ಚಿತ್ರದುರ್ಗ: ಮೊಳಕಾಲೂರು: ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ನಡೆಯುವ ವಾರದ ಸಂತೆಯನ್ನು ರದ್ದುಪಡಿಸಲಾಗಿತ್ತು. ಆದರೂ ಬುಧವಾರ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಸಾಮಾಜಿಕ ಅಂತರವಿಲ್ಲದೆ ತರಕಾರಿ ಕೊಳ್ಳಲು ಜನರು ಮುಗಿ ಬಿದ್ದಿದ್ದರು. ಬೆಳಿಗ್ಗೆಯಿಂದಲೇ ಬಹುತೇಕ ವ್ಯಾಪಾರಸ್ಥರು ಬಸ್ ನಿಲ್ದಾಣದ ಆವರಣ ಸೇರಿದಂತೆ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ತರಕಾರಿ ಮಾರಾಟ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಪಟ್ಟಣ ಹಾಗೂ ತಾಲೂಕಿನ ನಾನಾ ಗ್ರಾಮಗಳಿಂದ ಬಂದಿದ್ದ ಜನರು ತರಕಾರಿ ಕೊಳ್ಳಲು ಮುಗಿಬಿದ್ದರು. ತರಕಾರಿ ಕೊಳ್ಳುವ ಆತುರದಲ್ಲಿ ಮಾಸ್ಯೆಗಳನ್ನು ಹಾಕಿಕೊಳ್ಳದೆ ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಗುಂಪು
ಗುಂಪಾಗಿ ನಿಂತಿರುವ ದೃಶ್ಯ..
ವರದಿ. ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030