ವಿದ್ಯುತ್ ದರ ಹೆಚ್ಚಳ ಖಂಡಿಸಿ ನೇಕಾರರಿಂದ ನೇಕಾರ ನಗರಿ ಬಂದ್…!!!

Listen to this article

ವಿದ್ಯುತ್ ದರ ಹೆಚ್ಚಳ ಖಂಡಿಸಿ ನೇಕಾರರಿಂದ ನೇಕಾರ ನಗರಿ ಬಂದ್

ರಬಕವಿ-ಬನಹಟ್ಟಿ: ಬಾಗಲಕೋಟೆ ಜಿಲ್ಲೆಯ ನೇಕಾರ ನಗರ ಬನಹಟ್ಟಿ ಬಂದ್ ಮಾಡಿ ವಿದ್ಯುತ್ ಹೆಚ್ಚಳ ಖಂಡಿಸಿ ಜಮಖಂಡಿ-ಮಿರಜ್ ಅಂತರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡಲಾಯಿತು. ನೇಕಾರರಿಗೆ ಈಗಾಗಲೇ ವಿದ್ಯುತ್ ದರ ಹೊರೆಯಾಗಿ ಪರಮಿಸಿರುವ ಸಂದರ್ಭದಲ್ಲಿ ದರ ಹೆಚ್ಚಳ ಮಾಡಿದ್ದು ಗಾಯದ ಮೇಲೆ ಬರೆ ಎಳೆದಂತಾಗಿದೆ ಆದ್ದರಿಂದ ಸರ್ಕಾರ ನೇಕಾರರಿಗೆ ಉಚಿತವಾಗಿ ವಿದ್ಯುತ್ ನಿಡಬೇಕೆಂದು ಆಗ್ರಹಿಸಲಾಯಿತು. ಮತ್ತು ಕಳೆದ ಮೂರು ವರ್ಷಗಳಲ್ಲಿ ಸಾಲದ ಹೊರೆ ತಾಳಲಾರದೆ 43 ಜನ ಆತ್ಮಹತ್ಯೆ ಮಾಡಿಕೊಂಡ ನೇಕಾರರ ಪ್ರತಿ ಮನೆಗೆ ಸರ್ಕಾರ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು. ಈಗಾಗಲೇ ಕಳೆದ ಭಾಜಪಾ ಸರ್ಕಾರದ ಮುಖ್ಯಮಂತ್ರಿಗಳನ್ನು ಹಲವು ಬಾರಿ ಬೇಟಿ ಮಾಡಿ ಮನವಿ ಮಾಡಲಾಗಿದೆ ಈಗ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು ಮಾನ್ಯ ಮುಖ್ಯಮಂತ್ರಿಗಳು ಆದಷ್ಟು ಬೇಗ ತಮ್ಮ ಬೇಡಿಕೆ ಈಡೇರಿಸಲು ಮನವಿ ಮಾಡಿದರು. ದಿನ ಬಳಕೆ ವಸ್ತುಗಳ ಬೆಲೆ ಗಗನಕ್ಕೇರಿವೆ ಜನ ಜೀವನ ನಡೆಸಲು ಪರಡಾಡುವಂತಾಗಿದೆ ಇದು ನೇರವಾಗಿ ಬಡ ಕೂಲಿ ಕಾರ್ಮಿಕರ ಮೇಲೆ ಪರಿಣಾಮ ಬೀರುತಿದ್ದು ಸಂಕಷ್ಟ ಪರಿಸ್ಥಿತಿ ಎದುರಾಗಿದೆ ಆದಷ್ಟು ಬೇಗ ಸರ್ಕಾರ ಎಚ್ಚೆತ್ತು ಬೆಲೆ ಏರಿಕೆ ಕ್ರಮವನ್ನು ಸರಿಪಡಿಸಿ ಸಾಮಾನ್ಯ ಜನರ ಕಷ್ಟ ಆಲಿಸಬೇಕು ಎಂದು ಆಗ್ರಹಿಸಿದರು. ಒಂದು ವೇಳೆ ಈ ರೀತಿ ಮುಂದುವರೆದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ವರದಿ.
ಬಸವರಾಜ ನಂದೆಪ್ಪನವರ
ರಬಕವಿ ಬನಹಟ್ಟಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend