ನಿರ್ಗತಿಕರಿಗೆ ನಿವೇಶನ ವಿವಿಧೆಡೆ ಬೇಡಿಕೆಗಳಿಗೆ ಒತ್ತಾಯಿಸಿ ತಾಲೂಕು ಎದುರುಗಡೆ ಧರಣಿ ಸತ್ಯಾಗ್ರಹ..!!

Listen to this article

ವರದಿ. ಮಂಜುನಾಥ್, ಎಚ್

ಚಿತ್ರದುರ್ಗ: ಮೊಳಕಾಲ್ಮುರು ಪಟ್ಟಣದ ವಿವಿಧ ಬೇಡಿಕೆಗೆ ಆಗ್ರಹಿಸಿ ಸ್ತ್ರೀ ಸುರಕ್ಷತಾ ಮತ್ತು ಪಟ್ಟಣ ಸ್ವಯಂ ಉದ್ಯೋಗ ಸೇವಾ ಸಂಸ್ಥೆ, ತಾಲೂಕು ಅಭಿವೃದ್ಧಿ ಹಾಗೂ ಜನಜಾಗೃತಿ ಭ್ರಷ್ಟಾಚಾರ ವಿರೋಧಿ ನಾಗರಿಕ ಹೋರಾಟ ವೇದಿಕೆ, ವಾಲ್ಮೀಕಿ, ಬೇಡ, ಗಿರಿಜನ ಬುಡಕಟ್ಟು, ನಾಯಕರ ಸಂಘದ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ಇಲ್ಲಿನ ತಾಲೂಕು ಕಚೇರಿ ಆವರಣದಲ್ಲಿ ಮನವಿ ಸಲ್ಲಿಸಿದ ಕಾರ್ಯಕರ್ತರು ಪಟ್ಟಣದಲ್ಲಿ ಸಾವಿರಾರು ಕುಟುಂಬಗಳು ಇಂದಿಗೂ ನಿವೇಶನವಿಲ್ಲದೆ ಬಾಡಿಗೆ ಕಟ್ಟಡದಲ್ಲಿ ವಾಸ ಮಾಡುತ್ತಿದ್ದಾರೆ. ಬಹುತೇಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಸಮುದಾಯಗಳೇ ಹೆಚ್ಚಾಗಿ ವಾಸಿ ಸುತ್ತಿವೆ. ನಿವೇಶನ ರಹಿತರನ್ನು ಪಟ್ಟಿ ಮಾಡಿ ವರ್ಷಗಳೇ ಕಳೆ ದರೂ, ನಿವೇಶನ ರಹಿತರಿಗೆ ನಿವೇಶನ ನೀಡದೆ ಸಂಬಂಧಿಸಿದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದರು. ವಸತಿ ಸೌಕರ್ಯವಿಲ್ಲದೆ ಒಂದೇ ಮನೆಯಲ್ಲಿ ಐದಾರು ಕುಟುಂಬಗಳು ವಾಸಿಸುತ್ತಿದ್ದು, ನಿವೇಶನ ನೀಡುವಂತೆ ಅನೇಕ ಬಾರಿ ಒತ್ತಾಯ ಮಾಡಿದರೂ ಪ್ರಯೋಜನವಾಗಿಲ್ಲ, ಪಟ್ಟಣಕ್ಕೆ ಅಂಟಿಕೊಂಡಂತಿರುವ ಸರ್ಕಾರಿ ಜಮೀನನ್ನು ನಿವೇಶನಗಳನ್ನಾಗಿ ಹಂಚಿಕೆ ಮಾಡಬೇಕು. ಇಲ್ಲದಿದ್ದರೆ ಪಟ್ಟಣಕ್ಕೆ ಅಂಚಿಕೊಂಡಂತಿರುವ ಖಾಸಗಿ ಜಮೀನನ್ನು ಖರೀದಿಸಿ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಬೇಕು. ಜತೆಗೆ ಎನ್ಎಂಎಸ್ ಬಡಾವಣೆಯಲ್ಲಿ ಅಕ್ರಮ ವಲಸಿಗರಿಗೆ ನೀಡಿರುವ ಹಕ್ಕು ಪತ್ರಗಳನ್ನು ರದ್ದುಪಡಿಸಬೇಕು ಎಂದು ಹೇಳಿದರು.
ಪಟ್ಟಣದ ಕೋತಲಗೊಂದಿ ಕೆರೆಯನ್ನು ಸಮರ್ಪ ಕವಾಗಿ ನಿರ್ವಹಣೆ ಮಾಡಿ ನೇಲ್ಲೂಟೆಯಲ್ಲಿ ಬ್ಯಾರೇಜ್ ನಿರ್ಮಿಸಿ ಪಟ್ಟಣಕ್ಕೆ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಒದಗಿಸಬೇಕು. ಜತೆಗೆ ಪಟ್ಟಣದಲ್ಲಿ ಕೆಎಸ್ ಆರ್‌ಟಿಸಿ ಬಸ್‌ಡಿಪೋ ನಿರ್ಮಿಸಬೇಕು. ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ಅನುಕೂಲವಾಗುವಂತಹ
ಕಾಲೇಜುಗಳನ್ನು ಪ್ರಾರಂಭಿಸ ಬೇಕು. ದೇವಸಮುದ್ರ ಹೋಬಳಿಗೆ ರಾಂಪುರವನ್ನು ಕೇಂದ್ರ ಸ್ಥಾನವನ್ನಾಗಿಸಿ ಮೂಲಸೌಕರ್ಯ ಒದಗಿಸಬೇಕು. ಸಚಿವ ಶ್ರೀರಾಮುಲು ಕ್ಷೇತ್ರಕ್ಕೆ ನೂರಾರು ಕೋಟಿರು. ಗಳ ಅನುದಾನ ತಂದು ಅಭಿವೃದ್ದಿಪಡಿಸಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಿದರು. ಸ್ತ್ರೀ ಸುರಕ್ಷತಾ ಸಂಸ್ಥೆಯ ಅಧ್ಯಕ್ಷೆ ಸರಸ್ವತಿ, ವಕೀಲ ಮಂಜುನಾಥ ಸ್ವಾಮಿ ನಾಯಕ ಮತ್ತಿತರರಿದ್ದರು.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend