ಮೊಳಕಾಲ್ಮೂರು: ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ; ಡಾ” ಮಂಜುನಾಥ್.!

Listen to this article

ಚಿತ್ರದುರ್ಗ: ಮೊಳಕಾಲ್ಮೂರು / ಇಡೀ ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ ಎಂದು ಭಾರತೀಯ ಜನತಾ ಪಾರ್ಟಿ ಮಂಡಲ ಅಧ್ಯಕ್ಷರಾದ ಡಾ. ಮಂಜುನಾಥ್ ಹೇಳಿದರು. (ಜೂ,21) ಇಂದು ಮೊಳಕಾಲ್ಮುರು ಪಟ್ಟಣದ ಸ್ವಕಳಸಾಳಿ ಸಮಾಜದ ಗುರುಪೀಠ ಅವರಣದಲ್ಲಿ, ನಡೆದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2014 ರಲ್ಲಿ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ, ನಮ್ಮ ಹೆಮ್ಮೆಯ ಪ್ರಧಾನಿಗಳಾದ ನರೇಂದ್ರ ಮೋದಿಯವರು ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಿ, ಯೋಗ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗಿದೆ ಎಂದು ಪ್ರತಿಪಾದಿಸಿದ ಹಿನ್ನೆಲೆಯಲ್ಲಿ,130ಕ್ಕೂ ಹೆಚ್ಚು ದೇಶಗಳು ಇಂದು ಯೋಗ ದಿನಾಚರಣೆಯನ್ನು ಆಚರಿಸುತ್ತಿವೆ ಎಂದರು. ಕೊರೋನಾ ಮಹಾಮಾರಿ ರೋಗಕ್ಕೆ ತುತ್ತಾದವರು ದಿನನಿತ್ಯಪ್ರಾಣಾಯಾಮ ಮಾಡುವ ಮೂಲಕ,ಶ್ವಾಸಕೋಶದ ತೊಂದರೆಯಿಂದ ಮುಕ್ತಿ ಹೊಂದಬಹುದು ಎಂದು ಹೇಳಿದರು. ಇಂದಿನಿಂದ ಪ್ರಧಾನಿಯವರು 18 ವರ್ಷದ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕಾ ಅಭಿಯಾನ ಪ್ರಾರಂಭಿಸಿದ್ದಾರೆ. ಕೋವಿಡ್ ಲಸಿಕೆಯಿಂದ ಯಾವುದೇ ತೊಂದರೆಯಾಗುವುದಿಲ್ಲ. ವದಂತಿಗಳಿಗೆ ಕಿವಿಗೊಡದೆ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು. ಪ್ರತಿ ಗ್ರಾಮಗಳಲ್ಲಿ ಹಾಗೂ ಬೂತ್ ಮಟ್ಟದಲ್ಲಿ ಎಲ್ಲರೂ ಲಸಿಕಾ ಅಭಿಯಾನಕ್ಕೆ ಕೈಜೋಡಿಸಿ, ಕೊರೋನಾ ಮಹಾಮಾರಿಯನ್ನು ತಡೆಗಟ್ಟಲು ಸಹಕಾರ ನೀಡಬೇಕು ಎಂದು ಕರೆ ನೀಡಿದರು. ಇದೇ ವೇಳೆ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಪಿ ಲಕ್ಷ್ಮಣ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ರೂಪ ವಿನಯ್ ಕುಮಾರ್, ಮಂಡಲ ಪ್ರ.ಕಾರ್ಯದರ್ಶಿ ಪ್ರಭಾಕರ, ಎಸ್ಸಿ ಮೋರ್ಚಾ ಅಧ್ಯಕ್ಷ ಸಿದ್ದಾರ್ಧ, ನಗರ ಘಟಕದ ಅಧ್ಯಕ್ಷ ಕಿರಣ್ ಗಾಯಕ್ವಾಡ್ , ಮುಖಂಡರಾದ ಸುರೇಶ್ ಕೆ ಜಿ, ನಾಗರಾಜ್ , ಪೃದ್ವಿರಾಜ್, ಪ್ರವೀಣ್ ಬೋಳದೆ, ದಿಲೀಪ್, ಯೋಗ ಶಿಕ್ಷಕರಾದ ಶಿವಕುಮಾರ್ ಉಪಸ್ಥಿತರಿದ್ದರು..

ವರದಿ. ಮಂಜುನಾಥ್, ಎಚ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend