ರಾಜ್ಯದ ಹಲವೆಡೆ ಇಂದು ಮುಂಜಾನೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು…!!!

Listen to this article

ಇಂದು ಬೆಳಗ್ಗೆ ರಾಜ್ಯದ ಹಲವೆಡೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾವಣಗೆರೆ, ಕೊಪ್ಪಳ, ಕೊಡಗು ಸೇರಿದಂತೆ ವಿವಿಧೆಡೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.

ದಾವಣಗೆರೆ/ಕೊಡಗು/ ಕೊಪ್ಪಳ : ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಬಿಸಿ ಮುಟ್ಟಿಸಿದ್ದಾರೆ.

ಸರ್ಕಾರಿ ಹುದ್ದೆಯಲ್ಲಿರುವ ದಂಪತಿ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಹೊಳಲ್ಕೆರೆ ಸಣ್ಣ ನೀರಾವರಿ‌ ಇಲಾಖೆ ಇಂಜಿನಿಯರ್ ಕೆ.ಮಹೇಶ್ ಹಾಗೂ ಅವರ ಪತ್ನಿ ಬಿಬಿಎಂಪಿ ಎಇ ಹೆಚ್. ಭಾರತಿ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ.

ಚಿತ್ರದುರ್ಗ ಲೊಕಾಯುಕ್ತ ಎಸ್​ಪಿ ವಾಸುದೇವ್ ರಾಮ್ ಹಾಗೂ ಡಿವೈಎಸ್​ಪಿ ಮೃಂತುಂಜಯ್ಯ ನೇತೃತ್ವದ ತಂಡದಿಂದ ದಾವಣಗೆರೆ ನಗರದ ಜಯನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಲಾಗಿದೆ.

ಚನ್ನಗಿರಿ ಅರಣ್ಯ ಇಲಾಖೆ ಆರ್.ಎಫ್.ಒ ಮನೆ ಮೇಲೂ

ದಾಳಿ : ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಅರಣ್ಯ ಇಲಾಖೆ ಅಧಿಕಾರಿ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಬಿಸಿ ಮುಟ್ಟಿಸಿದ್ದಾರೆ. ಚನ್ನಗಿರಿ ಅರಣ್ಯ ಇಲಾಖೆ ಆರ್.ಎಫ್.ಒ ಸತೀಶ್ ಮನೆ ಮೇಲೆ ಮೊದಲು ದಾಳಿ ನಡೆಸಿದ ಅಧಿಕಾರಿಗಳು, ಬಳಿಕ ಶಿವಮೊಗ್ಗದಲ್ಲಿರುವ ನಿವಾಸದ ಮೇಲೂ ದಾಳಿ ಮಾಡಿದ್ದಾರೆ. ದಾವಣಗೆರೆ ಲೋಕಾಯುಕ್ತ ಎಸ್​ಪಿ ಎಂಎಸ್ ಕೌಲಾಪುರೆ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಇನ್ಸ್​ಪೆಕ್ಟರ್ ನಂದೀಶ್ ಹಾಗೂ ಮಧುಸೂಧನ್ ತಂಡದಿಂದ ಶೋಧ ಮಾಡಲಾಗುತ್ತಿದೆ.

ಕೊಡಗಿನಲ್ಲೂ ದಾಳಿ : ಇನ್ನು ಕೊಡಗು ಎಡಿಸಿ ನಂಜುಂಡೇಗೌಡ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮಡಿಕೇರಿಯ ಕಾರ್ಯಪ್ಪ ವೃತ್ತದ ಬಳಿ ಇರುವ ಮನೆ ಮೇಲೆ ಲೋಕಾಯುಕ್ತ

ಎಸ್ ಪಿ. ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಡಿ ವೈ ಎಸ್ ಪಿ ಪವನ್ ಕುಮಾರ್, ಇನ್ಸ್​ಪೆಕ್ಟರ್ ಲೋಕೇಶ್ ಮತ್ತು ಸಿಬ್ಬಂದಿ ಪರಿಶೀಲನೆ ಕೈಗೊಂಡಿದ್ದಾರೆ. ಪಿರಿಯಾಪಟ್ಟಣದಲ್ಲಿರುವ ಮಾವನ ಮನೆ ಹಾಗೂ ಮೈಸೂರಿನಲ್ಲಿ ಇರುವ ಸಂಬಂಧಿಕರ ಮನೆ ಮೇಲೂ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.

ಪೊಲೀಸ್​ ಕಾನ್ಸ್​ಟೇಬಲ್​ ಮನೆ ಮೇಲೆ ದಾಳಿ : ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಜಯ್​ಕುಮಾರ್ ಮನೆ ಮೇಲೆ ದಾಳಿ ಮಾಡಲಾಗಿದೆ. ಹುಮ್ನಾಬಾದ್​ ಪಟ್ಟಣದ ಟೀಚರ್ ಕಾಲೋನಿ ಹಾಗೂ ಹುಚಕನಳ್ಳಿ ಗ್ರಾಮದ ಮನೆಗಳ ಮೇಲೂ ದಾಳಿ ನಡೆಸಲಾಗಿದೆ.

ನಿರ್ಮಿತಿ ಕೇಂದ್ರದ ಅಧಿಕಾರಿಗೆ ಶಾಕ್​ : ಕೊಪ್ಪಳದ ನಿರ್ಮಿತಿ‌ ಕೇಂದ್ರದ ಕಚೇರಿ ವ್ಯವಸ್ಥಾಪಕ ಮಂಜುನಾಥ್​ ಬನ್ನಿಕೊಪ್ಪ ಕೆಲಸ ಮಾಡುವ ಕಚೇರಿ ಹಾಗೂ ಮನೆ ಮೇಲೆ ಲೋಕಾಯಕ್ತ ಅಧಿಕಾರಿಗಳು ದಾಳಿ ಮಾಡಿದ್ದು,

ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಒಟ್ಟು ಐದು ತಂಡಗಳಲ್ಲಿ ದಾಳಿ ನಡೆಸಲಾಗಿದ್ದು, ಕೊಪ್ಪಳದ ನಿರ್ಮಿತಿ ಕೇಂದ್ರದ ಬಡಾವಣೆಯಲ್ಲಿರುವ ಕಚೇರಿ ಮತ್ತು ಮಂಜುನಾಥ್​ ಹೂಡಿಕೆ ಮಾಡಿರುವ ಕೊಪ್ಪಳ ತಾಲೂಕಿನ ಹುಲಿಗಿಯ ಮಾರ್ಕ್ ಇನ್ ಲಾಡ್ಜ್ ಮೇಲೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ.ಮತ್ತು ಇನ್ನು ಹಲವು ಕಡೆಯಲ್ಲಿ ಭ್ರಷ್ಟ ರಿಗೆ ಬಿಸಿಮುಟ್ಟಿಸಲಿ ಎನ್ನುವುದೇ ರಾಜ್ಯದ ಜನತೆಯ ಆಶಯ…

ವರದಿ. ಮುಕ್ಕಣ್ಣ ಹುಲಿಗುಡ್ಡ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend