ಚಾಮುಂಡೇಶ್ವರಿ ಶುಗರ್ ಕಾರ್ಖಾನೆಗೆ ಜಿಲ್ಲಾಧಿಕಾರಿ ಭೇಟಿ; ಪರಿಶೀಲನೆ…!!!

Listen to this article

ಚಾಮುಂಡೇಶ್ವರಿ ಶುಗರ್ ಕಾರ್ಖಾನೆಗೆ ಜಿಲ್ಲಾಧಿಕಾರಿ ಭೇಟಿ; ಪರಿಶೀಲನೆ

ಮಂಡ್ಯ,ಜೂ :- ಮದ್ದೂರು ತಾಲೂಕು ಭಾರತಿ ನಗರದಲ್ಲಿರುವ ಚಾಮುಂಡೇಶ್ವರಿ ಶುಗರ್ ಕಾರ್ಖಾನೆ ಆರಂಭವಾಗಿರುವ ಹಿನ್ನೆಲೆ ಜಿಲ್ಲಾಧಿಕಾರಿ ಎಸ್.ಅಶ್ವಥಿ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಕ್ಕರೆ ಕಾರ್ಖಾನೆ ಕಾರ್ಯನಿರ್ವಹಿಸುವ ವೈಖರಿಯ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಮಾಹಿತಿಯನ್ನು ಪಡೆದುಕೊಂಡು ಚರ್ಚಿಸಿದರು.
ನಂತರ ಸಕ್ಕರೆ ಕಾರ್ಖಾನೆ ಹತ್ತಿರ ಕಬ್ಬು ಕಟಾವು ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ ರೈತರೊಂದಿಗೆ ಸಮಾಲೋಚನೆ ನಡೆಸಿ, ಪರಿಶೀಲನೆ ನಡೆಸಿದರು.
ನಂತರ ಮದ್ದೂರು ತಾಲೂಕಿನ ವಳಗೆರೆಹಳ್ಳಿ ಗ್ರಾಮದಲ್ಲಿನ ಶ್ರೀ ಭೈರವೇಶ್ವರ ಅಕ್ಕಿಗಿರಣಿಗೆ ಭೇಟಿ ನೀಡಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ 2020 -21 ನೇ ಸಾಲಿನಲ್ಲಿ ರೈತರಿಂದ ಖರೀದಿ ಮಾಡಿರುವ ಭತ್ತದ ದಾಸ್ತಾನು ಮತ್ತು ಹಲ್ಲಿಂಗ್ ಪ್ರಕ್ರಿಯೆಯನ್ನು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆಯ ಮಾಲೀಕರು, ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಮತ್ತಿತರರು ಇದ್ದರು.

ವರದಿ. ಪ್ರವೀಣ್ ಕುಮಾರ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend