ನಾಳೆಯಿಂದ ಅಂದರೆ (ಏಪ್ರಿಲ್ 22)ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭ…!!!

Listen to this article

ಬೆಂಗಳೂರು : ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಏಪ್ರಿಲ್ 22 ರ ನಾಳೆಯಿಂದ ಮೇ.18ರವರೆಗೆ ನಡೆಯಲಿದ್ದು, ಈ ಬಾರಿ ಒಟ್ಟು 6.84 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ ಮಾಡಲಾಗಿದ್ದು, ಹಿಜಾಬ್ ಧರಿಸಿ ಬಂದ್ರೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ಇಲ್ಲ ಎಸ್ ಎಸ್‌ಎಲ್ ಸಿ ಪರೀಕ್ಷೆಯಂತೆ ದ್ವಿತೀಯ ಪಿಯುಸಿ ಪರೀಕ್ಷೆಗೂ ಹಿಜಾಬ್ ನಿಷೇಧ ಮಾಡಲಾಗುವುದು.

ಏಪ್ರಿಲ್ 22 ರಿಂದ ಮೇ. 18 ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಎಸ್‌ಎಸ್ ಎಲ್ ಸಿ ಮಾದರಿಯಲ್ಲೇ ನಡೆಸಲಾಗುವುದು. ರಾಜ್ಯದ ಶೇ. 90 ರಷ್ಟು ಕಾಲೇಜುಗಳಲ್ಲಿ ಸಮವಸ್ತ್ರ ಇದೆ. ಶೇ. 10 ರಷ್ಟು ಕಾಲೇಜುಗಳಲ್ಲಿ ಸಮವಸ್ತ್ರ ಇಲ್ಲ. ದ್ವಿತೀಯ ಪಿಯುಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಯಾವುದೇ ಧರ್ಮ ಸೂಚನೆ ವಸ್ತ್ರ ಧರಿಸಿ ಬರುವಂತಿಲ್ಲ ಎಂದು ಶಿಕ್ಷಣ ಇಲಾಖೆ ಹೇಳಿದೆ.

ಮಾದರಿ ಪ್ರಶ್ನೆಪತ್ರಿಕೆಯಂತೆ ಅಂತಿಮ ಪರೀಕ್ಷೆ ಇರುತ್ತೆ. ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷಗೆ ನೊಂದಣಿ ಮಾಡಿಕೊಳ್ಳಲಾಗಿದೆ. ಈ ಪೈಕಿ 3,46,936 ಬಾಲಕರು, 3,37,319 ಬಾಲಕಿಯರಿದ್ದಾರೆ. ಒಟ್ಟು 1076 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ `KSRTC’ಯಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಎಸ್ ಎಸ್ ಎಲ್ ಸಿ ಪರೀಕ್ಷೆಯ ( SSLC Exam ) ಸಂದರ್ಭದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷೆಗೆ ತೆರಳೋದಕ್ಕೆ, ಬರೆದು ವಾಪಾಸ್ ಪರೋದಕ್ಕೆ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ( KSRTC Bus ) ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿತ್ತು. ಇದೀಗ ಏ.22ರಿಂದ ಆರಂಭಗೊಳ್ಳುತ್ತಿರುವಂತ ದ್ವಿತೀಯ ಪಿಯು ಪರೀಕ್ಷೆಗೆ ( Second PU Exam ) ವಿದ್ಯಾರ್ಥಿಗಳಿಗೂ ಇದೇ ಅವಕಾಶವನ್ನು ನೀಡಿದೆ.

ಹೀಗಿರಲಿದೆ ಪ್ರಶ್ನೆ ಪತ್ರಿಕೆ!: ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದ ಪ್ರತಿ ಪತ್ರಿಕೆಯನ್ನು ಸುಲಭ ಮಾದರಿಯಲ್ಲಿ ರೂಪಿಸಲಾಗುತ್ತಿದೆ. 1 ಅಂಕದ ಪ್ರಶ್ನೆಗಳನ್ನು 10ಕ್ಕೆ ಹೆಚ್ಚಿಸಲಾಗಿದೆ. ಒಂದು ಅಂಕದ ಪ್ರಶ್ನೆಗಳನ್ನು ಹೆಚ್ಚಿಸಿದ್ದು ಮತ್ತು ಪ್ರಶ್ನೆಗಳಿಗೆ ಬಹು ಆಯ್ಕೆ ನೀಡಿರುವುದು ಇನ್ನಷ್ಟು ಸರಳವಾಗಿದೆ.

ಮೊದಲು ವಿಜ್ಞಾನ ವಿಷಯದಲ್ಲಿ ಒಂದು ಪ್ರಶ್ನೆ ಪತ್ರಿಕೆಯಲ್ಲಿ 105 ಪ್ರಶ್ನೆಗಳು ಇರುತ್ತಿದ್ದವು. ಈ ಬಾರಿಯಿಂದ 140 ಪ್ರಶ್ನೆಗಳಿರಲಿದೆ. ಆದರೆ, ವಿದ್ಯಾರ್ಥಿಗಳು 70 ಅಂಕಗಳಿಗೆ ಉತ್ತರಿಸಬೇಕಿದೆ. ಈ‌ ಮೊದಲು ಕಲಾ ಹಾಗೂ ವಾಣಿಜ್ಯ ವಿಭಾಗದ ಪತ್ರಿಕೆಗಳಿಗೆ ಈ ಮೊದಲು 140 ಪ್ರಶ್ನೆಗಳಿರುತ್ತಿದ್ದವು, ಈ ಸಲ 167 ಕ್ಕೆ ಹೆಚ್ಚಿಸಲಾಗಿದೆ. 100 ಅಂಕಗಳಿಗಷ್ಟೇ ಉತ್ತರಿಸಬೇಕಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ದಿನಾಂಕ 22-04-2022, ಶುಕ್ರವಾರ – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ

ದಿನಾಂಕ 23-04-2022, ಶನಿವಾರ – ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ

ದಿನಾಂಕ 24-04-2022, ಭಾನುವಾರ ರಜೆ

ದಿನಾಂಕ 25-04-2022, ಸೋಮವಾರ – ಅರ್ಥಶಾಸ್ತ್ರ

ದಿನಾಂಕ 26-04-2022, ಮಂಗಳವಾರ – ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಾಸಾಯನ ಶಾಸ್ತ್ರ, ಮೂಲ ಗಣಿತ

ದಿನಾಂಕ 27-04-2022, ಬುಧವಾರ – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

ದಿನಾಂಕ 28-04-2022, ಗುರುವಾರ – ಕನ್ನಡ, ಅರೇಬಿಕ್

ದಿನಾಂಕ 04-05-2022, ಬುಧವಾರ – ಭೂಗೋಳಶಾಸ್ತ್ರ, ಜೀವಶಾಸ್ತ್ರ

ದಿನಾಂಕ 05-05-2022, ಗುರುವಾರ – ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೈಬೊಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್

ದಿನಾಂಕ 06-05-2022, ಶುಕ್ರವಾರ – ಇಂಗ್ಲೀಷ್

ದಿನಾಂಕ 10-05-2022, ಮಂಗಳವಾರ – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

ದಿನಾಂಕ 14-05-2022, ಶನಿವಾರ – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ

ದಿನಾಂಕ 17-05-2022, ಮಂಗಳವಾರ – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ

ದಿನಾಂಕ 18-05-2022, ಬುಧವಾರ – ಹಿಂದಿ..

ವರದಿ. ಸುನಿಲ್ ಮೆಟ್ರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend