ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯೂ ಸಹ, ಕಾಂಗ್ರೆಸ್ ಗೆ ಪೆಟ್ಟು ಕೊಟ್ಟು ಕಮಲ ಹರಳೋದು ಖಚಿತ,ಸಮೀಕ್ಷೆಯ ವರದಿ…!!!

Listen to this article

ಬೆಂಗಳೂರು, ಮಾರ್ಚ್ 05: 2023ರಲ್ಲಿ ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಭರ್ಜರಿಯಾಗಿ ಜಯ ದಾಖಲಿಸಿದೆ. ಬಹುಮತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸಿದೆ. ಇದೇ ಖುಷಿಯಲ್ಲಿರುವ ಕೈ ನಾಯಕರಿಗೆ ಈ ಬಾರಿಯ ಲೋಕಸಭಾ ಚುನಾವಣೆ ಸವಾಲಾಗಿ ನಿಂತಿದೆ.ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿ ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡರೆ ಅದು ಪಕ್ಷಕ್ಕೆ ದೊಡ್ಡ ಹಿನ್ನಡೆಯಾಗಲಿದೆ

ಇದೆ ಕಾರಣಕ್ಕೆ ರಾಜ್ಯ ನಾಯಕರು ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಹಲವು ಕಸರತ್ತುಗಳನ್ನು ಮಾಡುತ್ತಿದ್ದಾರೆ. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಲೋಕಸಭಾ ಸಂಸದರು ಇರುವುದು ಒಬ್ಬರೇ!. ಉಳಿದವೆಲ್ಲಾ ಈಗ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಾಲು. ಇದಷ್ಟೆ ಅಲ್ಲದೇ ಕಾಂಗ್ರೆಸ್‌ಗೆ ಮೇಲಿಂದ ಮೇಲೆ ಪೆಟ್ಟು ಕೊಡುತ್ತಿರುವುದು ಬಿಡುಗಡೆಯಾಗುತ್ತಿರುವ ಸಮೀಕ್ಷೆಗಳು.

ಕಳೆದ ವಾರ ಬಿಡುಗಡೆಯಾಗಿದ್ದ ಜೀ ನ್ಯೂಸ್- ಮೆಟ್ರಿಕ್ಸ್ ಚುನಾವಣಾ ಪೂರ್ವ ಸಮೀಕ್ಷೆ ಕೂಡ ಬಿಜೆಪಿಯೇ ಹೆಚ್ಚು ಸ್ಥಾನ ಗಳಿಸಲಿದೆ ಎಂದು ಹೇಳಿತ್ತು. ಸಮೀಕ್ಷೆಯ ವರದಿ ಪ್ರಕಾರ ಬಿಜೆಪಿ ಮೈತ್ರಿಕೂಟ 23 ಮತ್ತು ಆಡಳಿತ ಪಕ್ಷ ಕಾಂಗ್ರೆಸ್ 5 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಇದರ ಬೆನ್ನಲ್ಲೆ ಬಿಡುಗಡೆಯಾಗಿರುವ ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ ಕೂಡ ಕಾಂಗ್ರೆಸ್‌ಗೆ ನಿರಾಸೆ ತಂದಿದೆ.Lok Sabha Election: ದಕ್ಷಿಣ ಭಾರತದಲ್ಲಿ ಕಮಲ ಅರಳುವುದೇ? ಸಮೀಕ್ಷೇ ಹೇಳೋದೇನು?ಇಂಡಿಯಾ ಟಿವಿ-ಸಿಎನ್‌ಎಕ್ಸ್ ಅಭಿಪ್ರಾಯ ಸಂಗ್ರಹ2024 ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ 28 ಕ್ಷೇತ್ರಗಳ ಪೈಕಿ ಭಾರತೀಯ ಜನತಾ ಪಕ್ಷ (ಬಿಜೆಪಿ) 22 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಮತ್ತು ಅದರ ಮಿತ್ರ ಪಕ್ಷ ಜೆಡಿಎಸ್ 2 ಸ್ಥಾನಗಳನ್ನು ಗೆಲ್ಲಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಅಭಿಪ್ರಾಯ ಸಂಗ್ರಹ ಸೋಮವಾರ (ಮಾರ್ಚ್ 4) ಭವಿಷ್ಯ ನುಡಿದಿದೆ.2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದಿತ್ತು.

ಈ ಬಾರಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುತ್ತಿದೆ. ಹೀಗಾಗಿ ಬಿಜೆಪಿ – ಜೆಡಿಎಸ್ ಮೈತ್ರಿ ಬಳಿಯಲ್ಲಿ ಬಿಜೆಪಿಯ 25, ಜೆಡಿಎಸ್‌ನ ಒಂದು ಸ್ಥಾನ, ಸುಮಲತಾ ಅಂಬರೀಷ್ ಅವರ ಒಂದು ಸ್ಥಾನ ಒಟ್ಟು 27 ಸ್ಥಾನಗಳಿವೆ. ಆದರೆ, 2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವು ಭರ್ಜರಿ ಜಯ ಸಾಧಿಸಿ ರಾಜ್ಯದಲ್ಲಿ ಬಹುಮತದ ಸರ್ಕಾರ ರಚಿಸಿರುವ ಕಾಂಗ್ರೆಸ್ ಲೋಕಸಭೆಯ ಸ್ಪರ್ಧೆಯಲ್ಲಿ ಹಿಂದುಳಿದಿದೆ. ಪಕ್ಷವು ಈ ಬಾರಿಯ ಚುನಾವಣೆಯಲ್ಲಿ ಕೇವಲ ನಾಲ್ಕು ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಅಂದಾಜಿಸಲಾಗಿದೆ. ಎನ್‌ಡಿಎ ಒಟ್ಟು 24 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದ್ದು, ಕಾಂಗ್ರೆಸ್ 4 ಸ್ಥಾನಗಳನ್ನು ಗೆಲ್ಲಲಿದೆ.ಇತ್ತ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 22ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಬಿಜೆಪಿಯ ಸಂಸದರನ್ನು ಈ ಬಾರಿ ರಾಜ್ಯದ ಜನತೆ ತಿರಸ್ಕರಿಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.ಕರ್ನಾಟಕ ಲೋಕಸಭಾ ಚುನಾವಣಾ ಫಲಿತಾಂಶ 2019:ಒಟ್ಟು ಸೀಟುಗಳು: 28ಬಿಜೆಪಿ: 25ಕಾಂಗ್ರೆಸ್: 01ಜೆಡಿಎಸ್: 01ಸ್ವತಂತ್ರ: 01ಕರ್ನಾಟಕ ಲೋಕಸಭಾ ಚುನಾವಣಾ ಫಲಿತಾಂಶ 2014:ಬಿಜೆಪಿ: 17ಕಾಂಗ್ರೆಸ್: 09ಜೆಡಿಎಸ್: 02.ಈ ರೀತಿಯಲ್ಲಿ ಫಲಿತಾಂಶ ಬರುವ ಒಂದು ಸಾಧ್ಯತೆ ಇದೆ ಎನ್ನುವುದನ್ನು ಹಲವಾರು ರಾಜಕೀಯ ತಂತ್ರಜ್ಞನರ ಸಮೀಕ್ಷೆಯಿಂದ ಕೇಳಿಬಂದಿದೆ…

ವರದಿ. ಮುಕ್ಕಣ್ಣ ಹುಲಿಗುಡ್ಡ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend