ಮೊಳಕಾಲ್ಮೂರು ತಾಲ್ಲೂಕಿನ ಮಹಿಳೆಯರಿಗೆ ಗುಡ್ ನ್ಯೂಸ್, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ…

Listen to this article

ವರದಿ.ಮಂಜುನಾಥ್, ಎಚ್

ಚಿತ್ರದುರ್ಗ: ಮೊಳಕಾಲ್ಮೂರು ಶಿಶು ಅಭಿವೃಧ್ಧಿ ಯೋಜನೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 26 ಕೊನೆಯ ದಿನವಾಗಿದೆ. 1 ಅಂಗನವಾಡಿ ಕಾರ್ಯಕರ್ತೆ ಹಾಗೂ 15 ಸಹಾಯಕಿಯರ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಜಿ ಪ್ರಕ್ರಿಯೆಯು ಜನವರಿ 27 ರಿಂದ ಪ್ರಾರಂಭವಾಗಿದ್ದು, ಇಲಾಖೆಯ ವೆಬ್‍ಸೈಟ್  www.anganwadirecruit.kar.nic.in  ಮೂಲಕ ಅರ್ಜಿ ಸಲಿಸಬಹುದು. ಅಂಗನವಾಡಿ ಸಹಾಯಕಿಯರ ಹುದ್ದೆ ಖಾಲಿಯಿರುವ ಗ್ರಾಮ ಮತ್ತು ಅಂಗನವಾಡಿ ಕೇಂದ್ರದ ಹಾಗೂ ಮೀಸಲಾತಿ ವಿವರ ಇಂತಿದೆ.
ಹಿರೇಕೆರೆಹಳ್ಳಿ ಗ್ರಾಮ ಪಂಚಾಯಿತಿಯ ತರವಾರಹಳ್ಳಿ- ಪರಿಶಿಷ್ಟ ಪಂಗಡ, ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಅಂಗನವಾಡಿ ಸಹಾಯಕಿಯರ ಹುದ್ದೆ ಖಾಲಿಯಿರುವ ಗ್ರಾಮ ಮತ್ತು ಅಂಗನವಾಡಿ ಕೇಂದ್ರದ ಹಾಗೂ ಮೀಸಲಾತಿ ವಿವರ ಇಂತಿದೆ. ಅಶೋಕ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ   ಆಶೋಕ ಸಿದ್ದಾಪುರ-ಸಿ-ಎಸ್‍ಸಿ, ಚಿಕ್ಕೆನಹಳ್ಳಿ-ಎಸ್‍ಸಿ, ರೊಪ್ಪ-ಬಿ-ಇತರೆ, ಚಿಕ್ಕೇರಹಳ್ಳಿ-ಎ-ಪರಿಶಿಷ್ಟ ಪಂಗಡ, ಹಾನಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಮ್ಮನಪಟ್ಟಿ-ಪರಿಶಿಷ್ಟ ಪಂಗಡ, ಜೆ.ಬಿ ಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸದಡಗೂರು-ಬಿ-ಇತರೆ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಂಡ್ಲಹಳ್ಳಿ-ಸಿ-ಎಸ್‍ಸಿ, ನಾಗಸಮುದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗಸಮುದ್ರ-ಎ-ಪರಿಶಿಷ್ಟ ಪಂಗಡ, ನಾಗಸಮುದ್ರ-ಡಿ-ಪರಿಶಿಷ್ಟ ಪಂಗಡ, ರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಂಪುರ-ಎಸ್‍ಸಿ, ರಾಯಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯರ್ಜೇನಹಳ್ಳಿ-ಎಸ್‍ಸಿ, ತಮ್ಮೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿರೇಕೊಳ-ಇತರೆ, ತುಮಕೂರ್ಲಹಳ್ಳಿ-ಎ-ಪರಿಶಿಷ್ಟ ಪಂಗಡ, ವಾರ್ಡ್-03ರ ಧವಳಪ್ಪನಬೀದಿ-ಇತರೆ, ಮತ್ತು ಗಿರಿಜಯ್ಯನಹಟ್ಟಿ-ಇತರೆ ಸೇರಿದಂತೆ ಒಟ್ಟು 15 ಅಂಗನವಾಡಿ ಸಹಾಯಕಿಯರ ಹುದ್ದೆ ಖಾಲಿಯಿದ್ದು ಆರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಸ್ತ್ರೀ ಶಕ್ತಿ ಭವನ, ಮೊಳಕಾಲ್ಮೂರು ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಮೊಳಕಾಲ್ಮೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend