ಮಾ.25 ರಿಂದ ಏ.06 ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿರ್ಬಂಧ ಜಿಲ್ಲಾಧಿಕಾರಿಗಳಿಂದ ಖಡಕ್ ಎಚ್ಚರಿಕೆ…!!!

Listen to this article

ಮಾ.25 ರಿಂದ ಏ.06 ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ
ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿರ್ಬಂಧ
ಬಳ್ಳಾರಿ:ಜಿಲ್ಲೆಯಾದ್ಯಂತ ಮಾ.25 ರಿಂದ ಏ.06 ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ನಡೆಯಲಿದ್ದು, ಶಾಂತಿ-ಸುವ್ಯವಸ್ಥೆ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ಅನ್ವಯ ನಿರ್ಭಂದಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲಿನ ಜೆರಾಕ್ಸ್, ಕಂಪ್ಯೂಟರ್, ಸೈಬರ್ ಸೆಂಟರ್‍ಗಳುಕಾರ್ಯನಿರ್ವಹಿಸುವಂತಿಲ್ಲ ಮತ್ತು ಅನಧೀಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಿದೆ.
ಈ ಆದೇಶವು ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯ ನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ…

ವರದಿ. ವಿರೇಶ್, ಎಚ್, ಬಳ್ಳಾರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend