ವಿಕಲಚೇತನರಿಗೆ ವಿವಿಧ ಸೌಲಭ್ಯಗಳನ್ನು ವಿತರಿಸಿದ ಸಚಿವ ಡಾ|| ಕೆ. ಸುಧಾಕರ್…!!!

Listen to this article

ವಿಕಲಚೇತನರಿಗೆ ವಿವಿಧ ಸೌಲಭ್ಯಗಳನ್ನು ವಿತರಿಸಿದ ಸಚಿವ ಡಾ|| ಕೆ. ಸುಧಾಕರ್

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 20: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ದೇವನಹಳ್ಳಿ ತಾಲ್ಲೂಕಿನ ಬೊಮ್ಮನಹಳ್ಳಿ ರಸ್ತೆಯ ಚಿನ್ಮಯಿ ಶಾಲೆ ಹತ್ತಿರವಿರುವ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ(ಬ್ಯಾಪ್ಟಿಸ್ಟ್ ಆಸ್ಪತ್ರೆ)ದಲ್ಲಿ ಇಂದು ಏರ್ಪಡಿಸಲಾದ “ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ಮೋಟಾರು ವಾಹನಗಳ ವಿತರಣೆ ಹಾಗೂ ಬೆನ್ನುಹುರಿ ಅಪಘಾತಕ್ಕೊಳಗಾದ ವಿಕಲಚೇತನರ ಪುನರ್ವಸತಿ ಸಂಚಾರಿ ವಾಹನಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ”ಕೆ. ಸುಧಾಕರ್ ಅವರು ಹಸಿರು ನಿಶಾನೆ ತೋರಿ, ಸವಲತ್ತುಗಳನ್ನು ವಿತರಿಸಿದರು.


ಕಾರ್ಯಕ್ರಮದಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ ಎಲ್.ಎನ್. ಸ್ಥಳೀಯ ಜನಪ್ರತಿನಿಧಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ., ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕ ನಟರಾಜ್.ಎಸ್. ಸೇರಿದಂತೆ ಮತ್ತಿತರರು ಅವರು ಉಪಸ್ಥಿತರಿದ್ದರು…

ವರದಿ. ಕಲಾವತಿ, ಎನ್,

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend