ಮಾ.11 ರಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಸಮಾವೇಶ…!!!

Listen to this article

ಮಾ.11 ರಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಸಮಾವೇಶ

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕರೆ: ಡಿಸಿ ಪ್ರಶಾಂತ್ ಕುಮಾರ್

ಬಳ್ಳಾರಿ:ಜಿಲ್ಲೆಯಲ್ಲಿ ಸರ್ಕಾರದ ಪ್ರಮುಖ, ಜನಪ್ರಿಯ ಯೋಜನೆಗಳ ಕುರಿತು ಜಾಗೃತಿ ಮೂಡಿಸಲು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮಾರ್ಚ್ 11 ರಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಕರೆ ನೀಡಿದರು.


ಶನಿವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಸಮಾವೇಶ ಹಮ್ಮಿಕೊಳ್ಳುವ ಕುರಿತು ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳನ್ನು ಸೇರಿಸಲು ಪ್ರತಿ ತಾಲೂಕಿನಿಂದ ಫಲಾನುಭವಿಗಳನ್ನು ಸಮಾವೇಶಕ್ಕೆ ಕರೆ ತರಲು ಬಸ್ ವ್ಯವಸ್ಥೆ ಕಲ್ಪಿಸುವಂತೆ ತಹಶೀಲ್ದಾರರಿಗೆ ಹೇಳಿದರು.
ಸರ್ಕಾರದ ನಿರ್ದೇಶನದ ಮೇರೆಗೆ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಸಮಾವೇಶವನ್ನು ಆಯೋಜಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಫಲಾನುಭವಿಗಳಿಗೆ ಬಸ್‍ಗಳ ವ್ಯವಸ್ಥೆ ಮಾಡಲಾಗುವುದೆಂದು ತಿಳಿಸಿದರು.
ಸರ್ಕಾರದ ಗ್ಯಾರಂಟಿ ಯೋಜನೆಗಳು, ಇತರೆ ಅಭಿವೃದ್ಧಿ ಕಾಮಗಾರಿಗಳ ಕುರಿತ ಜನರಲ್ಲಿ ಜಾಗೃತಿ ಮೂಡಿಸಲು ಗ್ಯಾರಂಟಿ ಸಮಾವೇಶವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್, ಸಹಾಯಕ ಆಯುಕ್ತರಾದ ಹೇಮಂತ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರು ಹಾಗೂ ತಾಪಂ ಇಓ ಗಳು ಉಪಸ್ಥಿತರಿದ್ದರು….

ವರದಿ. ವಿರೇಶ್, ಎಚ್, ಬಳ್ಳಾರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend