ಬೆಂ.ಗ್ರಾ.ಜಿಲ್ಲೆ: ಮೇ 08 ರಿಂದ ಮೇ 10 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಆರ್.ಲತಾ ಆದೇಶ…!!!

Listen to this article

2023-ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ

ಬೆಂ.ಗ್ರಾ.ಜಿಲ್ಲೆ: ಮೇ 08 ರಿಂದ ಮೇ 10 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಆರ್.ಲತಾ ಆದೇಶ

ಬೆಂಗಳೂರು ಗ್ರಾಮಾಂತರ ಜಿಲ್ಲೆ, : ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರ ಸಂಬಂಧ 2023ರ ಮೇ 10 ರಂದು ಮತದಾನವು ನಡೆಯಲಿರುವ ಹಿನ್ನೆಲೆ, ಮೇ 08 ರಂದು ಸಂಜೆ 6.00 ಗಂಟೆಯಿಂದ ಮೇ 10 ರಂದು ಮತದಾನ ಮತದಾನ ಮುಕ್ತಾಯವಾಗುವವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಾದ್ಯಂತ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರಡಿ ಷರತ್ತಿಗೊಳಪಡಿಸಿ, ನಿಷೇಧಾಜ್ಞೆ ವಿಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಆದೇಶಿಸಿದ್ದಾರೆ.
ಭಾರತ ಚುನಾವಣಾ ಆಯೋಗ ನಿಗದಿಪಡಿಸಿದ ಚುನಾವಣಾ ವೇಳಾಪಟ್ಟಿಯಂತೆ ದಿನಾಂಕ 10.05.2023ರಂದು ಮತದಾನವು ನಡೆಯಲಿದ್ದು, ಚುನಾವಣಾ ನೀತಿ ಸಂಹಿತೆಯು ದಿನಾಂಕ 29.03.2023 ರಿಂದ 15.05.2023ರವರೆಗೆ ಜಾರಿಯಲ್ಲಿರುತ್ತದೆ. ಈ ಸಮಯದಲ್ಲಿ ಮತದಾರರಿಗೆ ವಿವಿಧ ಆಸೆ-ಆಮೀಷಗಳಿಗೆ ಒಳಪಡಿಸುವುದು, ಬೆದರಿಸಲು ಯತ್ನಿಸುವುದು, ತಮ್ಮ ಪರವಾಗಿ ವರ್ತಿಸಲು ಪುಸಲಾಯಿಸುವುದು, ಮತಗಟ್ಟೆಗಳ ಹತ್ತಿರದಲ್ಲಿ ಪ್ರಚಾರ ಮಾಡುವುದು, ಸಾರ್ವಜನಿಕ ಸಭೆ ನಡೆಸುವುದು, ಮತದಾರರನ್ನು ವಿವಿಧ ಸಾರಿಗೆ ವ್ಯವಸ್ಥೆಗಳ ಮೂಲಕ ಮತಗಟ್ಟೆಗಳಿಗೆ ಕರೆತರುವುದು, ಶಾಂತಿಭಂಗ ಉಂಟುಮಾಡುವುದು, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವುದು ಹಾಗೂ ಇತರ ಅಹಿತಕರ ಘಟನೆಗಳು ನಡೆಯುವಂತೆ ಮಾಡುವ ಸಂಭವನೀಯತೆಗಳಿದ್ದು, ಇದನ್ನು ತಡೆಗಟ್ಟುವ ಹಾಗೂ ಮತದಾನ ಪಾವಿತ್ರ್ಯತೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಾದ 178-ಹೊಸಕೋಟೆ, 179-ದೇವನಹಳ್ಳಿ, 180-ದೊಡ್ಡಬಳ್ಳಾಪುರ ಹಾಗೂ 181-ನೆಲಮಂಗಲ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 14ರಡಿ ಪ್ರತಿಬಂಧಕಾಜ್ಞೆ ವಿಧಿಸಿ ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗಿದೆ.
ಷರತ್ತುಗಳು:
1. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೇ 08 ರಂದು ಸಂಜೆ 6.00 ಗಂಟೆಯಿಂದ ಮೇ 10 ರಂದು ಮತದಾನ ಮತದಾನ ಮುಕ್ತಾಯವಾಗುವವರೆಗೆ ಈ ಅವಧಿಯಲ್ಲಿ ಸಾರ್ವಜನಿಕರು ಸಕಾರಣವಿಲ್ಲದೇ ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ರಸ್ತೆ, ಬೀದಿ, ಓಣಿ, ಕೇರಿಗಳಲ್ಲಿ, ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ ಮತ್ತು ಮತದಾನ ಕೇಂದ್ರದ ಸುತ್ತ-ಮುತ್ತ ಮುಂತಾದವುಗಳಲ್ಲಿ ಗುಂಪು ಸೇರುವುದನ್ನು ಅಥವಾ ಗುಂಪು ಸೇರುವುದನ್ನು ನಿಷೇಧಿಸಿದೆ.
2. ಚುನಾವಣಾ ಅಭ್ಯರ್ಥಿ ಬೆಂಬಲಿಗರು ಸೇರಿ 05 ಜನರಿಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರತಕ್ಕದ್ದಲ್ಲ.
3. ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಜಿ, ಚೂರಿ, ದೊಣ್ಣೆ, ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ಮತ್ತು ಸಾಗಾಟ ಮಾಡುವುದನ್ನು ನಿಷೇಧಿಸಿದೆ.
4. ಮತಗಟ್ಟೆಗಳು, ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಜರಾಕ್ಸ್ ಅಂಗಡಿ, ಬುಕ್ ಸ್ಟಾಲ್, ಸೈಬರ್ ಕೆಫೆಗಳನ್ನು ನಿರ್ಬಂಧಿಸಿದೆ.
5. ಮತದಾನ ದಿನದಂದು ಮತಗಟ್ಟೆಗಳ 100 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಿದೆ ಹಾಗೂ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್ / ಬ್ಯಾನರ್ ಅಥವಾ ಇನ್ಯಾವುದೇ ವಸ್ತುಗಳನ್ನು ಬಳಸುವ೦ತಿಲ್ಲ.
6. ಕಲ್ಲುಗಳು, ಖಾರ ಪದಾರ್ಥ , ಇಲ್ಲವೆ ಸ್ಫೋಟಕ ವಸ್ತುಗಳು, ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಮತದಾನ ನಡೆಯುವ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.
7. ಕಲ್ಲುಗಳನ್ನು ಮತ್ತು ಎಸೆಯುವಂತಹ ವಸ್ತುಗಳನ್ನು, ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.
8. ಯಾವುದೇ ರೀತಿಯ ಬಂದ್, ಪ್ರತಿಭಟನೆ, ಮುಷ್ಕರ, ಪ್ರತಿಕೃತಿ ದಹನ, ಪ್ರದರ್ಶನ, ಪೂರಕ ಚಟುವಟಿಕೆಗಳು, ಯಾವುದೇ ಖಾಸಗಿ / ಸಾರ್ವಜನಿಕ ಆಸ್ತಿ ಪಾಸ್ತಿಗಳನ್ನು ಹಾನಿಗೊಳಿಸುವ ಹಾಗೂ ವಿರೂಪಗೊಳಿಸುವ ಎಲ್ಲಾ ರೀತಿಯ ಚಟುವಟಿಕೆಗಳನ್ನು ನಿಷೇಧಿಸಿದೆ.
9. ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಚರಿಸುವುದು ಅಥವಾ ಪದ ಹಾಡುವುದು. ಚೇಷ್ಟೆ ಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಅಥವಾ ಪ್ರಸಾರ ಮಾಡುವುದು, ಪ್ರಕಟಣಾ ಪತ್ರಿಕೆಗಳ ಅಥವಾ ಇತರ ಯಾವುದೇ ವಸ್ತುಗಳ ಪ್ರದರ್ಶನ ಭಿತ್ತಿ ಪತ್ರಗಳನ್ನು ಅಂಟಿಸುವುದರಿಂದ, ಸಭ್ಯತನ, ಸದಾಚಾರ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗುವಂತೆ ಪ್ರೇರೇಪಿಸುವ ಕ್ರಮವನ್ನು ನಿಷೇಧಿಸಿದೆ.
10. ಯಾವುದೇ ವ್ಯಕ್ತಿಯ ಜಾತಿ-ಧರ್ಮ, ಕೋಮು ಪಂಥಗಳಿಗೆ ಅಥವಾ ಸಾರ್ವಜನಿಕ ನೈತಿಕತೆಗೆ ಬಾಧಕ ಉಂಟುಮಾಡಬಹುದಾಂತಹ ಚಟುವಟಿಕೆಗಳನ್ನು ನಿಷೇಧಿಸಿದೆ.
11. ಈ ಅವಧಿಯಲ್ಲಿ ಯಾವುದೇ ಸಂತೆ, ಜಾತ್ರೆ ಮತ್ತು ಇತರೆ ಜನಸಮೂಹಗಳನ್ನು ನಿಷೇಧಿಸಿದೆ.
12. ಈ ನಿಷೇಧಾಜ್ಞೆಯು ಮದುವೆ, ಶುಭ ಸಮಾರಂಭಗಳು, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಶವ ಸಂಸ್ಕಾರಕ್ಕೆ, ಕೋವಿಡ್-19 ಕಾರ್ಯಗಳಿಗೆ ಮತ್ತು ಚುನಾವಣಾ ಸಂಬಂಧ ಏರ್ಪಡಿಸಲಾಗಿರುವ ಮತ ಕೇಂದ್ರಕ್ಕೆ ಅನ್ವಯಿಸುವುದಿಲ್ಲ.
13. ನಿಷೇಧಾಜ್ಞೆ ಜಾರಿಯಲ್ಲಿರುವ ಸಮಯದಲ್ಲಿ ಧ್ವನಿವರ್ಧಕ ಬಳಸುವುದನ್ನು ನಿಷೇಧಿಸಲಾಗಿದೆ.
14. ಕೋವಿಡ್-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.
15. ಮತದಾನ ದಿನದಂದು ಮತಗಟ್ಟೆಗಳ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಫೋನ್, ಕಾರ್ಡ್ ಲೆಸ್ ಪೋನ್ ಅಥವಾ ಇನ್ನಿತರ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. (ಚುನಾವಣಾ ಕಾರ್ಯದಲ್ಲಿ ನಿರತರಾದ ಅಧಿಕಾರಿ / ಸಿಬ್ಬಂದಿಗಳನ್ನು ಹೊರತುಪಡಿಸಿ)
16. ಬಹಿರಂಗ ಪ್ರಚಾರ ದಿನಾಂಕ 08.05.2023 ರಂದು ಸಂಜೆ 6-00 ಗಂಟೆಗೆ ಕೊನೆಗೊಳ್ಳಲಿದ್ದು, ಈ ಜಿಲ್ಲೆಯ ನಾಲ್ಕು ಕ್ಷೇತ್ರದ ಮತದಾರರಲ್ಲದವರು ಆಯಾ ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಹೋಗತಕ್ಕದ್ದು.
17. ಕಲ್ಯಾಣ ಮಂಟಪಗಳು / ಸಮುದಾಯ ಭವನಗಳು / ಹೋಟೆಲ್ಗಳು ಮತ್ತು ಆತಿಥಿ ಗೃಹಗಳಲ್ಲಿ ವಾಸ್ತವ್ಯ ಹೂಡಿದವರ ಪಟ್ಟಿಗಳ ಪರಿಶೀಲನೆ ಮಾಡುವುದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರದ ಮತದಾರರಲ್ಲದವರನ್ನು ಮತಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಕಳುಹಿಸಲು ಪೊಲೀಸ್ ಇಲಾಖೆಯವರು ಕ್ರಮವಹಿಸುವುದು.
18. ಜಿಲ್ಲೆಯಾದ್ಯಂತ ಸ್ಥಾಪಿಸಲಾಗಿರುವ ಚೆಕ್ ಪೋಸ್ಟ್ಗಳಲ್ಲಿ ಮತಕ್ಷೇತ್ರದ ಹೊರಗಿನಿಂದ ಬರುವ ಎಲ್ಲಾ ರೀತಿಯ ವಾಹನಗಳನ್ನು ಕಡ್ಡಾಯವಾಗಿ ಸೂಕ್ಷ್ಮವಾಗಿ ಪರಿಶೀಲಿಸತಕ್ಕದ್ದು.
19. ಮತದಾನ ದಿನದಂದು ಪತ್ರಿಕಾ ಮಾದ್ಯಮದವರು ಮತದಾನದ ಗೌಪ್ಯತೆಗೆ ಧಕ್ಕೆ ಬರುವಂತೆ ಛಾಯಚಿತ್ರ ತೆಗೆಯುವುದನ್ನು ನಿಷೇಧಿಸಲಾಗಿದೆ.
ಸದರಿ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ 188ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು. ಈ ಆದೇಶವು ಮತದಾನ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಚುನಾವಣಾ ಕಾರ್ಯನಿರತ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಹಾಗೂ ಒಬ್ಬೊಬ್ಬರಾಗಿ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲ. ಆರಕ್ಷಕ ಸಿಬ್ಬಂದಿಗಳು ಕಾರ್ಯನಿರ್ವಹಣೆ ವೇಳೆ / ಬಂದೂಕುಗಳನ್ನು ಉಪಯೋಗಿಸುವುದಕ್ಕೆ ಆನ್ವಯಿಸುವುದಿಲ್ಲ ಹಾಗೂ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿರುವ ಸಿಬಂದಿಗಳು ಅವರ ಚುನಾವಣಾ ಕರ್ತವ್ಯ ನಿರ್ವಹಿಸುವ ಸ್ತಳಕ್ಕೆ ಅನಯಿಸುವುದಿಲ್ಲ.
ಈ ಆದೇಶವು ಬಾಗಿಲಿನಿಂದ ಬಾಗಿಲಿಗೆ ಮತಯಾಚಿಸುವ ಸಲುವಾಗಿ ಮನೆಯಿಂದ ಮನೆಗೆ ಅಭ್ಯರ್ಥಿ ಭೇಟಿ ನೀಡಿ ಪ್ರಚಾರ ಮಾಡುವುದಕ್ಕೆ ಅನ್ವಯಿಸುವುದಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ..

ವರದಿ. ಕಲಾವತಿ. ಎನ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend