ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೇನಾಮೆ…!!!

Listen to this article

ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಸರ್ಕಾರದ ವಿರುದ್ಧ ಸೃಷ್ಟಿಯಾದ ರಾಜಕೀಯ ಬಿಕ್ಕಟ್ಟು ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ವಿಶ್ವಾಸಮತ ಸಾಬೀತುಪಡಿಸುವಂತೆ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಸೂಚನೆ ನೀಡಿದ್ದಾರೆ.

ಜೂನ್ 30ರ ಗುರುವಾರ ಬೆಳಗ್ಗೆ 11 ಗಂಟೆಗೆ ಪ್ರಾರಂಭವಾಗಲಿರುವ ವಿಧಾನಸಭೆಯಲ್ಲಿ ಶಿವಸೇನೆ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ(ಎನ್ ಪಿಸಿ) ಮತ್ತು ಕಾಂಗ್ರೆಸ್ ಮೈತ್ರಿಕೂಟವು ತಮ್ಮ ಸರ್ಕಾರಕ್ಕೆ ಬಹುಮತವಿದೆ ಎಂಬುದನ್ನು ಸಾಬೀತುಪಡಿಸಬೇಕಿದೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಬಂಡಾಯ ಎದ್ದಿರುವ ಶಿವಸೇನೆ ಶಾಸಕರು ಗುವಾಹಟಿಯಿಂದ ಗೋವಾಗೆ ಹಾರಿದ್ದಾರೆ. ಬಂಡಾಯ ನಾಯಕ ಏಕನಾಥ್ ಶಿಂಧೆ ಬಣವು ಈಗಾಗಲೇ ತಮಗೆ 40 ಶಿವಸೇನೆ ಶಾಸಕರೂ ಸೇರಿದಂತೆ ಒಟ್ಟು 50 ಶಾಸಕರ ಬೆಂಬಲ ಇರುವುದಾಗಿ ಘೋಷಿಸಿಕೊಂಡಿದ್ದಾರೆ. ಇದರ ಮಧ್ಯೆ ಗುರುವಾರ ನಡೆಯಲಿರುವ ವಿಶ್ವಾಸಮತಯಾಚನೆ ಸಂದರ್ಭದಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರದ ಭವಿಷ್ಯ ನಿರ್ಧಾರವಾಗಲಿದೆ.

ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟಿನ ಮಧ್ಯೆ ನಡೆಯುತ್ತಿರುವ ವಿಶ್ವಾಸಮತಯಾಚನೆಯಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಯಶಸ್ವಿಯಾಗುತ್ತಾರಾ?. ಶಿವಸೇನೆಯಲ್ಲಿ ಬಂಡಾಯದ ಬಾವುಟ ಹಾರಿಸಿದ ಏಕನಾಥ್ ಶಿಂಧೆ ಬಣದ ಮುಂದಿನ ನಿಲುವೇನು?. ರಾಜ್ಯದಲ್ಲಿ ಸರ್ಕಾರ ರಚಿಸುವುದಕ್ಕೆ ಬಿಜೆಪಿಯು ಯಾವ ರೀತಿ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ ಎಂಬುದರ ಕುರಿತು ಮಾಹಿತಿ ತಿಳಿದುಬಂದಿದೆ…

ವರದಿ.ನ್ಯೂಸ್ ಎಚ್ಚರಿಕೆ ಕನ್ನಡ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend