ಹಾಟ್ ಏರ್ ಬಲೂನ್ ಹಾರಾಟದ ಮೂಲಕ ಮತದಾನ ಜಾಗೃತಿ…!!!

Listen to this article

ಹಾಟ್ ಏರ್ ಬಲೂನ್ ಹಾರಾಟದ ಮೂಲಕ ಮತದಾನ ಜಾಗೃತಿ
ಬೆಳಗಾವಿ: ನಗರದ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ  ಬೆಳಗ್ಗೆ 8 ಗಂಟೆಗೆ ಮತದಾನದ ಜಾಗೃತಿಗಾಗಿ ಹಾಟ್ ಏರ್ ಬಲೂನ್ ಹಾರಾಟ ಹಾಗೂ ಬೆಳಗಾವಿ ಜಿಲ್ಲೆ ಮತದಾನ ಜಾಗೃತಿ ಮಾಸ್ಕಾಟ ಅನಾವರಣ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರು ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಚಿಕ್ಕೋಡಿ, ಬೆಳಗಾವಿ ಲೋಕಸಭಾ ಮತ ಕ್ಷೇತ್ರಗಳ ಚುನಾವಣೆ ಮೇ.07 ರಂದು ನಡೆಯಲಿದೆ. ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನದ ಸಮಯ ನಿಗದಿ ಪಡಿಸಲಾಗಿದೆ. ಎಲ್ಲ ಮತದಾರರು ಕಡ್ಡಾಯವಾಗಿ ಮತ ಚಲಾಯಿಸಬೇಕು ಮತದಾರರಿಗೆ ಮತ್ತುಷ್ಟು ಮಾಹಿತಿ ನೀಡಲು ಸ್ವೀಪ್ ಕಾರ್ಯಕ್ರಮದಡಿ ಹಾಟ್ ಏರ್ ಬಲೂನ್ ಹಾರಾಟ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಯಾರು ಕೂಡ ಮತದಾನದಿಂದ ಹೊರಗುಳಿಯಬಾರದೆಂದು ಹೇಳಿದರು.

ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಮತ ಕ್ಷೇತ್ರಗಳಲ್ಲಿ ಮತದಾರರ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲೆಯ ರಾಣಿ ಚನ್ನಮ್ಮ ಪ್ರಾಣಿ ಸಂಗ್ರಾಲಯದಲ್ಲಿರುವ ಶೌರ್ಯ (ಹುಲಿ) ಜಿಲ್ಲೆಯ ಮತದಾನ ಜಾಗೃತಿ ಮಾಸ್ಕಾಟಾಗಿ ಮಾಡಲಾಗಿದೆ ಎಂದು ಚಿಕ್ಕೋಡಿ ಲೋಕಸಭಾ ಮತ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ರಾಹುಲ್ ಶಿಂಧೆ ಅವರು ತಿಳಿಸಿದರು

ಉಪ-ಪೊಲೀಸ್ ಆಯುಕ್ತರಾದ ರೋಹನ್ ಜಗದೀಶ್, ಜಿಪಂ ಯೋಜನಾ ನಿರ್ದೇಶಕ ಎಂ.ಕೃಷ್ಣರಾಜು, ಜಿಪಂ ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ್, ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡಗುಂಡಿ, ಜಿಪಂ. ಲೆಕ್ಕಾಧಿಕಾರಿ ಗಂಗಾ ಹಿರೇಮಠ್ ಮಹಾನಗರ ಪಾಲಿಕೆ ಆಯುಕ್ತ ಲೋಕೇಶ ಎನ್ ಮೊದಲಾದವರು ಇತರೆ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಭಾಗವಹಿಸಿದ್ದರು…

ವರದಿ. ಮಹಾಲಿಂಗ ಗಗ್ಗರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend