ಮದುವೆ,ಸಾಮಾಜಿಕ ಕಾರ್ಯಕ್ರಮಗಳಿಗೆ ಬ್ರೇಕ್, ಆದೇಶ ಉಲ್ಲಂಘಿಸಿದ್ರೇ ನಿರ್ಧಾಕ್ಷಿಣ್ಯ ಕ್ರಮ…!!!

Listen to this article

ಮದುವೆ,ಸಾಮಾಜಿಕ ಕಾರ್ಯಕ್ರಮಗಳಿಗೆ ಬ್ರೇಕ್, ಆದೇಶ ಉಲ್ಲಂಘಿಸಿದ್ರೇ ನಿರ್ಧಾಕ್ಷಿಣ್ಯ ಕ್ರಮ
ಬಳ್ಳಾರಿ ಜಿಲ್ಲೆಯಾದ್ಯಂತ ಇಂದಿನಿಂದ ಕಠಿಣ ಲಾಕ್‍ಡೌನ್:ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್
ಬಳ್ಳಾರಿ,ಮೇ 10: ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್ ಸೊಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ಕಠಿಣ ಲಾಕ್‍ಡೌನ್ ಜಾರಿ ಮಾಡಲಾಗಿದ್ದು,ಮೇ 24ರ ಬೆಳಗ್ಗೆ 6ರವರೆಗೆ ಜಾರಿಯಲ್ಲಿರಲಿದೆ. ಈ ಸಂದರ್ಭದಲ್ಲಿ ಮದುವೆ ಸಮಾರಂಭ ಹಾಗೂ ಇತರೆ ಸಾಮಾಜಿಕ ಕಾರ್ಯಕ್ರಮಗಳು ಸಂಪೂರ್ಣವಾಗಿ ನಿಷೇಧಿಸಿರುವುದು ಸೇರಿದಂತೆ ಹಲವು ಕಠಿಣ ನಿರ್ಬಂಧಗಳನ್ನು ಜಾರಿಗೆ ತರಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ,ಹಜ್ ಮತ್ತು ವಕ್ಫ್ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸಂಜೆ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಈ ನಿರ್ಧಾರ ಪ್ರಕಟಿಸಿದರು.
ಕಿರಣಿ ಅಂಗಡಿಗಳು, ದಿನಸಿ, ಹಣು ತರಕಾರಿಗಳು, ಡೈರಿ ಮತ್ತು ಹಾಲಿನ ಬೂತುಗಳು, ಮಾಂಸ ಮತ್ತು ಮೀನು, ಪಶು ಆಹಾರದ ಅಂಗಡಿಗಳು ಹಾಗೂ ಹಣು ಮತ್ತು ತರಕಾರಿಗಳ ಮಾರುಕಟ್ಟೆ ಹಾಗು ತಳ್ಳುವ ಗಾಡಿಯ ಮೂಲಕ ಮಾರಾಟ ಮಾಡುವವರು ಬೆಳ್ಳಿಗೆ 6 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ನಿರ್ವಹಿಸತಕ್ಕದ್ದು ಎಂದು ಸಚಿವ ಸಿಂಗ್ ಅವರು ತಿಳಿಸಿದರು.
ಮದುವೆ ಸಮಾರಂಭ ಹಾಗೂ ಇತರೆ ಸಾಮಾಜಿಕ ಕಾರ್ಯಕ್ರಮಗಳನ್ನು ಈ ಅವಧಿಯಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ರೈಸ್ ಮಿಲ್ಸ್, ಆಯಲ್ ಮಿಲ್ಸ್, ದಾಲ್ ಮಿಲ್ಸ್, ಡೈರಿ ಪ್ರಾಡಕ್ಟ್ಸ್, ರೋಲಾರ್ ಫ್ಲ್ರೋರ್ ಮೀಲ್ಸ್, ಆರ್‍ಒ ಮತ್ತು ಡಿಸ್ಟಿಲ್ಡ್ ವಾಟರ್ ಪ್ಲಾಂಟ್ಸ್/ಪ್ಯಾಕೇಜ್ಡ್ ಡ್ರೀಕಿಂಗ್ ವಾಟರ್‍ಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳನ್ನು ಕಾರ್ಖಾನೆಯ ಆವರಣದ ಒಳಗಡೆ ಇರುವ ಸಿಬ್ಬಂದಿಯನ್ನು ಮಾತ್ರ ಬಳಸತಕ್ಕದ್ದು ಹಾಗೂ ಹೊರಗಡೆಯಿಂದ ಸಿಬ್ಬಂದಿಯನ್ನು ಬಳಸಲು ಅವಕಾಶವಿರುವುದಿಲ್ಲ ಎಂಬ ಷರತ್ತಿನ ರೂಪದಲ್ಲಿ ಮಾತ್ರ ಅನುಮತಿಸಲಾಗಿದೆ ಎಂದು ಅವರು ವಿವರಿಸಿದರು.


ಜಿಲ್ಲೆಯಲ್ಲಿ ಅನುಮತಿಸಲ್ಪಟ ಕಾರ್ಖಾನೆಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳನ್ನು ಕಾರಖಾನೆಯ ಆವರಣದ ಒಳಗಡೆ ಇರುವ ಸಿಬ್ಬಂದಿಯನ್ನು ಮಾತ್ರ ಬಳಸತಕ್ಕದ್ದು ಹಾಗೂ ಹೊರಗಡೆಯಿಂದ ಸಿಬ್ಬಂದಿಯನ್ನು ಬಳಸಲು ಅವಕಾಶವಿರುವುದಿಲ್ಲ ಷರತ್ತಿನ ರೂಪದಲ್ಲಿ ಮಾತ್ರ ಅನುಮತಿಸಲಾಗಿದೆ ಎಂದು ವಿವರಿಸಿದ ಸಚಿವ ಸಿಂಗ್ ಅವರು ಬೆಳಗ್ಗೆ 10ರ ನಂತರ ಪುನಃ ಮರುದಿನ ಬೆಳಗ್ಗೆ 06ರವರೆಗೆ ಸಾರ್ವಜನಿಕರ ಓಡಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದರು.
ಬಳ್ಳಾರಿ ಜಿಲ್ಲೆಯಾದ್ಯಂತ ಕೋವಿಡ್-19 ಪ್ರಕರಣಗಳು ದಿನೇ ದಿನೇ ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿದ್ದು ಹಾಗೂ ಅನೇಕ ಪ್ರಕರಣಗಳಲ್ಲಿ ರೋಗದ ತೀವ್ರತೆ ಹೆಚ್ಚಾಗುತ್ತಿದೆ. ಸದ್ಯ ಬಳ್ಳಾರಿ ಜಿಲ್ಲೆಯು ರಾಜ್ಯದಲ್ಲಿ ಸೊಂಕಿನ ಪ್ರಮಾಣದಲ್ಲಿ ಮೂರನೇ ಸ್ಥಾನದಲ್ಲಿ ಮತ್ತು ಡೆತ್‍ರೆಟ್ ಪ್ರಮಾಣದಲ್ಲಿ 2ನೇ ಸ್ಥಾನದಲ್ಲಿರುವುದರಿಂದ ಮತ್ತು ಜಿಲ್ಲೆಯ ಜನರ ಹಿತದೃಷ್ಟಿಯಿಂದ ಸಂಪೂರ್ಣ ಲಾಕ್‍ಡೌನ್ ಘೋಷಿಸಲಾಗಿದೆ ಎಂದು ಅವರು ತಿಳಿಸಿದರು.
ಈ ಆದೇಶ ಉಲ್ಲಂಘಿಸುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ ಸಚಿವ ಆನಂದಸಿಂಗ್ ಅವರು ಜಿಲ್ಲೆಯ ಜನರು ಕೂಡ ಈ ಸಂಪೂರ್ಣ ಲಾಕ್‍ಡೌನ್‍ಗೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ, ಎಸ್ಪಿ ಸೈದುಲು ಅಡಾವತ್,ಜಿಪಂ ಸಿಇಒ ಕೆ.ಆರ್.ನಂದಿನಿ,ಎಡಿಸಿ ಪಿ.ಎಸ್.ಮಂಜುನಾಥ ಮತ್ತಿತರರು ಇದ್ದರು.

ವರದಿ. ಎಂ. ಎಲ್. ವೆಂಕಟೇಶ್ ಬಳ್ಳಾರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend