ರಂಗಭೂಮಿಯು ಸೃಜನಶೀಲತೆಯ ತಾಣ: ಪ್ರೊ. ನಾಗೇಶ ವಿ ಬೆಟ್ಟಕೋಟೆ…!!!

Listen to this article

ರಂಗಭೂಮಿಯು ಸೃಜನಶೀಲತೆಯ ತಾಣ: ಪ್ರೊ. ನಾಗೇಶ ವಿ ಬೆಟ್ಟಕೋಟೆ

ಬಳ್ಳಾರಿ,:ಮನೋರಂಜನೆಗೆ ಹಲವಾರು ಮಾಧ್ಯಮಗಳಿದ್ದರೂ, ಸೃಜನಶೀಲತೆಯನ್ನು ಅರಳಿಸುವ ಪಾತ್ರವನ್ನು ರಂಗಭೂಮಿ ಮಾಡುತ್ತದೆ ಎಂದು ಮೈಸೂರಿನ ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ನಾಗೇಶ ವಿ ಬೆಟ್ಟಕೋಟೆ ಅವರು ಹೇಳಿದರು.


ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಪ್ರದರ್ಶನ ಕಲೆ ನಾಟಕ, ಕನ್ನಡ ಮತ್ತು ಇಂಗ್ಲೀಷ್ ಅಧ್ಯಯನ ವಿಭಾಗಗಳು ಜಂಟಿಯಾಗಿ ಬುಧವಾರ ಆಯೋಜಿಸಿದ್ದ ‘ರಂಗಭೂಮಿಯ ಕಾಲಾತೀತ ಅಸ್ತಿತ್ವ’ ಎಂಬ ವಿಷಯದ ಕುರಿತು ಒಂದು ದಿನದ ಅಂತರ್ ಶಿಸ್ತೀಯ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಂಗಭೂಮಿಯು ಹಲವಾರು ಕ್ಷೇತ್ರಗಳಲ್ಲಿ ಕ್ರಾಂತಿಗಳಿಗೆ ಎಡೆಮಾಡಿಕೊಟ್ಟಿದ್ದು, ರಂಗಭೂಮಿ ಇಂದಿಗೂ ಪ್ರಸ್ತುತವಾಗಿದೆ. ನಮ್ಮ ದೇಶದಲ್ಲಿ ರಂಗಭೂಮಿ ಅಗತ್ಯಕ್ಕೆ ಮಾತ್ರ ಸೀಮಿತವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ರಂಗಭೂಮಿಯ ಶಿಕ್ಷಣ ಉತ್ತಮವಾಗಿದ್ದರೆ ಕಲಾವಿದರು ಸಮಾಜಕ್ಕೆ ನೈತಿಕ ಶಿಕ್ಷಣ ನೀಡಲು ಸಹಕಾರಿಯಾಗುತ್ತದೆ. ಉತ್ತಮ ಪ್ರದರ್ಶನವು ಬೇರೆ ಬೇರೆ ಭಾಷೆಗಳಿಗೆ ತಾನಾಗೆಯೇ ಪ್ರದರ್ಶನಕ್ಕೆ ಅನುವು ಮಾಡಿಕೊಡುತ್ತದೆ. ಪ್ರದರ್ಶನ ಕಲೆಗಳೂ ವಿಶ್ವವಿದ್ಯಾಲಯದ ಅವಿಭಾಜ್ಯ ಅಂಗವಾಗಿಸುವ ನಿಟ್ಟಿನಲ್ಲಿ ಸರ್ಕಾರವು ಗಮನಹರಿಸಬೇಕು ಎಂದು ಹೇಳಿದರು.


ಮಹಾರಾಷ್ಟ್ರದ ಎಸ್‍ಪಿಪಿ ಮಹಾವಿದ್ಯಾಲಯ, ಸಿರ್ಸಲ, ಪಾರ್ಲಿ ವೈಜನಾಥ್‍ದ ಪ್ರದರ್ಶನ ಕಲೆ ನಾಟಕ ವಿಭಾಗದ ಮುಖ್ಯಸ್ಥರಾದ ಡಾ.ಚಂದ್ರಶೇಖರ್ ಕನಸೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ರಂಗಭೂಮಿಯೂ ಸಮಾಜದಲ್ಲಿ ಗಂಭೀರ ವಿಷಯಗಳತ್ತ ಬೆಳಕು ಚೆಲ್ಲುವ ಕೆಲಸ ಮಾಡುತ್ತಾ ಬಂದಿದೆ ಎಂದು ತಿಳಿಸಿದರು.
ಕಾರ್ಯಕ್ರಮ ಸಂಯೋಜಕರಾದ ಪ್ರೊ.ಶಾಂತನಾಯ್ಕ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ನಾಟಕ ವಿಭಾಗವು 2018ರಲ್ಲಿ ಆರಂಭವಾಗಿ ಕಡಿಮೆ ಸಮಯದಲ್ಲಿ ತನ್ನದೆ ಆದ ಕಾರ್ಯಚಟುವಟಿಕೆಗಳ ಮುಖಾಂತರ ಗಮನ ಸೆಳೆದಿದೆ. ನಾಟಕ ವಿಭಾಗವು ಹಲವಾರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಿನೆಮಾ, ಧಾರವಾಹಿ, ರಂಗಭೂಮಿಗಳಲ್ಲಿ ಅವಕಾಶಗಳನ್ನು ನೀಡಿದೆ ಎಂದು ಹೇಳಿದರು.
ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಕೆ.ಎಂ.ಮೇತ್ರಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಶ್ವದಾದ್ಯಂತ ಆಚರಿಸಲ್ಪಡುವ ದಿನಾಚರಣೆಗಳು ನಮ್ಮ ದೇಶದಲ್ಲಿವೆ. ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದೊಂದಿಗೆ ಒಡಂಬಡಿಕೆಯ ಮಾಡಿಕೊಂಡು ರಂಗಭೂಮಿ ಜೊತೆಗೆ ಸಂಗೀತ ಸಂಬಂಧಿತ ಕಾರ್ಯಕ್ರಮಗಳನ್ನು ನಡೆಸಬಹುದು ಎಂದು ಹೇಳಿದರು.
ಜನ ಸಂಘಟನೆಗಳ ಜೊತೆ ಸಂವಾದ ಕಾರ್ಯಕ್ರಮಗಳನ್ನು ನಡೆಸುವುದರಿಂದ ವಿಭಾಗದ ಬೆಳೆವಣಿಗೆಯಾಗುತ್ತದೆ. ವಿದ್ವತ್ ವಲಯದಲ್ಲಿ ಕಲೆಗಳನ್ನು ಪ್ರದರ್ಶನಕ್ಕೆ ಬಳಸುವ ಕಾರ್ಯಚಟುವಟಿಕೆಗಳ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ವಿವಿಯ ಕುಲಸಚಿವರಾದ (ಮೌಲ್ಯಮಾಪನ) ಪ್ರೊ.ರಮೇಶ್ ಓಲೇಕಾರ್ ಸೇರಿದಂತೆ ನಾಟಕ ವಿಭಾಗದ ಅತಿಥಿ ಉಪನ್ಯಾಸಕರುಗಳಾದ ಸಹನಾ ಪಿಂಜಾರ, ಹೇಮೇಶ್ವರ ಕೆ ಹಾಗೂ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ, ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸಮ್ಮೇಳನದಲ್ಲಿ 100ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿ ತಮ್ಮ ಸಂಶೋಧನಾ ಕುರಿತಾದ ಪ್ರಬಂಧವನ್ನು ಮಂಡಿಸಿದರು.
ಅತಿಥಿಗಳನ್ನು ಪ್ರೊ. ಎನ್ ಶಾಂತನಾಯ್ಕ ಸ್ವಾಗತಿಸಿದರು. ಕಾರ್ಯಕ್ರಮವನ್ನು ಅತಿಥಿ ಉಪನ್ಯಾಸಕರಾದ ಡಾ. ಅಣ್ಣಾಜಿ ಕೃಷ್ಣಾರೆಡ್ಡಿ ನಿರೂಪಿಸಿದರು. ಇಂಗ್ಲೀಷ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ವಾತ್ಸಲ್ಯ ವಂದಿಸಿದರು…

ವರದಿ. ವಿರೇಶ್, ಎಚ್, ಬಳ್ಳಾರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend