ಮೊಳಕಾಲ್ಮೂರು: ಸರ್ಕಾರಿ ನೌಕರರಿಗೆ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ.!

Listen to this article

ಚಿತ್ರದುರ್ಗ: ಮೊಳಕಾಲ್ಮೂರು ಇಂದು ತಾಲೂಕಿನಲ್ಲಿ ಕೆಲಸ ನಿರ್ವಹಿಸುತ್ತಿರುವ ಸರ್ಕಾರಿ ನೌಕರರಿಗೆ ಪ್ರತ್ಯೇಕವಾಗಿ ಕೋವಿಡ್ ಕೇರ್ ಸೆಂಟರ್ ಅನ್ನು ಚಿತ್ರದುರ್ಗ ಜಿಲ್ಲೆಯ ಸಂಸದರಾದ ಎ ನಾರಾಯಣಸ್ವಾಮಿ ಅವರು, ಉದ್ಘಾಟನೆ ಮಾಡಿದರು. ಇದೇ ವೇಳೆ ಚಿತ್ರದುರ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಕೆ ಮಂಜುನಾಥ್ ಮಾತನಾಡಿ, ಕೊರೋನಾ ಕರ್ತವ್ಯ ನಿರತರು ನೌಕರರು ಕೊರೋನಾ ಮಹಾಮಾರಿಗೆ ತುತ್ತಾಗಿದ್ದು, ಅವರ ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಎರಡು ನಿಮಿಷಗಳ ಕಾಲ ಮೌನಾಚರಣೆ ನಡೆಸಿದರು. ಸರ್ಕಾರಿ ನೌಕರರು ತಮ್ಮ ಹಾಗೂ ತಮ್ಮ ಕುಟುಂಬದ ರಕ್ಷಣೆ ಮಾಡಿಕೊಂಡು ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ, ಕೊರೋನಾ ರೋಗಕ್ಕೆ ತುತ್ತಾಗುವ ಸಂಭವವಿರುತ್ತದೆ. ನಿಟ್ಟಿನಲ್ಲಿ ಪ್ರತಿಯೊಬ್ಬ ಕೋವಿಡ್ ಕೇರ್ ಸೆಂಟರ್ ಇದ್ದರೆ, ಚಿಕಿತ್ಸೆ ಪಡೆಯಲು ಅನುಕೂಲವಾಗುತ್ತದೆ ಎಂದರು. ನಂತರ ತಹಶೀಲ್ದಾರ್ ಸುರೇಶ್ ಕುಮಾರ್ ಮಾತನಾಡಿ, ಸರ್ಕಾರಿ ನೌಕರರು ಪ್ರತ್ಯೇಕವಾಗಿ ಕೋವಿಡ್ ಸೆಂಟರನ್ನು ಪ್ರಾರಂಭಿಸಿ ರುವುದರಿಂದ, ಇದರ ಸದುಪಯೋಗ ಮಾಡಿಕೊಂಡು. ತಾಲೂಕ ಆಡಳಿತದೊಂದಿಗೆ ಕೊರೊನಾ ನಿಯಂತ್ರಣ ಕಾರ್ಯದಲ್ಲಿ ಕೈಜೋಡಿಸಬೇಕೆಂದು ತಿಳಿಸಿದರು. ಇದೇ ವೇಳೆ, ತಾಲೂಕು ಆರೋಗ್ಯ ಅಧಿಕಾರಿಗಳಾದ ಸುಧಾ, ಸಮಾಜ ಕಲ್ಯಾಣ ಅಧಿಕಾರಿ ಚಿದಾನಂದಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೀರಣ್ಣ, ಪ್ರಧಾನ ಕಾರ್ಯದರ್ಶಿ ಮಲ್ಲೇಶಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ತಿಪ್ಪೇಸ್ವಾಮಿ, ಕಾರ್ಯಕಾರಿ ಸಮಿತಿ ಸದಸ್ಯರು ಸೇರಿದಂತೆ, ಸರ್ಕಾರಿ ನೌಕರರು ಉಪಸ್ಥಿತರಿದ್ದರು..

ವರದಿ.ಮಂಜುನಾಥ್, ಎಚ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend