ಚುನಾವಣೆಗೆ ನಿಯೋಜಿತ ಅಧಿಕಾರಿಗಳ ಮೇಲೆ ಹೆಚ್ಚಿನ ಜವಾಬ್ದಾರಿಗಳಿಗೆ- ಚುನಾವಣಾ ವೀಕ್ಷಕ- ದೀಪಂಕರ್ ಮೋಹಪಾತ್ರ…!!!

Listen to this article

ಚುನಾವಣೆಗೆ ನಿಯೋಜಿತ ಅಧಿಕಾರಿಗಳ ಮೇಲೆ ಹೆಚ್ಚಿನ ಜವಾಬ್ದಾರಿಗಳಿಗೆ- ಚುನಾವಣಾ ವೀಕ್ಷಕ- ದೀಪಂಕರ್ ಮೋಹಪಾತ್ರ
ಬೀದರ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ನಿಯೋಜಿತ ಅಧಿಕಾರಿಗಳ ಮೇಲೆ ಹೆಚ್ಚಿನ ಜವಾಬ್ದಾರಿಗಳಿಗೆ ಹಾಗಾಗಿ ಎಲ್ಲರೂ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕೆಂದು ಬೀದರ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಾಮಾನ್ಯ ವೀಕ್ಷಕರಾಗಿ ಆಗಮಿಸಿದ ದೀಪಂಕರ್ ಮೋಹಪಾತ್ರ ಹೇಳಿದರು.


ಅವರು ಬುಧವಾರ ಸಂಜೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ 07-ಬೀದರ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ನಿಯೋಜಿತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.
ಚೆಕಪೋಸ್ಟಗಳಲ್ಲಿ ವಾಹನಗಳನ್ನು ಸರಿಯಾಗಿ ತಪಾಸಣೆ ಮಾಡಬೇಕು ಹಾಗೂ ಅಕ್ರಮ ಮಧ್ಯ ಸಾಗಾಟ ನಡೆಯದಂತೆ ನೋಡಿಕೊಳ್ಳಬೇಕು ಮತ್ತು ವಿವಿಧ ಸಮಿತಿಯ ನೋಡಲ್ ಅಧಿಕಾರಿಗಳು ಪ್ರತಿದಿನದ ವರದಿಯನ್ನು ಸರಿಯಾದ ಸಮಯಕ್ಕೆ ನೀಡಬೇಕು ಮತ್ತು ಚುನಾವಣೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಎಲ್ಲರೂ ನಿಗಾ ವಹಿಸಬೇಕೆಂದು ಹೇಳಿದರು.
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ಅವರು ಮಾತನಾಡಿ ಜಿಲ್ಲೆಯಲ್ಲಿ ಶೇ. 85 ಪ್ರತಿಶತ ಮತಗಟ್ಟೆಗಳಿಗೆ ಸಿಸಿಟಿವಿ ಕವರೇಜ್ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 1,528 ಮತಗಟ್ಟೆಗಳಿದ್ದು, ಅವುಗಳಲ್ಲಿ 328 ಕ್ರಿಟಿಕಲ್ ಮತಗಟ್ಟೆಗಳಿಗೆ ಹಾಗೂ ಜಿಲ್ಲೆಯ ಪ್ರತಿ ವಿಧಾನ ಸಭಾ ಕ್ಷೇತ್ರಗಳಲ್ಲಿ 5 ಸಖಿ ಮತಗಟ್ಟೆ ಇರಲಿದ್ದು ಇದರಲ್ಲಿ ಎಲ್ಲರೂ ಮಹಿಳೆಯರೆ ಇರಲಿದ್ದಾರೆ. ಮತ್ತು ಒಂದು ಯುವ ಮತಗಟ್ಟೆ ಹಾಗೂ ವಿಶೇಷ ಚೇತನರ ಒಂದು ಮತಗಟ್ಟೆಯು ಇರಲಿದೆ ಎಂದು ಚುನಾವಣಾ ವೀಕ್ಷಕರಿಗೆ ತಿಳಿಸಿದರು.
ಅಬಕಾರಿ ಮತ್ತು ಕಮರ್ಶಿಯಲ್ ಟೆಕ್ಸ ಸೇರಿದಂತೆ ಇತರೆ ಅಧಿಕಾರಿಗಳೊಂದಿಗೆ ಈಗಾಗಲೇ ಅಂತರಾಜ್ಯ ಗಡಿಗಳ ಸಭೆಯನ್ನು ಮಾಡಲಾಗಿದೆ. ಜಿಲ್ಲಾ ಚುನಾವಣಾಧಿಕಾರಿಗಳ ಕಛೇರಿ ಮತ್ತು ಪ್ರತಿ ವಿಧಾನಸಭಾ ಕ್ಷೇತ್ರಗಳ ಎ.ಆರ್.ಓ ಕಛೇರಿಗಳಲ್ಲಿ ಕಂಟ್ರೋಲ್ ರೂಂಮಗಳನ್ನು ತೆರೆಯಲಾಗಿದೆ ಎಂದು ಚುನಾವಣೆಗೆ ಸಂಬಧಿಸಿದ ಇತರೆ ವಿಷಯಗಳ ಮಾಹಿತಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳು ಚುನಾವಣಾ ವೀಕ್ಷಕರಿಗೆ ವಿವರಿಸಿದರು.


ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಎಮ್.ಸಿ.ಸಿ. ನೋಡಲ್ ಅಧಿಕಾರಿ ಮತ್ತು ಜಿಲ್ಲಾ ಸ್ವೀಫ್ ಸಮಿತಿ ಅಧ್ಯಕ್ಷರಾದ ಡಾ.ಗಿರೀಶ್ ಬದೋಲೆ ಅವರು ಮಾತನಾಡಿ ಜಿಲ್ಲೆಯಲ್ಲಿ ಮತದಾನ ಜಾಗೃತಿ ಕುರಿತು ಹಲವಾರು ಕಾರ್ಯಕ್ರಮಳನ್ನು ಹಮ್ಮಿಕೊಳ್ಳಲಾಗುತ್ತಿದೆ. ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಶಾಲಾ- ಕಾಲೇಜುಗಳು ಹಾಗೂ ವಸತಿ ನಿಲಯಗಳಲ್ಲಿ ಮತದಾನ ಜಾಗೃತಿ ಕುರಿತು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿ ವಾಕಥಾನ್ ಹಾಗೂ ಕ್ರಿಕೆಟ್ ಮತ್ತು ವಾಲಿಬಾಲ್ ಟೂರ್ನಮೆಂಟ್ ಆಯೋಜಿಸುವ ಮೂಲಕವು ಮತದಾನ ಜಾಗೃತಿ ಮಾಡಲಾಗುತ್ತಿದೆ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನರೇಗಾದಲ್ಲಿ ಮತದಾನ ಜಾಗೃತಿ ಮಾಡಲಾಗುತ್ತಿದೆ ಮತ್ತು ಮತದಾನ ಕಡಿಮೆಯಾದ ಕ್ಷೇತ್ರಗಳಲ್ಲಿ ಮತದಾನ ಹೆಚ್ಚಿಸಲು ವಿಶೇಷ ಒತ್ತು ನೀಡಲಾಗುತ್ತಿದೆ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್. ಎಲ್ ಅವರು ಮಾತನಾಡಿ ಜಿಲ್ಲೆಯಲ್ಲಿ 32 ಪೊಲೀಸ್ ಠಾಣೆಗಳಿವೆ. ಬೀದರ ಜಿಲ್ಲೆಯಲ್ಲಿ ಎರಡನೇ ಹಂತದ ಮತದಾನ ಇರುವುದರಿಂದ ನಮ್ಮಲ್ಲಿಯ ಪೊಲೀಸರನ್ನು ಮೊದಲ ಹಂತದ ಮತದಾನ ಕರ್ತವ್ಯಕ್ಕೆ ರಾಮನಗರ ಮತ್ತು ಚಿತ್ರದುರ್ಗಕ್ಕೆ ಕಳಿಸಲಾಗುತ್ತಿದೆ. ಈಗಾಗಲೇ ಅಗತ್ಯ ಸೇವೆ ಬಿಟ್ಟು ಉಳಿದವರ ಹತ್ತಿರ ಇದ್ದ 1,126 ವೆಪನಗಳನ್ನು ಡಿಪೋಸಿಟ್ ಮಾಡಲಾಗಿದೆ. ಜಿಲ್ಲೆಯಲ್ಲಿರುವ ರೌಡಿ ಶೀಟರಗಳ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.
ಈ ಸಭೆಯಲ್ಲಿ ಪೊಲೀಸ್ ವೀಕ್ಷಕರಾದ ಜೆ.ಎಸ್. ರಜಪೂತ, ಬೀದರ ಸಹಾಯಕ ಆಯುಕ್ತರಾದ ಲವೀಶ್ ಓರ್ಡಿಯಾ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಚುನಾವಣಾ ತಹಶಿಲ್ದಾರ ಅಣ್ಣಾರಾವ್ ಪಾಟೀಲ, ಎ.ಅರ್.ಓ, ವಿವಿಧ ಸಮಿತಿಯ ನೋಡಲ್ ಅಧಿಕಾರಿಗಳು ಸೇರಿದಂತೆ ಚುನಾವಣೆಗೆ ನಿಯೋಜಿತ ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು…

ವರದಿ. ಸುನಿಲ್ ಮೇತ್ರಿ. ಬೀದರ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend