಸಿದರು.


ನಗರದಲ್ಲಿ ಬೀದಿ ನಾಯಿಗಳಿಗೆ ಆಂಟಿರೇಬೀಸ್ ವ್ಯಾಕ್ಸಿನೇಷನ್ ಮತ್ತು ಸಂತಾನ ಹರಣ ಚಿಕಿತ್ಸೆಯ ಕಾರ್ಯವು ನಡೆಯುತ್ತಿದ್ದು, ಆ ಕಾರ್ಯಕ್ಕೆ ಬಾಕಿ ಉಳಿದ ಹಣವನ್ನು ಪಾಲಿಕೆಯ ಸಾಮಾನ್ಯ ನಿಧಿಯಡಿಯಲ್ಲಿ ಪಾವತಿ ಮಂಜೂರಾತಿಗೆ ಸದಸ್ಯರು ಅನುಮೋದನೆ ನೀಡಿದರು.
ಸಭೆಯಲ್ಲಿ ಇನ್ನಿತರೆ ವಿಷಯಗಳ ಕುರಿತು ಸುಧೀರ್ಘ ಕಾಲ ಚರ್ಚೆ ನಡೆಯಿತು.
ಈ ವೇಳೆ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಾನಗರ ಪಾಲಿಕೆ ಮೇಯರ್ ಬಿ.ಶ್ವೇತ, ಉಪಮೇಯರ್ ಬಿ.ಜಾನಕಿ, ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಫೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷ ನೂರ್ ಮೊಹಮ್ಮದ್, ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷ ಆಸೀಫ್ ಭಾಷಾ, ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿಯ ಅಧ್ಯಕ್ಷ ಹನುಮಂತಪ್ಪ.ಕೆ., ಪಾಲಿಕೆಯ ಆಯುಕ್ತ ಜಿ.ಖಲೀಲ್ ಸಾಬ್ ಸೇರಿದಂತೆ ಪಾಲಿಕೆಯ ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು…

ವರದಿ. ವಿರೇಶ್, ಎಚ್, ಬಳ್ಳಾರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend