ಮಾದರಿ ನೀತಿ ಸಂಹಿತೆ ಉಲ್ಲಂಘನೆ; ರೂ.1.30 ಲಕ್ಷ ನಗದು ಹಣ ಜಪ್ತಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ…!!!

Listen to this article

ಮಾದರಿ ನೀತಿ ಸಂಹಿತೆ ಉಲ್ಲಂಘನೆ; ರೂ.1.30 ಲಕ್ಷ ನಗದು ಹಣ ಜಪ್ತಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ
ಬಳ್ಳಾರಿ:ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಅನಧೀಕೃತವಾಗಿ ಸಾಗಿಸುತ್ತಿದ್ದ ರೂ.1,30,380 ನಗದು ಹಣವನ್ನು ಶನಿವಾರ 93-ಬಳ್ಳಾರಿ ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ವೈ.ಬೂದಿಹಾಳ್ ಚೆಕ್ ಪೋಸ್ಟ್ ಬಳಿ ಫ್ಲೈಯಿಂಗ್ ಸ್ಕ್ವಾಡ್ ತಂಡವು ಜಪ್ತಿ ಮಾಡಲಾಗಿದೆ ಮತ್ತು ಪ್ರಕರಣ ದಾಖಲು ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ಚುನಾವಣೆಯ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಈಗಾಗಲೇ ವಿವಿಧ ತಂಡಗಳನ್ನು ರಚಿಸಲಾಗಿದ್ದು, ಅವುಗಳು ಕಾರ್ಯಪ್ರವೃತ್ತವಾಗಿದೆ. 16 ಫ್ಲೈಯಿಂಗ್ ಸ್ಕ್ವಾಡ್, 24 ಎಸ್‍ಎಸ್‍ಟಿ ತಂಡ ಮತ್ತು 7 ಅಬಕಾರಿ ತಂಡ ಕಾರ್ಯ ನಿರ್ವಹಿಸುತ್ತಿವೆ. ಈವರೆಗೆ ಒಟ್ಟು 45 ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ…

ವರದಿ. ವಿರೇಶ್, ಎಚ್, ಬಳ್ಳಾರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend