ಪರೀಕ್ಷೆ ಗಳನ್ನುರದ್ದುಪಡಿಸ ಬೇಕೆಂದು AIDSO ವತಿಯಿಂದಪ್ರತಿಭಟನೆ ನಡೆಸಿದರು…!!!

Listen to this article

ಪರೀಕ್ಷೆ ಗಳನ್ನುರದ್ದುಪಡಿಸ ಬೇಕೆಂದು AIDSO ವತಿಯಿಂದಪ್ರತಿಭಟನೆ ನಡೆಸಿದರು.
ಬಳ್ಳಾರಿ. ಗಣಿ ನಗರದಲ್ಲಿ ಇಂದು, ಅಖಿಲ
ಕರ್ನಾಟಕ ವಿದ್ಯಾರ್ಥಿಗಳ ಪ್ರತಿಭಟನೆ ದಿನ
ಪದವಿ ಸ್ನಾತಕೋ ತ್ತರ ಪದವಿ ಇಂಜಿನಿಯರಿಂಗ್ ಡಿಪ್ಲೊಮಾ ಹಾಗೂ ಫಾರ್ಮಸಿ ವಿದ್ಯಾರ್ಥಿಗಳ 1,3,ಮತ್ತು 5ನೇ ಸೆಮಿಸ್ಟರ್ ಪರೀಕ್ಷೆಗಳನ್ನು ರದ್ದುಗೊಳಿಸಬೇಕೆಂದು ಪ್ರತಿಭಟನೆ AIDSOವತಿಯಿಂದ ನಡೆಯಿತು.
ಇಂದು ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ವತಿಯಿಂದ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಪ್ರತಿಭಟನೆ ದಿನ ಅಂಗವಾಗಿ ಬಳ್ಳಾರಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ಮಾಡಿ ಮಾನ್ಯ ಜಿಲ್ಲಾಧಿಕಾರಿಗಳ ಮುಖಾಂತರ ತಮ್ಮ ಮಾನ್ಯ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಹಾಗೂ ವಿ ಎಸ್ ಕೆ ವಿಶ್ವವಿದ್ಯಾನಿಲಯದ ಕುಲಪತಿಗಳು,ಸರಳಾದೇವಿ ಕಾಲೇಜಿನ ಪ್ರಾಂಶುಪಾಲರು, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಿಗೆ ಮತ್ತು ಬಳ್ಳಾರಿ ಜಿಲ್ಲೆ ಕುರುಗೋಡು ಶಿರಗುಪ್ಪ,ಸಂಡೂರು, ತಾಲೂಕಿನ ತಾಸಿಲ್ದಾರರು ಮುಖಾಂತರ ಮನವಿ ಪತ್ರ ಸಲ್ಲಿಸಲಾಯಿತು.
ಈ ಪ್ರತಿಭಟನೆ ಉದ್ದೇಶಿಸಿ ಎಐಡಿಎಸ್ಓ ಜಿಲ್ಲಾಧ್ಯಕ್ಷರಾದ ಗುರಳ್ಳಿ ರಾಜ,ಅವರು ಮಾತನಾಡುತ್ತಾ ರಾಜ್ಯಾದ್ಯಂತ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಪ್ರತಿಭಟನೆ ದಿನದಲ್ಲಿ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡರು. ಪದವಿ ಸ್ನಾತಕೋತ್ತರ ಪದವಿ ಎಂಜಿನಿಯರಿಂಗ್ ಡಿಪ್ಲೊಮಾ ಹಾಗೂ ಫಾರ್ಮಸಿ ವಿದ್ಯಾರ್ಥಿಗಳು ತಮ್ಮ ಬೇಡಿಕೆಗಳ ಫಲಕ ಹಿಡಿದು ಮನೆಗಳಿಂದ ಕಾಲೇಜುಗಳಿಂದ ವಿಶ್ವವಿದ್ಯಾಲಯಗಳ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿ, ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.ಒಂದು ತಿಂಗಳಲ್ಲಿ 2 ಸೆಮಿಸ್ಟರ್ ಪರೀಕ್ಷೆ ಬರೆಯಲಾರೆವು ಎಂಬುದು ರಾಜ್ಯದ ವಿದ್ಯಾರ್ಥಿಗಳ ಕೂಗು ಆಗಿದೆ, ಎಂದು ಹೇಳಿದರು.
ಈ ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ಜೆ. ಪಿ. ರವಿಕಿರಣ್ ಅವರು ಮಾತನಾಡುತ್ತಾ, ಕಳೆದ ಒಂದು ವಾರದಿಂದ ನಡೆದ ಗೂಗಲ್ ಫಾರ್ಮ ಸಮೀಕ್ಷೆಯಲ್ಲಿ ಸುಮಾರು 40 ಸಾವಿರಕ್ಕೂಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡು, ಕಳೆದ ಸೆಮಿಸ್ಟರ್ ಪರೀಕ್ಷೆಯನ್ನು ಪ್ರಚಲಿತ ಸೆಮಿಸ್ಟರ್ ನಡೆವೆ ನಡೆಸುವುದು,ಬೇಡ. ಎಂಬ ಅಭಿಪ್ರಾಯ ಮಂಡಿಸಿದರು. ತದನಂತರ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಯಿತು. ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡರೂ ಪ್ರ ಸತ್ತಾತ್ಮಕ ಚರ್ಚೆಯ ನಂತರವೇ ಮುಂದಿನ ಹಾದಿ ನಿರ್ಧರಿಸಬೇಕು,ಎಂಬುದು ವಿದ್ಯಾರ್ಥಿಗಳ ಬೇಡಿಕೆಯಾಗಿದೆ ಎಂದು ಹೇಳಿದರು.
*ವಿದ್ಯಾರ್ಥಿಗಳ ಬೇಡಿಕೆಗಳು*
1. ಪದವಿ ಎಂಜಿನಿಯರಿಂಗ್ ಡಿಪ್ಲೊಮಾ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಕಳೆದ ಸೆಮಿಸ್ಟರಿನ ಪರೀಕ್ಷೆಯನ್ನು ನಡೆಸುತ್ತೇವೆ ಎಂಬ ಅವೈಜ್ಞಾನಿಕ ಮತ್ತು ಅತಾರ್ಕಿಕವಾದ ನಿರ್ಧಾರವನ್ನು ಹಿಂ ಪಡೆಯಿರಿ.
2. ಸಂಬಂಧಪಟ್ಟವರ ಅಭಿಪ್ರಾಯವನ್ನು ಪಡೆಯದೆ ಏಕಪಕ್ಷೀಯವಾಗಿ ಹಾಗೂ ಅಪ್ರಜಾತಾಂತ್ರಿಕವಾಗಿ ನಿರ್ಧಾರ ತೆಗೆದುಕೊಳ್ಳುವುದನ್ನು ನಿಲ್ಲಿಸಿ.
3. ನೀತಿಗಳನ್ನು ರಚಿಸುವವರೆ ಉತ್ತರಿಸಿ, ವಿದ್ಯಾರ್ಥಿ ಸಮೂಹದ ಮೇಲೆ ವಿಪರೀತ ಹೊರೆ ಹೆ ರುವುದನ್ನು ನಿಲ್ಲಿಸಿ.
4. ಆಫ್ಲೈನ್ ತರಗತಿಗಳು ಆರಂಭವಾಗುವ ಮುನ್ನ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ವ್ಯಾಕ್ಸಿನ್ ನೀಡಿರಿ.
ಈ ಸಂದರ್ಭದಲ್ಲಿ ಎಐಡಿಎಸ್ಓ ಜಿಲ್ಲಾ ಸೆಕ್ರೆಟ ರಿಯಾಟ್ ಸದಸ್ಯರಾದ ಕೆ ಈರಣ್ಣ. ಎಂ.ಶಾಂತಿ.
ಕಂಬಳಿ ಮಂಜುನಾಥ್.
ಮತ್ತು ಸದಸ್ಯರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವರದಿಗಾರರು, ಎಂ.ಎಲ್. ವೆಂಕಟೇಶ್ಬಳ್ಳಾರಿ.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend