ಬಳ್ಳಾರಿ (ಪ.ಪಂ) ಲೋಕಸಭೆ ಚುನಾವಣೆ: ಒಂದು ನಾಮಪತ್ರ ಸಲ್ಲಿಕೆ…!!!

Listen to this article

ಬಳ್ಳಾರಿ (ಪ.ಪಂ) ಲೋಕಸಭೆ ಚುನಾವಣೆ: ಒಂದು ನಾಮಪತ್ರ ಸಲ್ಲಿಕೆ

ಬಳ್ಳಾರಿ:09-ಬಳ್ಳಾರಿ (ಪ.ಪಂ) ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಗುರುವಾರದಂದು ಒಂದು ನಾಮಪತ್ರ ಸಲ್ಲಿಕೆಯಾಗಿದೆ.
ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಪರವಾಗಿ ಅವರ ಸೂಚಕರು ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಗೆ ಇಂದು ಒಂದು ನಾಮಪತ್ರ ಸಲ್ಲಿಸಿದರು.
ಈ ವೇಳೆ ಮಾಜಿ ಶಾಸಕ ಜಿ.ಸೋಮಶೇಖರ್ ರೆಡ್ಡಿ, ರಾಜ್ಯ ಎಸ್‍ಟಿ ಮೋರ್ಚಾ ಅಧ್ಯಕ್ಷ ಬಂಗಾರು ಹನುಮಂತು, ವಿಜಯನಗರ ಜಿಲ್ಲೆಯ ಕಾರ್ಯದರ್ಶಿ ರಾಮಣ್ಣ, ವಿಜಯನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಚನ್ನಬಸವನ ಗೌಡ ಇದ್ದರು.
‘ನಾಮಪತ್ರ ಸಲ್ಲಿಸಲು ಏಪ್ರಿಲ್ 19 ಕೊನೆ ದಿನವಾಗಿದ್ದು, ಏಪ್ರಿಲ್ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 22 ರಂದು ನಾಮಪತ್ರ ವಾಪಸ್ಸು ಪಡೆಯಲು ಕೊನೆಯ ದಿನವಾಗಿದೆ’ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ…

ವರದಿ. ವಿರೇಶ್, ಎಚ್, ಬಳ್ಳಾರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend