ಮೊಳಕಾಲ್ಮೂರು: ಡಾ” ಸಿದ್ದಲಿಂಗಯ್ಯ ಅವರ ಹೆಸರಿಡುವಂತೆ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಮನವಿ.!

Listen to this article

ಚಿತ್ರದುರ್ಗ: ಮೊಳಕಾಲ್ಮೂರು/ ಖ್ಯಾತ ಲೇಖಕ, ಕವಿ ಡಾ. ಸಿದ್ದಲಿಂಗಯ್ಯ ಅವರ ಸ್ಮರಣಾರ್ಥ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರತಿಷ್ಠಿತ ವೃತ್ತ ಅಥವಾ ಮೇಲ್ಸೇತುವೆಗೆ ಡಾ. ಸಿದ್ದಲಿಂಗಯ್ಯ ಅವರ ಹೆಸರನ್ನು ನಾಮಕರಣ ಮಾಡುವಂತೆ, ಮೊಳಕಾಲ್ಮೂರು ಕ್ಷೇತ್ರದ ಶಾಸಕರು ಹಾಗೂ ಸಮಾಜ ಕಲ್ಯಾಣ ಸಚಿವರಾದ ಬಿ ಶ್ರೀರಾಮುಲು ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಡಾ. ಸಿದ್ದಲಿಂಗಯ್ಯ ಅವರ ನಿಧನದಿಂದ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಸಿದ್ಧಾಂತ ಹಾಗೂ ಆದರ್ಶಗಳು ಸದಾ ಅನುಕರಣೀಯ. ಸಾಮಾಜಿಕ ಹಾಗೂ ಸಮಾನತೆಗಾಗಿ ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮೂಲಕ, ಖ್ಯಾತರಾಗಿದ್ದಾರೆ. ಅಲ್ಲದೆ, ಒಮ್ಮೆ ವಿಧಾನಪರಿಷತ್ ಸದಸ್ಯರಾಗಿ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಹಾಗೂ 80ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗುರುತರವಾದ ನಿರ್ಣಯಗಳನ್ನು ಕೈಗೊಂಡಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿ, ಡಾ. ಬಿ.ಆರ್. ಅಂಬೇಡ್ಕರ್ ಶತಮಾನೋತ್ಸವ ವಿಶೇಷ ಪ್ರಶಸ್ತಿ, ನಾಡೋಜಪ್ರಶಸ್ತಿ, ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಬಾಬು ಜಗಜೀವನ್ ರಾವ್ ಪ್ರಶಸ್ತಿ ಸೇರಿದಂತೆ, ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಇವರ ಈ ಅಪರಿಮಿತ ಸಾಹಿತ್ಯ, ಕೃಷಿ, ಜನ ಮಾನಸದಲ್ಲಿರುವ ಇವರ ಚಿಂತನೆಗಳು ಆದರ್ಶಗಳು ಶ್ಲಾಘನೀಯವಾಗಿದೆ. ಸಾಹಿತ್ಯ ಪ್ರೇಮಿಗಳಿಗೆ ಹಾಗೂ ಮುಂದಿನ ಪೀಳಿಗೆಗೆ ಅವರ ಆದರ್ಶಗಳು, ಸಿದ್ಧಾಂತಗಳು, ಪ್ರೇರಣೆ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಇವರ ಹೆಸರಿಡಲು ನಿರ್ದೇಶನ ನೀಡುವಂತೆ ಮುಖ್ಯಮಂತ್ರಿಗಳಿಗೆ ಬಿ. ಶ್ರೀರಾಮುಲು ಮನವಿ ಮಾಡಿದ್ದಾರೆ.

ವರದಿ. ಮಂಜುನಾಥ್, ಎಚ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend