ಪಾಕಿಸ್ತಾನ ವಿರುದ್ಧ ಅಮೋಘ ಬ್ಯಾಟಿಂಗ್ ಪ್ರದರ್ಶನ ತೋರಿದ ವಿರಾಟ್ ಕೊಹ್ಲಿ ಭಾರತಕ್ಕೆ 4 ವಿಕೆಟ್ ಅಂತರದ ಗೆಲುವು…!!!

Listen to this article

ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಸೂಪರ್‌ 12ರ ಹಂತದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಅಮೋಘ ಬ್ಯಾಟಿಂಗ್ ಪ್ರದರ್ಶನ ತೋರಿದ ವಿರಾಟ್ ಕೊಹ್ಲಿ ಭಾರತಕ್ಕೆ 4 ವಿಕೆಟ್ ಅಂತರದ ಗೆಲುವು ತಂದುಕೊಟ್ಟರು.

ಇಲ್ಲಿನ ಮೆಲ್ಬರ್ನ್ ಕ್ರಿಕೆಟ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಪಾಕಿಸ್ತಾನ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 159ರನ್‌ ಕಲೆಹಾಕಿತ್ತು.

ಶಾನ್‌ ಮಸೂದ್‌ (ಔಟಾಗದೆ 52 ರನ್) ಮತ್ತು ಇಫ್ತಿಕರ್‌ ಅಹಮದ್ (51 ರನ್) ಅರ್ಧಶತಕ ಸಿಡಿಸಿ ಮಿಂಚಿದ್ದರು.

ಈ ಗುರಿ ಬೆನ್ನತ್ತಿದ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಇನಿಂಗ್ಸ್‌ ಆರಂಭಿಸಿದ ನಾಯಕ ರೋಹಿತ್‌ ಶರ್ಮಾ (4) ಹಾಗೂ ಉಪನಾಯಕ ಕೆ.ಎಲ್‌.ರಾಹುಲ್‌ (4) ತಂಡದ ಮೊತ್ತ 10 ರನ್ ಆಗುವಷ್ಟರಲ್ಲಿ ಪೆವಿಲಿಯನ್‌ ಸೇರಿಕೊಂಡರು.

ಬಳಿಕ ಬಂದ ಸೂರ್ಯಕುಮಾರ್‌ ಯಾದವ್‌ (15) ಮತ್ತು ಅಕ್ಷರ್ ಪಟೇಲ್‌ (2) ಸಹ ಹೆಚ್ಚು ಹೊತ್ತು ನಿಲ್ಲಲಿಲ್ಲ. ಹೀಗಾಗಿ ಕೇವಲ 31 ರನ್‌ ಗಳಿಸುವಷ್ಟರಲ್ಲಿ 4 ವಿಕೆಟ್ ಕಳೆದುಕಂಡು ಸಂಕಷ್ಟಕ್ಕೆ ಸಿಲುಕಿತ್ತು.

ಕೊಹ್ಲಿ-ಪಾಂಡ್ಯ ಆಸರೆ
ಈ ಹಂತದಲ್ಲಿ ಜೊತೆಯಾದ ಕೊಹ್ಲಿ ಮತ್ತು ಪಾಂಡ್ಯ, ವಿಕೆಟ್‌ ಬೀಳದಂತೆ ಎಚ್ಚರಿಕೆಯ ಆಟವಾಡಿದರು. ನಿಧಾನವಾಗಿ ರನ್‌ ಗತಿಯನ್ನೂ ಹೆಚ್ಚಿಸಿ 5ನೇ ವಿಕೆಟ್ ಪಾಲುದಾರಿಕೆಯಲ್ಲಿ 113 ರನ್‌ಗಳ ಕಲೆಹಾಕಿದರು. ಇದರಿಂದಾಗಿ, ಪಾಕಿಸ್ತಾನಕ್ಕೆ ಸುಲಭ ತುತ್ತಾಗುವ ಅಪಾಯದಿಂದ ಭಾರತ ಪಾರಾಯಿತು.

ಇವರಿಬ್ಬರ ಆಟದ ಬಲದಿಂದ ಭಾರತ ತಂಡ 19 ಓವರ್‌ಗಳ ಅಂತ್ಯಕ್ಕೆ 4 ವಿಕೆಟ್‌ ನಷ್ಟಕ್ಕೆ 144 ರನ್ ಗಳಿಸಿತ್ತು. ಕೊನೇ ಓವರ್‌ನಲ್ಲಿ 16 ರನ್‌ ಬೇಕಿತ್ತು. ಆದರೆ, 37 ಎಸೆತಗಳಲ್ಲಿ 40 ರನ್‌ ಗಳಿಸಿದ್ದ ಪಾಂಡ್ಯ ಅಂತಿಮ ಓವರ್‌ನ ಮೊದಲ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು. ಕೊಹ್ಲಿ ಕೊನೆವರೆಗೂ ಹೋರಾಡಿ ಗೆಲುವು ತಂದುಕೊಟ್ಟರು.

ಅಂತಿಮ ಓವರ್ ಎಸೆದ ಮೊಹಮ್ಮದ್ ನವಾಜ್‌ ಎರಡು ವೈಡ್‌ ಮತ್ತು 1 ನೋಬಾಲ್‌ ಹಾಕಿದ್ದು ಭಾರತಕ್ಕೆ ವರವಾಯಿತು.

53 ಎಸೆತಗಳನ್ನು ಎದುರಿಸಿದ ಕೊಹ್ಲಿ 6 ಬೌಂಡರಿ ಮತ್ತು 4 ಸಿಕ್ಸರ್ ಸಹಿತ 82 ರನ್‌ ಬಾರಿಸಿದರು. ಮೊದಲ 50 ರನ್‌ ಗಳಿಸಲು 43 ಎಸೆತಗಳನ್ನು ತೆಗೆದುಕೊಂಡ ಅವರು, ನಂತರದ 32 ರನ್‌ ಅನ್ನು ಕೇವಲ 10 ಎಸೆತಗಳಲ್ಲೇ ಚಚ್ಚಿದರು.

ನ್ಯೂಸ್ ಬ್ಯುರೋ ಎಚ್ಚರಿಕೆ ಕನ್ನಡ ನ್ಯೂಸ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend