ಆರಂಭಿಕ ಟ್ರೆಂಡ್​ ಅನ್ವಯ ಕಾಂಗ್ರೆಸ್​ ಮ್ಯಾಜಿಕ್ ನಂಬರ್ ದಾಟಿ ಸರಳ ಬಹುಮತ ಪಡೆದಿದೇ…!!!

Listen to this article

ಆರಂಭಿಕ ಟ್ರೆಂಡ್​ ಅನ್ವಯ ಕಾಂಗ್ರೆಸ್​ ಮ್ಯಾಜಿಕ್ ನಂಬರ್ ದಾಟಿ ಸರಳ ಬಹುಮತ ಪಡೆದಿದ್ದು, ಬಿಜೆಪಿ ಎರಡನೇ ಸ್ಥಾನದಲ್ಲಿದೆ. ಕಾಂಗ್ರೆಸ್​ 114 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿ 86 ಕ್ಷೇತ್ರಗಳಲ್ಲಿ ಮುಂದಿದೆ. ಇನ್ನು ಜೆಡಿಎಸ್​ 20 ಸ್ಥಾನ ಹಾಗೂ ಇತರರು 3 ಸ್ಥಾನಗಳಲ್ಲಿ ಮುನ್ನಡೆ ಪಡೆದಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ತವರು ಕ್ಷೇತ್ರ ಹಾವೇರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಸಾಧಿಸಿದೆ. ಹಾವೇರಿ ಜಿಲ್ಲೆ ಯ6 ಕ್ಷೇತ್ರಗಳ ಪೈಕಿ ಶಿಗ್ಗಾಂವಿ ಕ್ಷೇತ್ರ ಬಿಟ್ಟು ಉಳಿದ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ವರುಣ ಕ್ಷೇತ್ರದಲ್ಲಿ ಹಾಗೂ ಚಾಮರಾಜನಗರ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣಗೆ ಭಾರೀ ಹಿನ್ನಡೆಯಾಗಿದೆ.

ವರುಣ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸಾಧಿಸಿದ್ದಾರೆ. ವಿ.ಸೋಮಣ್ಣ ಹಿನ್ನಡೆ ಸಾಧಿಸಿದ್ದಾರೆ ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿಎಂ ಬಸವರಾಜ ಬೊಮ್ಮಾಯಿ ಮುನ್ನಡೆ ಸಾಧಿಸಿದ್ದಾರೆ. ನಿಪ್ಪಾಣಿ ಬಿಜೆಪಿ ಶಶಿಕಲಾ ಜೊಲ್ಲೆ ಹಿನ್ನಡೆಯಾಗಿದೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗೆ ಹಿನ್ನಡೆಯಾಗಿದೆ. ಬಿಜೆಪಿ ಅಭ್ಯರ್ಥಿ ಮಂಜುಳಾ ಲಿಂಬಾವಳಿಗೆ ಹಿನ್ನಡೆಯಾಗಿದೆ. ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಗೆ ಹಿನ್ನಡೆಯಾಗಿದೆ. ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲುಗೆ ಹಿನ್ನಡೆಯಾಗಿದೆ. ಶಿಕಾರಿಪುರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರಗೆ ಹಿನ್ನಡೆಯಾಗಿದೆ.

ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು 5,30,85,566 ಮತದಾರರ ಪೈಕಿ 3,88,51,807 ಜನರಿಂದ ಮತದಾನ. 26682156 ಪುರುಷರ ಪೈಕಿ 19658398 ಪುರುಷರು ಹಕ್ಕು ಚಲಾವಣೆ ಮಾಡಿದ್ದಾರೆ. 26398483 ಮಹಿಳಾ ಮತದಾರರ ಪೈಕಿ 19192372 ಮಹಿಳೆಯರಿಂದ ಮತದಾನವಾಗಿದ್ದು, 4927 ಮಂಗಳಮುಖಿಯರ ಪೈಕಿ 1037 ಮಂಗಳಮುಖಿಯರಿಂದ ಮತ ಚಲಾಯಿಸಿದ್ದಾರೆ. ರಾಜ್ಯದಲ್ಲಿ ಈ ಬಾರಿ ದಾಖಲೆ ಪ್ರಮಾಣದಲ್ಲಿ ಶೇ. 73.19ರಷ್ಟು ಮತಚಲಾವಣೆಯಾಗಿದೆ…

ವರದಿ. ಎಚ್ಚರಿಕೆ ಕನ್ನಡ ನ್ಯೂಸ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend